ಹಾಸನ | ಅಂಕಗಳಿಸುವ ಯಂತ್ರಗಳಂತೆ ಶಿಕ್ಷಣ ಕಲಿತರೆ ಸಾಲದು: ಶಿಕ್ಷಣಾಧಿಕಾರಿ ಕಾಂತರಾಜು

Date:

ಮಕ್ಕಳು ಕೇವಲ ಅಂಕಗಳಿಸುವ ಯಂತ್ರಗಳಂತೆ ಶಿಕ್ಷಣ ಕಲಿತರೆ ಸಾಲದು, ಸಮಗ್ರವಾಗಿ ಶೈಕ್ಷಣಿಕ, ಸಾಮಾಜಿಕ ಸೇರಿದಂತೆ ಎಲ್ಲ ರಂಗಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು ಒಂದು ಉತ್ತಮ ಶಿಕ್ಷಣ ಕಲಿಯಬೇಕು ಎಂದು ಹಾಸನ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಕಾಂತರಾಜು ತಿಳಿಸಿದರು.

- Advertisement -

ಹಾಸನ ನಗರದ 80‌ ಫೀಟ್ ರಸ್ತೆ ಬಳಿ ಇರುವ ತಾಜ್ ಕನ್ವೆನ್ಷನ್ ಹಾಲ್‌ನಲ್ಲಿ ಬೆಂಗಳೂರಿನ ಕರ್ನಾಟಕ ಉರ್ದು ಅಕಾಡೆಮಿ, ಹಾಸನ ಜಿಲ್ಲಾ ಮಟ್ಟದ ಸರ್ಕಾರಿ ಹಾಗೂ ಸರ್ಕಾರೇತರ ಉರ್ದು ಶಾಲೆಗಳ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅಖಿಲ ಭಾರತ ಮಟ್ಟದ ಕವಿಗೋಷ್ಠಿ ಮುಶಾಯಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಶಿಕ್ಷಣದ ಜತೆಗೆ ಸಂಸ್ಕಾರವನ್ನೂ ಕೂಡ ಕಲಿಯಬೇಕು. ಸಂಸ್ಕಾರದ ನಿಟ್ಟಿನಲ್ಲಿ ಮಕ್ಕಳು ಓದುವ ಅಭ್ಯಾಸ ಇಂದು ಕಡಿಮೆಯಾಗುತ್ತಿದೆ. ಪ್ರಾಪಂಚಿಕ ವಿಷಯಗಳ ಬಗ್ಗೆ ಅರಿವು ಹೊಂದಬೇಕು. ಸಮಾನತೆ, ಭ್ರಾತೃತ್ವದ ಜತೆಗೆ ಸಮಾಜದಲ್ಲಿ ಶಿಕ್ಷಣದಿಂದ ಉನ್ನತವಾದ ಹುದ್ದೆಗಳನ್ನು ಅಲಂಕರಿಸಿ ಸಮಾಜಕ್ಕೆ ಕೊಡುಗೆ ನೀಡಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಜನಪ್ರಿಯ ಆಸ್ಪತ್ರೆಯ ಮುಖ್ಯಸ್ಥ ಅಬ್ದುಲ್ ಬಶೀರ್ ಮಾತನಾಡಿ, “ಉರ್ದು ಕವಿಗೋಷ್ಠಿ ಕಾರ್ಯಕ್ರಮ ಆಯೋಜನೆಗೊಂಡಿರುವುದು ತುಂಬಾ ಸಂತೋಷದ ವಿಷಯ. ಹಾಗೆಯೇ ಮಕ್ಕಳು ಈ ಕಾರ್ಯಕ್ರಮದಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಬೇಕು ಮತ್ತು ಓದುವ ಅಭ್ಯಾಸವನ್ನು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ʼತಿಂಡಿಗೆ ಬಂದ ತುಂಡೇರಾಯʼ ನಾಟಕ ಪ್ರದರ್ಶನ

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬೆಂಗಳೂರಿನ ಕರ್ನಾಟಕ ಉರ್ದು ಅಕಾಡೆಮಿ ಸಂಯೋಜಕ ಮತ್ತು ಸದಸ್ಯ ಡಾ. ಅಕ್ಟರ್ ಸೈಯಿದಾ ಕಾನಂ ಮಾತನಾಡಿ, “ಈ ರೀತಿಯ ಕಾರ್ಯಕ್ರಮಗಳನ್ನು ಜಿಲ್ಲಾಮಟ್ಟದಲ್ಲಿ ಆಯೋಜನೆ ಮಾಡಿರುವುದು ನಮಗೆ ತುಂಬಾ ಸಂತೋಷ ತಂದಿದೆ. ಇಂತಹ ಕಾರ್ಯಕ್ರಮಗಳಿಂದ ಮಕ್ಕಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಉಪಯುಕ್ತವಾಗಿದೆ. ಈ ನಿಟ್ಟಿನಲ್ಲಿ ಮಕ್ಕಳು ಕಾರ್ಯಕ್ರಮದ ಸಂಪೂರ್ಣ ಉಪಯೋಗ ಪಡೆದುಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು” ಎಂದು ಕೋರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...