ಆನೆಗೆ ಅರವಳಿಕೆ ನೀಡಲು ತೆರಳಿದ್ದ ಅರಣ್ಯ ಇಲಾಖೆ ಶಾರ್ಪ್ ಶೂಟರ್ ಒಬ್ಬರು ಆನೆ ದಾಳಿಗೆ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಗಾಯಗೊಂಡಿದ್ದ ಭೀಮ ಹೆಸರಿನ ಕಾಡಾನೆಗೆ ಚಿಕಿತ್ಸೆ ನೀಡುವ ಸಲುವಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳು ತೆರಳಿದ್ದರು. ಈ ವೇಳೆ, ಆನೆಗೆ ಶಾರ್ಪ್ ಶೂಟ್ ಮುಖಾಂತರ ಅರವಳಿಕೆ ನೀಡಲು ಶಾರ್ಪ್ ಶೂಟರ್ ವೆಂಕಟೇಶ್ ಮುಂದಾಗಿದ್ದಾರೆ. ಆದರೆ, ಅವರ ಮೇಲೆಯೇ ಆನೆ ದಾಳಿ ನಡೆಸಿದೆ.
ಈ ಸುದ್ದಿ ಓದಿದ್ದೀರಾ? ಮಂಡ್ಯ | ತಮಿಳುನಾಡಿಗೆ ನೀರು ಬಿಡದಂತೆ ಆಹೋರಾತ್ರಿ ಧರಣಿ
ಆನೆ ತುಳಿತಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ್ ಅವರನ್ನು ಚಿಕಿತ್ಸೆಗಾಗಿ ಹಾಸನದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.