ಹಾಸನ | ಆನೆ ದಾಳಿ; ಯುವಕ ಪ್ರಾಣಾಪಾಯದಿಂದ ಪಾರು

Date:

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹೊಲ್ಲಹಳ್ಳಿ ಗ್ರಾಮದಲ್ಲಿ ಆನೆ ದಾಳಿ ಮಾಡಿದ್ದು, ಯುವಕನೋರ್ವ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

ಗ್ರಾಮದ ಮಲ್ಲಿಕಾರ್ಜುನ (26) ಮಂಗಳವಾರ ಬೆಳಿಗ್ಗೆ ಮನೆಯ ಹತ್ತಿರವಿರುವ ಜೋಳದ ಹೊಲದಲ್ಲಿ ಹಸುಗಳಿಗೆ ಮೇವು ತರಲು ಹೋಗಿದ್ದಾಗ, ದಿಢೀರನೇ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಆ ಸಮಯದಲ್ಲಿ ಗ್ರಾಮಸ್ಥರು ಸಿಡಿಸಿದ ಪಟಾಕಿ ಸದ್ದಿನಿಂದ ಗಾಬರಿಗೊಂಡ ಕಾಡಾನೆ ತನ್ನನ್ನು ಕಂಡು ಓಡುತ್ತಿದ್ದ ಯುವಕನನ್ನು ಬೆನ್ನಟ್ಟಿ ದಾಳಿ ಮಾಡಿದ್ದರಿಂದ ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಯುವಕ ಕೆಳಗೆ ಬಿದ್ದ ಕಾರಣ ಆತನನ್ನು ಆನೆ ಕಾಲಿನಿಂದ ಯುವಕನ ಎದೆಭಾಗಕ್ಕೆ ತುಳಿದಿದ್ದು, ತಲೆಗೆ ಗಾಯವಾಗಿದೆ. ಒಂದು ಕೈ ಮೂಳೆ ಮುರಿದಿದೆ. ಚಿಕಿತ್ಸೆಗಾಗಿ ಆತನನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನೆ ಕಂಡ ಸ್ಥಳೀಯರು ಗಾಬರಿಯಿಂದ ಕೂಗಾಡಿದ್ದರಿಂದ ಆನೆ ಜನರತ್ತ ಧಾವಿಸಲು ಮುಂದಾಗಿದೆ. ಗ್ರಾಮಸ್ಥರು ಕೂಡಲೇ ಪಟಾಕಿ ಸಿಡಿಸಿ ಬೆದರಿಸಿದ್ದರಿಂದ ಆನೆ ಅಲ್ಲಿಂದ ವಾಪಸಾಗಿದೆ. ಯುವಕನ ಪ್ರಾಣ ಉಳಿದಿದೆ.‌

ಈ ಸುದ್ದಿ ಓದಿದ್ದೀರಾ? ಹಾಸನ | ಅಕ್ರಮ ಒತ್ತುವರಿ ನೆಪದಲ್ಲಿ ತೆರವು; ಬೆಳಂ ಬೆಳಿಗ್ಗೆ ಕಾರ್ಯಾಚರಣೆ ಆರಂಭಿಸಿದ ನಗರಸಭೆ

ಸ್ಥಳೀಯರು ಕೂಡಲೇ ಆತನನ್ನು ಚಿಕಿತ್ಸೆಗೆಂದು ಆಲೂರು ಸರ್ಕಾರಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಹಿಮ್ಸ್ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...