ಹಾಸನ | ಪಿಡಿಒ ಹುದ್ದೆಗೆ ಪರೀಕ್ಷೆ; ಪರೀಕ್ಷಾರ್ಥಿಗಳ ಕೈ ತೋಳಿನ ಬಟ್ಟೆ ಕತ್ತರಿಸಿದ ಅಧಿಕಾರಿಗಳು

Date:

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಹುದ್ದೆಗೆ ಪರೀಕ್ಷೆ ಇರುವುದರಿಂದ ಪರೀಕ್ಷಾರ್ಥಿಗಳು ಒಳಗೆ ಪ್ರವೇಶ ಮಾಡುವ ಮೊದಲು ಅಧಿಕಾರಿಗಳು ಪರೀಕ್ಷಾರ್ಥಿಗಳ ಕೈ ತೋಳಿನ ಬಟ್ಟೆಯನ್ನು ಕತ್ತರಿಸಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ.

- Advertisement -

ಹಾಸನ ನಗರದ ಎಲ್ ವಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಂದು ಪರೀಕ್ಷೆಗೆ ಬಂದ ಕೆಲ ಮಹಿಳಾ ಅಭ್ಯರ್ಥಿಗಳು ತುಂಬುತೋಳಿನ ಬಟ್ಟೆ ಧರಿಸಿದ್ದರು. ಪರೀಕ್ಷಾ ಕೇಂದ್ರದ ಅಧಿಕಾರಿಗಳು, “ಹಾಲ್ ಟಿಕೆಟ್‌ನಲ್ಲಿ ವಸ್ತ್ರಸಂಹಿತೆಯ ನಿಯಮಗಳನ್ನು ವಿವರಿಸಲಾಗಿದ್ದು, ಅವುಗಳನ್ನು ಉಲ್ಲಂಘಿಸಿದ್ದೀರಿ” ಎಂದು ಹೇಳಿದ್ದು, ಅರ್ಧ ತೋಳಿನವರೆಗೆ ಬಟ್ಟೆ ಕತ್ತರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದರು. ಈ ವೇಳೆ ವಸ್ತ್ರಸಂಹಿತೆ ನಿಯಮದ ಕಟ್ಟುನಿಟ್ಟು ವಾದ-ವಿವಾದಕ್ಕೆ ಕಾರಣವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ವೇಳೆ ಅಧಿಕಾರಿಗಳು ಮತ್ತು ಮಹಿಳಾ ಪರೀಕ್ಷಾರ್ಥಿಗಳ ನಡುವೆ ವಾಗ್ವಾದವೂ ನಡೆದಿದ್ದು, “ನಮ್ಮ ಕರ್ತವ್ಯ ನಾವು ಮಾಡಲೇಬೇಕು” ಎಂದು ಅಧಿಕಾರಿಗಳು ಸ್ಪಷ್ಟ ನಿಲುವು ಪ್ರದರ್ಶಿಸಿದರು. ಅರ್ಧ ತೋಳಿನವರೆಗೂ ಬಟ್ಟೆ ಕತ್ತರಿಸಿದ ನಂತರ ಪರೀಕ್ಷಾ ಕೇಂದ್ರದೊಳಗೆ ತೆರಳುವಂತೆ ಅಧಿಕಾರಿಗಳು ತಿಳಿಸಿದರು.

ಇದನ್ನೂ ಓದಿದ್ದೀರಾ?ಹಾಸನ | ದೀನ ದಲಿತರು, ಎಲ್ಲ ವರ್ಗದ ಮಹಿಳೆಯರಿಗೆ ಸ್ವಾಭಿಮಾನದ ಬದುಕು ಕಲ್ಪಿಸಿದವರೇ ಅಂಬೇಡ್ಕರ್: ಶಾಸಕ ಸ್ವರೂಪ್

ಈ ವಿಚಾರದಿಂದ ಹಲವು ಪರೀಕ್ಷಾರ್ಥಿಗಳು ಬೇಸರ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...