ರೈತರೊಬ್ಬರು ಆಯತಪ್ಪಿ ಹೊಳೆಗೆ ಬಿದ್ದು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿಯ ಕರಗೂರು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಕರಗೂರು ಗ್ರಾಮದ ಪ್ರಕಾಶ್ (65) ಎಂದು ಗುರುತಿಸಲಾಗಿದೆ. ದನಕರುಗಳನ್ನು ಕಟ್ಟಲು ಹೊರಟಿದ್ದ ಪ್ರಕಾಶ್, ಕಾಲುಸಂಕದಿಂದ ಜಾರಿ ಕರಗೂರು ಹೊಳೆಯಲ್ಲಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿಗಳು ಲಭ್ಯವಾಗಿವೆ.
ಘಟನೆಯ ಮಾಹಿತಿ ಪಡೆದ ಅಗ್ನಿಶಾಮಕದಳದ ಸಿಬ್ಬಂದಿ ಶವಕ್ಕಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಈ ನಡುವೆ ಸ್ಥಳೀಯ ಯಸಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಹಾಸನ | ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಈ ಕುರಿತು ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.