ಹಾಸನ | ಖಾರಿಫ್ ಬೆಳೆಗಳಿಗೆ ಮಾತ್ರ ಹೇಮಾವತಿ ನಾಲೆಗಳ ನೀರು ಬಳಸಿ: ರೈತರಿಗೆ ಸೂಚನೆ

Date:

ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ, ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಕೈಗೊಂಡ ತೀರ್ಮಾನದ ಮೇರೆಗೆ ಹೇಮಾವತಿ ಜಲಾಶಯದಿಂದ 2025-26ನೇ ಸಾಲಿಗೆ ಖಾರಿಫ್ ಅವಧಿಯ ಬೆಳೆಗಳಿಗೆ ನೀರನ್ನು ಸರಬರಾಜು ಮಾಡಲಾಗುತ್ತಿದೆ ಎಂದು ಚನ್ನರಾಯಪಟ್ಟಣ ಹೇಮಾವತಿ ನಾಲಾ ವೃತ್ತದ ಸೂಪರೀಟೆಂಡಿಂಗ್ ಇಂಜಿನಿಯರ್ ತಿಳಿಸಿದ್ದಾರೆ.

- Advertisement -

ಅದರನ್ವಯ, ಜು.16 ರಿಂದ ನ.30ರವರೆಗೆ ಹೇಮಾವತಿ ಎಡದಂಡ ನಾಲೆ ಹಾಗೂ ನದಿ ಅಣೆಕಟ್ಟು ನಾಲೆಗಳಾದ ಶ್ರೀರಾಮದೇವರ ಉತ್ತರ ನಾಲೆ. ಹೇಮಗಿರಿ ನಾಲೆ, ಅಕ್ಕಿಹೆಬ್ಬಾಳು ನಾಲೆ, ಮಂದಗೆರೆ ಎಡದಂಡೆ ಮತ್ತು ಬಲದಂಡೆ ನಾಲೆಗಳಲ್ಲಿ ಈ ಕೆಳಕಂಡಂತೆ ಖುಷ್ಕಿ ಹಾಗೂ ಭತ್ತದ ಬೆಳೆಗಾಗಿ ನೀರನ್ನು ಹರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮೇಲ್ಕಂಡ ನೀರಿನ ನಿಯಂತ್ರಣವನ್ನು ಹೇಮಾವತಿ ಜಲಾಶಯದಲ್ಲಿ ಇರುವ ನೀರಿನ ಶೇಖರಣೆ ಮತ್ತು ಮಳೆಯನ್ನು ಆಧರಿಸಿ, ಜಲಾಶಯಕ್ಕೆ ಹರಿದು ಬರಬಹುದಾದ ಪರಿಮಾಣವನ್ನು ಅಂದಾಜು ಮಾಡಲಾಗಿದ್ದು, ಇಂತಹ ನಿಯಂತ್ರಣ ಪ್ರಾಕೃತಿಕ ಅಥವಾ ನೈಸರ್ಗಿಕ ವ್ಯತ್ಯಾಸದಿಂದ ನೀರಿನ ಕೊರತೆ ಉಂಟಾಗಿ ಬೆಳೆ ನಷ್ಟವಾದಲ್ಲಿ ಇಲಾಖೆಯವರು ಜವಾಬ್ದಾರರಲ್ಲ ಹಾಗೂ ರೈತ ಬಾಂಧವರಿಗೆ ಇದರಿಂದ ಯಾವ ಪರಿಹಾರ ಕೇಳುವ ಹಕ್ಕೂ ಇರುವುದಿಲ್ಲ ಎಂದೂ ತಿಳಿಸಿದ್ದಾರೆ.

ನೀರಿನ ನಿಯಂತ್ರಣ ಸೌಲಭ್ಯವನ್ನು ರೈತರು ಕೃಷಿ ಅಧಿಕಾರಿಗಳ ಸಲಹೆ ಪಡೆದು ಸೂಕ್ತ ಬೆಳೆಗಳನ್ನು ಅಳವಡಿಸಿ ಸದುಪಯೋಗ ಪಡೆಯಬೇಕೆಂದು ತಿಳಿಸಿದ್ದಾರೆ. ರೈತ ಬಾಂಧವರು ನಿಗದಿತ ಬೆಳೆಯನ್ನೇ ಬೆಳೆಯತಕ್ಕದ್ದು, ತಿಳಿಸಿರುವ ಬೆಳೆಗಳಿಗೆ ವಿರುದ್ಧವಾಗಿ ಬೇರೆ ಬೆಳೆ ಬೆಳೆದಲ್ಲಿ ರ್ನಾಟಕ ನೀರಾವರಿ ಕಾಯ್ದೆಯ ಹಾಗೂ ಚಾಲ್ತಿಯಲ್ಲಿರುವ ನಿಯಮಾವಳಿಗಳ ಪ್ರಕಾರ ದಂಡ ಕರವನ್ನು ವಿಧಿಸಲಾಗುವುದು ಹಾಗೂ ಆಗಬಹುದಾದ ನೀರಿನ ಕೊರತೆ ಮತ್ತು ಬೆಳೆ ನಷ್ಕಕ್ಕೆ ರೈತರೇ ಜವಾಬ್ದಾರರಾಗುತ್ತಾರೆ ಎಂದು ಇಂಜಿನಿಯರ್ ಎಚ್ಚರಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಹಾಸನ | ಜಿಲ್ಲೆಯಲ್ಲಿ ಹೆಚ್ಚಾದ ಹಠಾತ್ ಸಾವು: ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಒತ್ತಾಯಿಸಿ ದುಂಡು ಮೇಜಿನ ಸಭೆ

ವಿವಿಧ ವಿತರಣಾ ನಾಲೆಗಳಲ್ಲಿ ನೀರು ಬಿಡುವ ಮತ್ತು ನಿಲ್ಲಿಸುವ ಅವಧಿಯ ದಿನಾಂಕವನ್ನು ಆಯಾ ವಿಭಾಗಕ್ಕೆ ಸಂಬಂಧಿಸಿದಂತೆ ಎಕ್ಸಿಕ್ಯುಟಿವ್ ಇಂಜಿನಿಯರ್‌ರುಗಳು ಪ್ರತ್ಯೇಕವಾಗಿ ಪ್ರಕಟಣೆ ಹೊರಡಿಸಿ ಅಚ್ಚುಕಟ್ಟು ಪ್ರದೇಶದ ಗ್ರಾಮ ಪಂಚಾಯಿತಿಗಳಿಗೆ ಹಾಗೂ ರೈತ ಬಾಂಧವರಿಗೆ ತಲುಪಿಸಿ ಸೂಕ್ತ ತಿಳುವಳಿಕೆ ನೀಡುವುದು. ನೀರಾವರಿಗೆ ಸಂಬಂಧಪಟ್ಟ ವಿತರಣಾ ನಾಲಾವಾರು, ಗ್ರಾಮವಾರು, ಸರ್ವೆ ನಂಬರು, ಮುಂತಾದ ಮಾಹಿತಿಗೆ ಸಂಬಂಧಿಸಿದಂತೆ ವಿಭಾಗ ಹಾಗೂ ಉಪ ವಿಭಾಗ ಕಚೇರಿಗಳಲ್ಲಿ ಪಡೆಯಬಹುದು. ನೀರನ್ನು ನಿಲ್ಲಿಸುವ ಅವಧಿಯನ್ನು ಯಾವುದೇ ಸಂದರ್ಭದಲ್ಲಿ ಅಥವಾ ಯಾವುದೇ ಕಾರಣಗಳಿಗಾಗಿಯೂ ಮುಂದುವರೆಸಲಾಗುವುದಿಲ್ಲ ಎಂದು ಚನ್ನರಾಯಪಟ್ಟಣ ಹೇಮಾವತಿ ನಾಲಾ ವೃತ್ತದ ಸೂಪರೀಟೆಂಡಿಂಗ್ ಇಂಜಿನಿಯರ್ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...