ಹಾಸನ | ಚನ್ನರಾಯಪಟ್ಟಣ ಬಳಿ ಭೀಕರ ಅಪಘಾತ; ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

Date:

ಹಾಸನಾಂಬ ದೇವಿ ದರ್ಶನ ಮುಗಿಸಿ ವಾಪಸ್ ಬೆಂಗಳೂರಿಗೆ ಹೋಗುವ ದಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಬಳಿ ನಡೆದಿದೆ.

- Advertisement -

ಮೃತರನ್ನು ಬೆಂಗಳೂರಿನ ಬಸವರಾಜು ಮತ್ತು ಅನುಶ್ರೀ (19) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಛಾಯಾ (20) ಹಾಗೂ ಮತ್ತೊಬ್ಬ ಬೈಕ್ ಸವಾರ ಮೊಹಮ್ಮದ್ ಶಾಹಿದ್ ಅವರನ್ನು ಚನ್ನರಾಯಪಟ್ಟಣ ತಾಲ್ಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಛಾಯಾ ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
WhatsApp Image 2025 10 20 at 3.17.43 PM

ಪೊಲೀಸ್ ಮೂಲಗಳ ಪ್ರಕಾರ, ಬಸವರಾಜು ತಮ್ಮ ಸ್ನೇಹಿತರಾದ ಅನುಶ್ರೀ ಮತ್ತು ಛಾಯಾ ಅವರೊಂದಿಗೆ ಯಮಹಾ ಬೈಕ್‌ನಲ್ಲಿ ಹಾಸನಾಂಬ ದರ್ಶನಕ್ಕೆ ಬಂದಿದ್ದರು. ದರ್ಶನ ಮುಗಿಸಿ ಬೆಂಗಳೂರಿನತ್ತ ವಾಪಸ್ ಹೊರಟಿದ್ದ ವೇಳೆ, ಚನ್ನರಾಯಪಟ್ಟಣ ದಿಕ್ಕಿನಿಂದ ವೇಗವಾಗಿ ಬಂದ KA-13 P-1521 ನಂಬರಿನ ಇನೋವಾ ಕಾರು ಮೊದಲು ಆ್ಯಕ್ಟೀವ್ ಹೋಂಡಾಗೆ ಡಿಕ್ಕಿ ಹೊಡೆದು ನಂತರ ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ.‌ ಭೀಕರ ಡಿಕ್ಕಿಯಿಂದ ಬೈಕ್ ಸವಾರರು ರಸ್ತೆ ಬದಿಯ ಅರಣ್ಯಕ್ಕೆ ಎಸೆಯಲ್ಪಟ್ಟಿದ್ದು, ಸ್ಥಳದಲ್ಲೇ ಬಸವರಾಜು ಹಾಗೂ ಅನುಶ್ರೀ ಮೃತಪಟ್ಟಿದ್ದಾರೆ. ಕಾರು ಸಹ ಅರಣ್ಯಕ್ಕೆ ನುಗ್ಗಿದೆ.

ಇದನ್ನೂ ಓದಿ: ಹಾಸನ | ಹಾಸನಾಂಬ ದೇವಾಲಯ ಸ್ನೇಹ, ಪ್ರೀತಿ, ಸಹಬಾಳ್ವೆ ಬೆಸೆಯುವ ಸ್ಥಳ: ಬಾನು ಮುಷ್ತಾಕ್

ಘಟನೆ ಕುರಿತು ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಾರಂಭವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...