ಹಾಸನ | ಕಾಡಾನೆಗಳ ಭೀಕರ ಕಾಳಗ: ದಂತ ಮುರಿದುಕೊಂಡ ಭೀಮ

Date:

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ದಿನೇ ದಿನೆ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಮೂಡಿದೆ. ಜನರ ಬಳಿಯೇ ಓಡಾಡುತ್ತ ಯಾರಿಗೂ ಏನೂ ಮಾಡುವುದಿಲ್ಲವೆಂಬ ನಂಬಿಕೆ ಮೂಡಿಸಿದ್ದ ಆನೆ ಭೀಮ, ಈಗ ಗ್ರಾಮದೊಳಗೆ ನುಗ್ಗಿ ಸಿಕ್ಕ ಸಿಕ್ಕದ್ದನ್ನು ಪುಡಿಗಟ್ಟಿದೆ. ಅಲ್ಲದೆ ಮತ್ತೊಂದು ಮದವೇರಿದ ಕಾಡಾನೆ ಜತೆಗಿನ ಕಾಳಗದಲ್ಲಿ ಒಂದು ದಂತವನ್ನೇ ಮುರಿದುಕೊಂಡಿರುವ ಭಾನುವಾರ ಬೆಳಿಗ್ಗೆ ನಡೆದಿದೆ.

- Advertisement -

ಹಾಸನ ಜಿಲ್ಲೆಯ ಸಕಲೇಶಪುರ ಹಾಗೂ ಬೇಲೂರು ತಾಲೂಕಿನ ವಿವಿಧೆಡೆ ಕಳೆದ ಐದಾರು ವರ್ಷಗಳಿಂದ ಸಂಚಾರ ಮಾಡುತ್ತ, ಶಾಂತವಾಗಿ ಓಡಾಡುತ್ತಿದ್ದ ಭೀಮ ಇದೀಗ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕಳೆದ ಒಂದು ವಾರದಿಂದ ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿಯ ಹಲವು ಗ್ರಾಮಗಳ ಮುಖ್ಯಬೀದಿಯಲ್ಲೇ ನಡೆದು ಹೋಗಿದ್ದ ಭೀಮ, ಭಾನುವಾರ ಮತ್ತೊಂದು ದೈತ್ಯಾಕಾರದ ಕ್ಯಾಫ್ಟನ್ ಹೆಸರಿನ ಕಾಡಾನೆ ಜತೆಗೆ ಓಡಾಡುತ್ತ ಭೀತಿ ಸೃಷ್ಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಬೇಲೂರು ತಾಲೂಕಿನ ಜಗಬೋರನಹಳ್ಳೀ ಗ್ರಾಮದಲ್ಲಿ ಎರಡೂ ಆನೆಗಳು ಕಾಳಗ ಶುರುಮಾಡಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ರೋಷಾವೇಶದಿಂದ ಗ್ರಾಮದೊಳಗೆ ಎಂಟ್ರಿಯಾದ ಭೀಮ, ನೀರಿನ ಟ್ಯಾಂಕರ್ ಪುಡಿ ಮಾಡಿದ್ದು, ಎತ್ತಿನ ಗಾಡಿಯನ್ನು ಎತ್ತಿ ಬಿಸಾಡಿ ರೌದ್ರಾವತಾರ ತೋರಿದೆ. ಕಾಡಾನೆ ಗ್ರಾಮದೊಳಗೆ ಬಂದಾಗ ಅರಣ್ಯ ಇಲಾಖೆಯ ಇಟಿಎಫ್ ಸಿಬ್ಬಂದಿ ಹಿಂಬಾಲಿಸಿದರೂ ಕೂಡ ಪಟಾಕಿ ಇಲ್ಲದೆ ಆನೆಯನ್ನು ಓಡಿಸಲು ಪರದಾಡಬೇಕಾಯಿತು.

ಕ್ಯಾಫ್ಟನ್ ಜತೆಗೆ ಕಾದಾಡುವಾಗ ಭೀಮನ ಬಲಬಾಗದ ದಂತ ಸಂಪೂರ್ಣ ಮುರಿದುಬಿದ್ದಿದ್ದು, ಮತ್ತೊಂದು ಆನೆಗೂ ಗಾಯಗಳಾಗಿವೆ. ಸದ್ಯ ದಂತ ಮುರಿದುಕೊಂಡು ಕಾಫಿತೋಟದಲ್ಲಿ ಸೇರಿಕೊಂಡಿರುವ ಸಲಗ ನರಳಾಡುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಆನೆಯನ್ನು ಬೆನ್ನಟ್ಟಿ ಜನರಿಗೆ ತೊಂದರೆಯಾಗದಂತೆ ಎಚ್ಚರ ವಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಕನಕದಾಸ ಜಯಂತಿ

2023ರ ಆಗಸ್ಟ್ ತಿಂಗಳಲ್ಲಿ ಬೆನ್ನಿನ ಕೆಳಬಾಗದಲ್ಲಿ ದೊಡ್ಡ ಗಾಯವಾಗಿ ನರಳಾಡಿದ್ದ ಭೀಮನಿಗೆ ಸೆಪ್ಟೆಂಬರ್ 25ರಂದು ಅರಣ್ಯ ಇಲಾಖೆ ಅಧಿಕಾರಿಗಳು ವನ್ಯಜೀವಿ ವೈದ್ಯರ ಮೂಲಕ ಚಿಕಿತ್ಸೆ ಕೊಡಿಸಿದ್ದರು. ಆದರೆ ಅದು ಪರಿಣಾಮಕಾರಿಯಾಗದ ಕಾರಣ ಆಗಸ್ಟ್ 31ರಂದು ಭೀಮನಿಗೆ ಅರವಳಿಕೆ ಮದ್ದು ನೀಡಿ ಚಿಕಿತ್ಸೆ ನೀಡಲಾಗಿತ್ತು. ಆಪರೇಷನ್ ನಡೆಸುತ್ತಿದ್ದ ವೇಳೆ ಮದವೇರಿದ್ದ ಭೀಮ ಏಕಾಏಕಿ ಅಂದಿನ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಶಾರ್ಪ್ ಶೂಟರ್ ವೆಂಕಟೇಶ್ ಮೇಲೆ ದಾಳಿ ಮಾಡಿ ಕೊಂದಿತ್ತು. ಬಳಿಕ ಗಾಯ ಗುಣಮುಖವಾಗಿ ಎಲ್ಲಿಯೂ ಕಾಣಿಸಿಕೊಳ್ಳದೆ ಓಡಾಡುತ್ತಿದ್ದ ಭೀಮ ಇದೀಗ ಮತ್ತೆ ಮದವೇರಿದ ಕಾರಣ ಊರೂರಿನಲ್ಲಿ ಅಡ್ಡಾಡುತ್ತ ದಾಂಧಲೆ ನಡೆಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...