ಹಾಸನ | ಕಿಡಿಗೇಡಿಗಳಿಂದ ಬೆಂಕಿ; ಲಕ್ಷಕ್ಕೂ ಅಧಿಕ ಬೆಲೆಯ ಕೃಷಿ ಸಾಮಗ್ರಿಗಳ ಭಸ್ಮ

Date:

ಕಿಡಿಗೇಡಿಗಳು ಜಮೀನಿಗೆ ಬೆಂಕಿ ಹಚ್ಚಿದ ಕಾರಣ ಜಾನುವಾರುಗಳ ಮೇವು, ನೀರಿನ ಪೈಪ್‌ಗಳು ಹಾಗೂ ತೆಂಗಿನಕಾಯಿಗಳು ಬೆಂಕಿಗಾಹುತಿಯಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಹಾಸನ ತಾಲೂಕಿನ ಸಿಂಗಟಗೆರೆ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಕಿಡಿಗೇಡಿಗಳು ಜಮೀನಿನಲ್ಲಿ ಬೆಂಕಿ ಹಚ್ಚಿದ್ದು, ಮೂರು ಟ್ರ್ಯಾಕ್ಟರ್‌ನಷ್ಟು ಮೇವು, ಸುಮಾರು ಇಪ್ಪತ್ತೈದಕ್ಕೂ ಹೆಚ್ಚು ನೀರಾವರಿ ಪೈಪುಗಳು ಹಾಗೂ ನೂರಕ್ಕೂ ಹೆಚ್ಚು ತೆಂಗಿನಕಾಯಿಗಳು ಸುಟ್ಟುಹೋಗಿವೆ. ಜಮೀನು ಮಾಲೀಕ, ರೈತ ಹೇಮಂತ್‌ ಕಂಗಾಲಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಜಮೀನಿನ ಮಾಲೀಕ ಹೇಮಂತ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಯಾರೋ ಕಿಡಿಗೇಡಿಗಳು ಜಮೀನಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದ ಅಲ್ಲಿದ್ದಂತಹ ಕೃಷಿಯ ಪರಿಕರಗಳು, ಜಾನುವಾರುಗಳ ಮೇವು ಸೇರಿದಂತೆ ಇತರೆ ವಸ್ತುಗಳೂ ಕೂಡ ಬೆಂಕಿಗೆ ಆಹುತಿಯಾಗಿದ್ದು, ಸುಟ್ಟು ಕರಕಲಾಗಿವೆ” ಎಂದು ಅವಲತ್ತುಕೊಂಡರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಘಟನೆಯ ವಿಷಯ ತಿಳಿದು ಸ್ಥಳಕ್ಕೆ ಬರುವಷ್ಟರಲ್ಲಿ ಎಲ್ಲ ಪರಿಕರಗಳು ಸುಟ್ಟು ಹೋಗಿದ್ದವು. ಕಿಡಿಗೇಡಿಗಳ ಅವಾಂತರದಿಂದ ಜಾನುವಾರುಗಳಿಗೆ ಮೇವಿಲ್ಲದಂತಾಗಿದ್ದು, ಸುಮಾರು ₹1 ಲಕ್ಷಕ್ಕೂ ಅಧಿಕವಾಗಿ ನಷ್ಟ ಉಂಟಾಗಿದೆ. ಈಗಾಗಲೇ ಮಳೆ ಇಲ್ಲದ ಬರದಂತಹ ಪರಿಸ್ಥಿತಿಯಲ್ಲಿ ಹಗಲು ರಾತ್ರಿ ವಿದ್ಯುತ್ ಬರುವುದನ್ನೇ ಕಾದು ಕುಳಿತಿದ್ದು, ನೀರು ಹಾಯಿಸಿ ದನಕರುಗಳಿಗಾಗಿ ಮೇವು ಉಳಿಸಿಕೊಂಡಿದ್ದೆವು” ಎಂದು ಬೇಸರ ವ್ಯಕ್ತಪಡಿಸಿದರು.

“ಮಳೆ, ಬೆಳೆ ಇಲ್ಲದೆ ದಿಕ್ಕು ತೋಚದಂತಾಗಿದ್ದ ಬರದಂತಹ ಕಾಲದಲ್ಲಿ ಇದ್ದ ಮೇವು ಸುಟ್ಟಿರುವ ಘಟನೆಯಿಂದ ಏನು ಮಾಡುವುದೆಂಬುದೇ ತೋಚದಂತಾಗಿದೆ. ಎರಡು ವರ್ಷಗಳಿಂದ ಸಾಲದ ಸುಳಿಯಲ್ಲಿ ಸಿಲುಕಿ ನಲುಗುತ್ತಿದ್ದೇವೆ. ಹೈನುಗಾರಿಕೆ ಮಾಡಿಕೊಂಡಿದ್ದು, ಉತ್ತಮ ಬೆಳೆ ಬಂದರೆ ಸಾಲ ತೀರಿಸುವ ನಿರೀಕ್ಷೆಯಲ್ಲಿದ್ದೆವು. ಆದರೆ, ಈ ಬಾರಿ ಮಳೆಯೂ ಇಲ್ಲದಾಯಿತು. ಇದೀಗ ಇಂತಹ ದುರ್ಘಟನೆ ನಡೆದಿದೆ. ದನಕರುಗಳಿಗೆ ಮೇವಿಲ್ಲದಂತಾಗಿದೆ” ಎಂದು ನೋವು ತೋಡಿಕೊಂಡರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಯುವಜನರಿಗೆ ಉದ್ಯೋಗ ಹಕ್ಕು ಖಾತ್ರಿಪಡಿಸಿ : ಬಸವರಾಜ ಪೂಜಾರ

ಘಟನೆಗೆ ಸಂಬಂಧಿಸಿದಂತೆ ಸಾಲಗಾಮೆ ಹೋಬಳಿಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ತನಿಖೆಯ ಬಳಿಕ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | 29ರಂದು ಚಡಚಣ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯಿಂದ ಜಾಗೃತಿ ಸಭೆ

ವಿಜಯಪುರ ಜಿಲ್ಲೆಯ ಚಡಚಣ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯಿಂದ ಫೆಬ್ರವರಿ 29ರಂದು ಜಾಗೃತಿ...

ಬಾಗಲಕೋಟೆ | ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ ನಾಮಫಲಕಗಳ ತೆರವಿಗೆ ಆಗ್ರಹ

ರಾಜ್ಯ ಸರ್ಕಾರದ ಆದೇಶದಂತೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ...

ಕುಡಿಯುವ ನೀರು ಕೊಡದೆ ಯಾವ ಬ್ರ್ಯಾಂಡ್ ಬೆಂಗಳೂರು ಮಾಡ್ತೀರಾ; ಮೋಹನ್ ದಾಸರಿ ಪ್ರಶ್ನೆ

ಟ್ಯಾಂಕರ್ ಮಾಫಿಯಾದಲ್ಲಿ ಕಾರ್ಪೊರೇಟರ್‌ಗಳು, ಮಾಜಿ ಕಾರ್ಪೊರೇಟರ್‌ಗಳು, ಶಾಸಕರ ಸಂಬಂಧಿಗಳು ಮತ್ತು ಶಾಸಕರ...

ಬಿಎಂಟಿಸಿ | 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯಲ್ಲಿ ಖಾಲಿ ಇರುವ ಸುಮಾರು 2,500...