ಹಾಸನ | ಮದುವೆಗೆ ನಿರಾಕರಿಸಿದ ಪ್ರೇಯಸಿ; ವಿಷಸೇವಿಸಿ ಯುವಕ ಆತ್ಮಹತ್ಯೆ 

Date:

ಪ್ರೀತಿಸಿದ್ದ ಹುಡುಗಿ ಮದುವೆಗೆ ನಿರಾಕರಿಸಿದ್ದರಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬೈರಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -

ದರ್ಶನ್(22) ವಿಷಸೇವಿಸಿ ಮೃತಪಟ್ಟ ದುರ್ದೈವಿ. ಈತ ಬಿ ಎ ಪದವೀಧರನಾಗಿದ್ದು, ಕೃಷಿಕನಾಗಿ ಜೀವನ ಸಾಗಿಸುತ್ತಿದ್ದ. ತನ್ನ ಅಜ್ಜಿ ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದ ಆತ, ಕಳೆದ ಐದಾರು ವರ್ಷಗಳಿಂದ ಮೋನಿಕಾ ಎಂಬಾಕೆಯನ್ನು ಪ್ರೀತಿಸುತ್ತಿದ್ದ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ದರ್ಶನ್ ಮತ್ತು ಮೋನಿಕಾ ಪರಸ್ಪರ ಪ್ರೀತಿಸುತ್ತಿದ್ದು, ತನ್ನನ್ನು ಮದುವೆಯಾಗುವಂತೆ ಆಕೆಯ ಮುಂದೆ ಪ್ರಸ್ತಾಪ ಇಟ್ಟಿದ್ದ. ಆದರೆ ಮೋನಿಕಾ ನಿರಾಕರಿಸಿದ್ದಾಳೆ. ಈ ನಿರಾಕರಣೆಯಿಂದ ಆಘಾತಗೊಂಡಿದ್ದ ಆತ ಮನನೊಂದು ಫೆಬ್ರವರಿ 5ರಂದು ಮನೆಯಲ್ಲಿಯೇ ವಿಷ ಸೇವಿಸಿದ್ದ.

ವಿಷ ಸೇವಿಸಿದ ಬಳಿಕ ದರ್ಶನ್‌ಗೆ ವಾಂತಿ ಆರಂಭವಾಯಿತು. ಈ ಬಗ್ಗೆ ಸ್ನೇಹಿತರಾದ ರವಿ ಮತ್ತು ಯಶ್ವಂತ್‌ ವಿಚಾರಿಸಿದಾಗ, “ಮೋನಿಕಾ ನನ್ನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ, ನನಗೆ ತುಂಬಾ ಬೇಜಾರಾಗಿದೆ” ಎಂದು ಹೇಳಿ ಕುಸಿದುಬಿದ್ದಿದ್ದ. ಈ ವೇಳೆ ಸ್ನೇಹಿತರು ಕೂಡಲೇ ಆತನನ್ನು ಅರಸೀಕೆರೆ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಹಾಸನ ಜಿಲ್ಲಾಸ್ಪತ್ರೆ ಹಾಗೂ ನಂತರ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೆ ದರ್ಶನ್ ಮೃತಪಟ್ಟಿದ್ದಾನೆ.

ಇದನ್ನೂ ಓದಿದ್ದೀರಾ? ಚಿಕ್ಕಮಗಳೂರು | ಬಾಬಾ ಬುಡನ್ ಗಿರಿಗೆ ಕಾಫಿ ಬೆಳೆ ಹೇಗೆ ಬಂತು?

ಯುವಕನ ಸಾವಿನ ಬಗ್ಗೆ ಆತನ ಭಾವ ಶಂಕರ್ ಬಾಣಾವರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆತ್ಮಹತ್ಯೆ ಪರಿಹಾರವಲ್ಲ 9
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...