ಹಾಸನ | ಕೋಟ್ಯಂತರ ರೂ. ಮೌಲ್ಯದ ಚಿನ್ನ ಕದ್ದು ಪರಾರಿ; ಬ್ಯಾಂಕ್‌ನ ಹೌಸ್‌ ಕೀಪರ್‌ಗಾಗಿ ಶೋಧ

Date:

Advertisements

ಗಿರವಿ ಇಟ್ಟಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನವನ್ನು ಬ್ಯಾಂಕ್‌ನ ಹೌಸ್‌ ಕೀಪರ್‌ ಕದ್ದು ಪರಾರಿಯಾಗಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದೆ.

ಬೆಳವಾಡಿ ಗ್ರಾಮದ ಎಸ್‌ಬಿಐ ಬ್ಯಾಂಕ್‌ನಲ್ಲಿ ಲವ ಬಿ ಎನ್‌ ಎಂಬಾತ ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ. ಅಸಲಿ ಚಿನ್ನದ ಜಾಗದಲ್ಲಿ ನಕಲಿ ಚಿನ್ನ ಇಟ್ಟು, ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಲಪಟಾಯಿಸಿ ಪರಾರಿಯಾಗಿದ್ದಾನೆ. ಆರೋಪಿಯನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.

ಹೊರಗುತ್ತಿಗೆ ನೌಕರ ಲವ ಬಿ ಎನ್‌ ಎಂಬಾತನ ವಿರುದ್ಧ ಬ್ಯಾಂಕ್‌ ದೂರು ದಾಖಲಿಸಿದೆ. ಈತನ ವಿರುದ್ಧ ಒಂದು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನ ಕಳ್ಳತನ ಮಾಡಲಾದ ಆರೋಪ ಇದೆ. ಮೇ 5ರಂದು ಬ್ಯಾಂಕಿನ ಗಿರವಿ ವಿಭಾಗದ ಚಿನ್ನ ಪರಿಶೀಲನೆ ವೇಳೆ ಸಿಬ್ಬಂದಿಯ ವಂಚನೆ ಬಯಲಾಗಿದೆ.

Advertisements
Bank Gold Theft In Hassan By It's Housekeeper
ಆರೋಪಿ ಲವ ವಿರುದ್ಧ ದಾಖಲಾದ ಎಫ್‌ಐಆರ್‌ ಪ್ರತಿ

ಬ್ಯಾಂಕ್‌ ಲಾಕರ್‌ನಲ್ಲಿ ಚಿನ್ನ ಇರುವ 30 ಪ್ಯಾಕೆಟ್‌ಗಳಲ್ಲಿ 18 ಪ್ಯಾಕೆಟ್‌ ಇದ್ದ ಚಿನ್ನವನ್ನು ಎಗರಿಸಿ, ಅವುಗಳಲ್ಲಿ ನಕಲಿ ಚಿನ್ನವನ್ನು ಇಟ್ಟ ಕಾರಣ ವಂಚನೆಯು ತಡವಾಗಿ ಬೆಳಕಿಗೆ ಬಂದಿದೆ. 2013ರಿಂದಲೂ ಬ್ಯಾಂಕ್‌ ಹೌಸ್‌ ಕೀಪರ್‌ ಆಗಿ ಲವ ಕೆಲಸ ಮಾಡುತ್ತಿದ್ದ. ಬ್ಯಾಂಕ್‌ ಅಧಿಕಾರಿಗಳ ವಿಶ್ವಾಸ ಗಳಿಸಿದ್ದ ಈತ ಚಿನ್ನದ ಸಾಲದ ದಸ್ತಾವೇಜು ಉಸ್ತುವಾರಿಯನ್ನೂ ವಹಿಸಿದ್ದ. ಆದರೀಗ ಚಿನ್ನದ ದಸ್ತಾವೇಜು ಮಾಡುವ ಬದಲು ಆತನೇ ಚಿನ್ನ ಕದ್ದು ಪರಾರಿಯಾಗಿದ್ದಾನೆ.

ಈ ಸುದ್ದಿ ಓದಿದ್ದೀರಾ? ಹೊರಗುತ್ತಿಗೆ ನೌಕರರಿಗೂ ನೇರಪಾವತಿ ಖಚಿತ; ಪೌರಾಡಳಿತ ಸಚಿವ ರಹೀಂಖಾನ್ ಭರವಸೆ

ಕೊಣನೂರು ಪೊಲೀಸ್‌ ಠಾಣೆಯಲ್ಲಿ ಎಸ್‌ಬಿಐ ಅನುರಾಧಾ ಅವರು ದೂರು ದಾಖಲಿಸಿದ್ದಾರೆ. ಎರಡು ಪ್ಯಾಕೆಟ್‌ ಚಿನ್ನವನ್ನು ಸಂಪೂರ್ಣವಾಗಿ ಎಗರಿಸಿ, 10 ಪ್ಯಾಕೆಟ್‌ಗಳಲ್ಲಿ ನಕಲಿ ಚಿನ್ನವನ್ನು ತುಂಬಿದ್ದಾನೆ. ಎರಡು ಪ್ಯಾಕೆಟ್‌ ಚಿನ್ನದ ಕೊರತೆ ಕಂಡಿದ್ದನ್ನು ನೋಡಿ ಪರಿಶೀಲನೆ ನಡೆಸಿದಾಗ ಕಳ್ಳತನ ಬಯಲಾಗಿದೆ. ಇದರಿಂದಾಗಿ ಸುತ್ತಮುತ್ತಲಿನ ಗ್ರಾಮಸ್ಥರು ಬ್ಯಾಂಕ್‌ನಲ್ಲಿ ಚಿನ್ನವನ್ನು ಗಿರವಿ ಇಡಲು ಭಯಪಡುವಂತಾಗಿದೆ ಎಂದು ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X