ಹಾಸನ | ಸರ್ಕಾರದಿಂದ ಕಳಪೆ ಬಿತ್ತನೆಬೀಜ ವಿತರಣೆ; ಬೆಳೆನಷ್ಟ ಪರಿಹಾರಕ್ಕೆ ಪ್ರತಿಕೃತಿ ದಹಿಸಿ ಪ್ರತಿಭಟನೆ

Date:

Advertisements

ಸರ್ಕಾರವು ಕಂಪೆನಿಗಳ ಮೂಲಕ ರೈತರಿಗೆ ಮೆಕ್ಕೆಜೋಳದ ಕಳಪೆ ಬಿತ್ತನೆಬೀಜ ನೀಡಲಾಗಿದ್ದು, ಬೆಳೆಗೆ ಆಗಿರುವ ನಷ್ಟದ ಬಗ್ಗೆ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಸಾಮೂಹಿಕ ನಾಯಕತ್ವದಲ್ಲಿ ನಕಲಿ ಕಂಪನಿಗಳ ಪ್ರತಿಕೃತಿ ದಹಿಸಿ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಿ ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದರು.

ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ನಕಲಿ ಕಂಪೆನಿಗಳ ಪ್ರತಿಕೃತಿಯನ್ನು ಹೆಗಲು ಮೇಲೆ ಹೊತ್ತುಕೊಂಡು ಹೊರಟ ಪ್ರತಿಭಟನಾ ಮೆರವಣಿಗೆಯು ಎನ್ ಆರ್ ವೃತ್ತ, ಬಿಎಂ ರಸ್ತೆ ಮೂಲಕ ಸಂತೇಪೇಟೆ ವೃತ್ತಕ್ಕೆ ಬಂದು ಮಾನವ ಸರಪಳಿ ನಿರ್ಮಿಸಿ ಪ್ರತಿಕೃತಿ ಸುಟ್ಟುಹಾಕಿ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಸಾಮೂಹಿಕ ನಾಯಕತ್ವದ ನಾಯಕ ಗಂಗಾಧರ್ ಮಾತನಾಡಿ, “ಉತ್ತಮ ಮಳೆಯಾಗಿರುವ ಕಾರಣ ಈ ಬಾರಿ ಜೂನ್ ತಿಂಗಳಲ್ಲೇ ಜಲಾಶಯಗಳು ಭರ್ತಿಯಾಗಿದೆ. ರಾಜ್ಯದಲ್ಲಿ ಉತ್ತಮ ಬಿತ್ತನೆಯಾಗಿದೆ. ಆದರೆ ಕೃಷಿ ಮತ್ತು ತೋಟಗಾರಿಕಾ ಇಲಾಖೆ ಬಿತ್ತನೆಬೀಜ ಸಂಬಂಧಿತ ಕಾಯಿದೆ ಪರಿಪಾಲನೆ ಮಾಡುವಲ್ಲಿ ಸೋತಿದೆ. ಅಧಿಕೃತವಾಗಿ ಸರ್ಕಾರದ ಬಿಡ್ಡಿಗೆ ಮತ್ತು ಕೃಷಿ ಇಲಾಖೆಗೆ ಸರಬರಾಜು ಮಾಡದಿರುವ ಕಂಪೆನಿಗಳ ಜತೆಗೆ ಕೃಷಿ ನಿರ್ದೇಶಕರು ಶಾಮಿಲಾಗಿ ರೈತರಿಗೆ ಕಳಪೆ ಬಿತ್ತನೆಬೀಜ ನೀಡಿರುವ ಮತ್ತು ಕಂಪೆನಿಯವರು ಜಂಟಿ ಕೃಷಿ ನಿರ್ದೇಶಕರ ನೇತೃತ್ವದಲ್ಲಿ ರೈತರಿಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು. ಸಾಮೂಹಿಕವಾಗಿ ರೈತರಿಗೆ ಜಿಲ್ಲಾಡಳಿತದಿಂದ ಉಚಿತವಾಗಿ ಬೆಳೆ ವಿಮೆ ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

Advertisements

“ಕಳಪೆ ಬಿತ್ತನೆಬೀಜವನ್ನು ಕೃಷಿ ಇಲಾಖೆಯವರ ಹೆಸರು ಬಳಸಿಕೊಂಡು ಪ್ರಚಾರದಲ್ಲಿ ತೊಡಗಿರುವರ ವಿರುದ್ಧ ಮೊಕದ್ದಮೆ ದಾಖಲಿಸಿ ಮತ್ತು ಕೃಷಿ ಇಲಾಖೆಗೆ ಸರಬರಾಜು ಮಾಡದೆ ಇರುವ ಕಂಪನಿಯವರನ್ನು ಅಂಗಡಿ ಮುಖಾಂತರ ಮಾರುವುದನ್ನು ನಿರ್ಬಂಧಿಸಬೇಕು. ಬೆಳೆ ಸಮೀಕ್ಷೆಯನ್ನು ತಾಲೂಕು ಆಡಳಿತ ಅಧಿಕಾರಿಗಳು ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಜೊತೆಗೂಡಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಪ್ರತಿ ಹಳ್ಳಿಗಳಲ್ಲಿಯೂ ಸಮೀಕ್ಷೆ ನಡೆಸಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕು” ಎಂದು ಒತ್ತಾಯಿಸಿದರು.

“ಬೆಳೆ ನಾಶವಾಗಿರುವ ರೈತರಿಗೆ ಕಂಪೆನಿಯವರಿಂದಲೇ ಕೃಷಿ ಇಲಾಖೆಯವರು ಪ್ರತಿ ಎಕರೆಗೆ 50 ಸಾವಿರ ರೂ. ಪರಿಹಾರವನ್ನು ಕೊಡಿಸಕೊಡಬೇಕು. ಹಾಸನ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಅನುಮತಿ ಇಲ್ಲದೆ ಹೆಸರನ್ನು ಅವರ ಅನುಮತಿ ಇಲ್ಲದೆ ಬಳಸಿಕೊಂಡು ಕರಪತ್ರವನ್ನು ಮುದ್ರಿಸಿ ಇಲಾಖೆಯನ್ನು ದುರುಪಯೋಗ ಪಡಿಸಿಕೊಂಡಿರುವ ಬಿತ್ತನೆಬೀಜದ ಹೈಟೆಕ್ ಕಂಪೆನಿ ಮತ್ತು ಏಜೆನ್ಸಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿದ್ದೀರಾ? ಮಂಡ್ಯ | ಕೆಲಸ ನೀಡದ ಕೂಲಿಕಾರರ ವಿರೋಧಿ ಸಿಇಒ ವರ್ಗಾವಣೆ ಆಗಬೇಕು: ಸಿಪಿಐಎಂ

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಸಾಮೂಹಿಕ ನಾಯಕತ್ವದ ಅಧ್ಯಕ್ಷೀಯ ಮಂಡಳಿಯ ಸದಸ್ಯೆ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿ, ತಿಪಟೂರು ಜಯಚಂದ್ರ ಶರ್ಮ, ಮೈಸೂರಿನ ಕಿರಣ್, ರೈತ ಸಂಘದ ಜಿಲ್ಲಾಧ್ಯಕ್ಷ ಮೂರ್ತಿ ಕಣಗಾಲ್, ಗ್ಯಾರಂಟಿ ರಾಮಣ್ಣ, ಮಂಜು ಬಿಟ್ಟಗೌಡನಹಳ್ಳಿ, ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಮರ್ಕುಲಿ ಪ್ರಕಾಶ್, ಹಾಸನ ತಾಲೂಕು ಅಧ್ಯಕ್ಷ ಬಿಟ್ಟಗೌಡನಹಳ್ಳಿ ಮಂಜುನಾಥ್, ಪಾಲಾಕ್ಷ ಮಾರನಹಳ್ಳಿ, ಶಿವಕುಮಾರ್ ಹಳೇಬೀಡು, ಶೇಷಣ್ಣ, ಕಾಂತರಾಜು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X