ಸಾಲದ ಹಣ ವಾಪಸ್ ನೀಡದಿದ್ದಕ್ಕೆ ಹಾಗೂ 120 ಗ್ರಾಂ ಚಿನ್ನಾಭರಣ ದೋಚಿ ಅಜ್ಜಿಯ ಬರ್ಬರ ಹತ್ಯೆಯಾದ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಬೆಟ್ಟದಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ.
ಅರಕಲಗೂಡು ತಾಲ್ಲೂಕಿನ ಬೆಟ್ಟದಹಳ್ಳಿ ಗ್ರಾಮದ ಬಳಿ ಅ.7ರಂದು ನಾಲೆಯಲ್ಲಿ ಲಕ್ಷ್ಮಮ್ಮ ಅವರ ಮೃತದೇಹ ಪತ್ತೆಯಾಗಿತ್ತು. ಹತ್ಯೆಯಾದ ವೃದ್ದೆ (67), ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ನಾಲೆಗೆ ಎಸೆದ ಆರೋಪದ ಮೇಲೆ (58), ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ತನಿಖೆ ಕೈಗೊಂಡ ಕೊಣನೂರು ಠಾಣೆ ಪೊಲೀಸರು, ಅದೇ ಗ್ರಾಮದ ಅತ್ತಿಮರದಕೊಪ್ಪಲು ನಿವಾಸಿ ರಮೇಶನನ್ನು ಬಂಧಿಸಿದ್ದಾರೆ. ಲಕ್ಷ್ಮಮ್ಮ ಅವರು ರಮೇಶನ ಬಳಿ 50 ಸಾವಿರ ಸಾಲ ಪಡೆದಿದ್ದು, ಹಣ ವಾಪಸ್ ನೀಡದ ಹಿನ್ನೆಲೆಯಲ್ಲಿ ಕೊಲೆಗೆ ಸಂಚು ರೂಪಿಸಿದ್ದ ಎನ್ನಲಾಗಿದೆ.
ಅ.3ರಂದು ವಿಜಿ ಕೊಪ್ಪಲಿಗೆ ಹೋಗಿ ಬರುವುದಾಗಿ ಮನೆಯಿಂದ ಹೊರಟಿದ್ದ ಲಕ್ಷ್ಮಮ್ಮ ಅವರಿಗೆ ಬೈಕ್‌ನಲ್ಲಿ ಡ್ರಾಪ್ ನೀಡುವುದಾಗಿ ನಂಬಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದ ರಮೇಶ, ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿದ್ದೀರಾ?ಹಾಸನ | ಶೆಟ್ಟಿಹಳ್ಳಿ ಸೇತುವೆ ಮೇಲೆ ಕಾರು ನಿಲ್ಲಿಸಿ ವ್ಯಕ್ತಿ ನಾಪತ್ತೆ
ಬಳಿಕ ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ನಾಲೆಗೆ ಎಸೆದಿದ್ದು, ಲಕ್ಷ್ಮಮ್ಮ ಅವರ ಮೈಮೇಲಿದ್ದ ಸುಮಾರು 120 ಗ್ರಾಂ ಚಿನ್ನಾಭರಣಗಳನ್ನು ದೋಚಿದ್ದ ಎನ್ನಲಾಗಿದೆ. ಚಿನ್ನಾಭರಣಗಳನ್ನು ವಶಪಡಿಸಿಕೊಂಡಿರುವ ಪೊಲೀಸರು, ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.




