ಶಾಸಕ ಎಚ್.ಡಿ ರೇವಣ್ಣ ಅವರ ಆಪ್ತ, ಗ್ರ್ಯಾನೈಟ್ ಉದ್ಯಮಿ ಕೃಷ್ಣೇಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಬರೋಬ್ಬರಿ 143 ಆರೊಪಿಗಳನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.
ಉದ್ಯಮಿ ಹತ್ಯೆಗೆ ಸಂಬಂಧಿಸಿದಂತೆ ಆರಂಭದಲ್ಲಿ 7 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಹತ್ಯೆಗೆ ಸುಪಾರಿ ನೀಡಿದ್ದ ಯೋಗಾನಂದ್, ಹತ್ಯೆಗೈದಿದ್ದ ಧನಂಜಯ್ (21), ಹಾಸನ ಆಟೋ ಚಾಲಕ ಗುಡ್ಡೇನಹಳ್ಳಿಯ ಚಂದನ (20), ಗೂರನಹಳ್ಳಿ ಗ್ರಾಮದ ಚೇತನ್ (22), ಬಾಗೂರು ಗ್ರಾಮದ ಪ್ರದೀಪ್ (27), ಮಣಿಕಂಠ (27) ಸೇರಿದಂತೆ 7 ಮಂದಿ ಆರೋಪಿಗಳನ್ನು ಹಾಸನ ಪೊಲೀಸರು ಬಂಧಿಸಿದ್ದರು. ಇದೀಗ ಬಂಧಿತ ಆರೋಪಿಗಳ ಸಂಖ್ಯೆ 143ಕ್ಕೆ ಏರಿಕೆಯಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಶಿಕ್ಷಕ ಹುದ್ದೆಗೆ ಆಯ್ಕೆಯಾದ ಯುವಕ; ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ
ಆಗಸ್ಟ್ 9ರಂದು ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಉದ್ಯಮಿ ಕೃಷ್ಣೇಗೌಡ ಅವರ ಶವ ಪತ್ತೆಯಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ, ಉದ್ಯಮಿಯ ಕಾರನ್ನು ಅಡ್ಡಗಟ್ಟಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚರಣೆ ನಡೆಸಿದ್ದಾರೆ. ಹಣಕಾಸಿನ ವಿಚಾರವಾಗಿ ಕೊಲೆ ನಡೆದಿದೆ ಎಂದು ತಿಳಿದುಬಂದಿದೆ