ಹಾಸನ | ಹಾಸನಾಂಬ ಜಾತ್ರೆ: ಶ್ರಮಿಕ ವರ್ಗದ ಭಕ್ತರಿಗೆ ಸುಗಮ ದರ್ಶನಕ್ಕೆ ವ್ಯವಸ್ಥೆ; ಸಿಎಂ ಮೆಚ್ಚುಗೆ

Date:

ಹಾಸನದ ಹಾಸನಾಂಬ ಜಾತ್ರೆಯಲ್ಲಿ ಯಾವುದೇ ರೀತಿಯ VIP ಪ್ರತಿಷ್ಠೆಗೆ ಮಣೆ ಹಾಕದೆ, ಸಾಮಾನ್ಯರ ದರ್ಶನಕ್ಕೆ ಆದ್ಯತೆ ನೀಡಿದ ಸರ್ಕಾರದ ಪ್ರಯತ್ನದ ಯಶಸ್ಸಿಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳಿಗೆ, ಅಧಿಕಾರಿ ವರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದರು.

- Advertisement -

ಹಾಸನಾಂಭ ದೇವಿ ಮತ್ತು ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನಾನು ಕಳೆದ ವರ್ಷವೂ ದರ್ಶನ ಪಡೆದಿದ್ದೆ. ಈ ವರ್ಷವೂ ದರ್ಶನ‌ ಪಡೆದಿದ್ದೇನೆ. ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿಗಾಗಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ದೇವಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ. ಈ ಬಾರಿ ಅಗತ್ಯಕ್ಕಿಂತ ಹೆಚ್ವು ಮಳೆ ಬಿದ್ದು ರೈತರಿಗೆ ಆಗಿರುವ ನಷ್ಟ ಭರಿಸಲು NDRF ನಿಧಿ ಜೊತೆಗೆ ರಾಜ್ಯ ಸರ್ಕಾರವೂ ಹೆಚ್ಚುವರಿ ಪರಿಹಾರ ನೀಡುತ್ತಿದ್ದೇವೆ. ಹಿಂದೆಂದೂ ಯಾರೂ ನೀಡದಷ್ಟು ಬೆಳೆ ಹಾನಿ ಪರಿಹಾರವನ್ನು ನಾವು ನೀಡಿದ್ದೇವೆ. ಮುಂದಿನ ವರ್ಷ ಬೆಳೆ ಹಾನಿ ಪರಿಸ್ಥಿತಿ ಬರದಿರಲಿ ಎಂದು ಹಾಸನಾಂಬ ಮತ್ತು ಸಿದ್ದೇಶ್ವರ ಸ್ವಾಮಿಯಲ್ಲಿ ಪ್ರಾರ್ಥಿಸಿದ್ದೇನೆ” ಎಂದರು.

“ನಮ್ಮದು ಕುವೆಂಪು ಅವರ ಆಶಯದ “ಸರ್ವ ಜನಾಂಗದ ಶಾಂತಿಯ ತೋಟ” ಆಗಿದೆ. ಇದನ್ನು ಇನ್ನಷ್ಟು ಗಟ್ಟಿಗೊಳಿಸೋಣ. ಎಲ್ಲಾ ಧರ್ಮದ ದೇವರ ಆಶಯವೂ ಮನುಷ್ಯ ಪ್ರೀತಿ ಮತ್ತು ಸೌಹಾರ್ದದ ಬದುಕು. ಇದಕ್ಕೆ ತಕ್ಕಂತೆ ನಾವೆಲ್ಲರೂ ಸಹೃದತೆಯಿಂದ ಮನುಷ್ಯ ಧರ್ಮವನ್ನು ಪಾಲಿಸಬೇಕು” ಎಂದರು.

ಇದನ್ನೂ ಓದಿ: ಹಾಸನ | ಹಾಸನಾಂಬ ದೇವಾಲಯ ಸ್ನೇಹ, ಪ್ರೀತಿ, ಸಹಬಾಳ್ವೆ ಬೆಸೆಯುವ ಸ್ಥಳ: ಬಾನು ಮುಷ್ತಾಕ್

ಅಗತ್ಯ ಬಿದ್ದರೆ ಹೆಚ್ಚುವರಿ ಅನುದಾನ: ಹಾಸನಾಂಬ ಜಾತ್ರೆಗೆ ಹೆಚ್ಚುವರಿ ಅನುದಾನದ ಕುರಿತು ಮಾತನಾಡಿದ ಅವರು, “ಜಿಲ್ಲಾಳಿತದ ಜೊತೆ ಚರ್ಚಿಸುತ್ತೇನೆ. ಅಗತ್ಯಬಿದ್ದರೆ ಅನುದಾನ, ಹಣಕಾಸಿನ ನೆರವು ನೀಡಲಾಗುವುದು” ಎಂದರು.

ಈ ವೇಳೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ, ಶಾಸಕ ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್, ಹೂಡ ಅಧ್ಯಕ್ಷ ಶಿವಪ್ಪ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...