ಹಾಸನ | ಅನುಭವ ಮಂಟಪದಲ್ಲಿ ಅಸ್ಪೃಶ್ಯರಿಗೆ ಪಾಠ ಪ್ರವಚನ ಕಲಿಸುತ್ತಿದ್ದರು: ಲೋಕೇಶ್ ಚಂದ್ರ

Date:

12ನೇ ಶತಮಾನದ ಬಸವಣ್ಣನವರ ಕಾಲಘಟ್ಟದಲ್ಲೇ ತಮ್ಮ ಅನುಭವ ಮಂಟಪದಲ್ಲಿ ಅಸ್ಪೃಶ್ಯರಿಗೆ ಪಾಠ ಪ್ರವಚನ ಕಲಿಸುತ್ತಿದ್ದರು ಎಂದು ದಲಿತ ಶೋಷಿತ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಲೋಕೇಶ್ ಚಂದ್ರ ತಿಳಿಸಿದರು.

- Advertisement -

ಹಾಸನ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಭೀಮ್ ಆ‌ರ್ಮಿಯಿಂದ ಹಮ್ಮಿಕೊಂಡಿದ್ದ ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟಲು ಕಾನೂನು ಅರಿವು ಹಾಗೂ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ಪರಿಶಿಷ್ಟ ಜಾತಿ/ಪಂಗಡಗಳು ಅಂದರೇನು ಎನ್ನುವುದನ್ನು ನೋಡಿದರೆ ಹಲವು ಜಾತಿಗಳನ್ನು ಪರಿಷ್ಕರಣೆಗೊಳಿಸಿ ಮಾಡಿದ ಪಟ್ಟಿಯನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳೆಂದು ಕರೆಯುತ್ತೇವೆ. ಎಸ್‌ಸಿ/ಸ್‌ಟಿ ದೌರ್ಜನ್ಯ ತಡೆ ಕಾಯಿದೆಯು ಪರಿಶಿಷ್ಟ ಜಾತಿ 101 ಮತ್ತು ಪರಿಶಿಷ್ಟ ಪಂಗಡಗಳ 52 ಸೇರಿದಂತೆ ಒಟ್ಟು 153 ಜಾತಿಗಳಿಗೆ ಅನ್ವಯಿಸುತ್ತದೆ” ಎಂದು ಹೇಳಿದರು.

“ಅಸ್ಪೃಶ್ಯತೆ ನಿರ್ಮೂಲನೆ ಬಗ್ಗೆ ಯಾರ್‍ಯಾರು ಮುಂದಾಗಿದ್ದರೆಂಬ ವಿಚಾರದ ಇತಿಹಾಸ ತಿಳಿಯುವ ಅಗತ್ಯತೆ ಇದೆ. ಈಗ ಹಲವಾರು ಕಾಯಿದೆಗಳಿವೆ. ಅದರಲ್ಲಿ ಮಕ್ಕಳ ಮೇಲಿನ ರಕ್ಷಣಾ ಕಾಯಿದೆ, ಮಹಿಳಾ ಮೇಲಿನ ಕಾಯಿದೆ, ಎಸ್‌ಸಿ/ಸ್‌ಟಿ ದೌರ್ಜನ್ಯ ತಡೆ ಕಾಯಿದೆ ಸೇರಿದಂತೆ ಹಲವಾರು ಕಾಯಿದೆಗಳಿವೆ. ಕ್ರಿಶ್ತ ಪೂರ್ವದಲ್ಲಿ ಭಗವಾನ್ ಬುದ್ಧರು ಅಸ್ಪೃಶ್ಯತೆ ತೊಡೆದುಹಾಕಲು ಹೋರಾಡಿದವರು, ದೇಶದ ಇತಿಹಾಸದಲ್ಲಿ ಅವರೇ ಪ್ರಥಮರು. 12ನೇ ಶತಮಾನದಲ್ಲಿ ಬಸವಣ್ಣನವರು ಅನುಭವ ಮಂಟಪಗಳಲ್ಲಿ ಪಾಠ ಪ್ರವಚನ ಮಾಡುವುದರ ಮೂಲಕ ಅಸ್ಪೃಶ್ಯತೆ ಹೋಗಲಾಡಿಸಲು ಮುಂದಾದರು. ಬಸವಣ್ಣನವರ ಕಾಲಘಟ್ಟದಲ್ಲೇ ಅಸ್ಪೃಶ್ಯರಿಗೆ ಪಾಠ ಪ್ರವಚನ ಕಲಿಸುತ್ತಿದ್ದರು ಎಂಬುದನ್ನು ಕಾಣಬಹುದು” ಎಂದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಕಷ್ಟದಿಂದ ಬಂದವರು ಎಲ್ಲವನ್ನೂ ನಿಭಾಯಿಸಬಲ್ಲರು

ಕಾರ್ಯಕ್ರಮದಲ್ಲಿ ದೌರ್ಜನ್ಯ ತಡೆ ಕಾಯಿದೆ ಕುರಿತು ವಿಚಾರವನ್ನು ಸಿದ್ದರಾಜು ಕೆಂಪನಹಳ್ಳಿ ಮಂಡಿಸಿದರು. ಇದೇ ವೇಳೆ ಭೀಮ್ ಆರ್ಮಿ ರಾಜ್ಯ ಕಾರ್ಯಾಧ್ಯಕ್ಷ ಹೆಚ್ ಎಸ್ ಪ್ರದೀಪ್, ಪ್ರಗತಿಪರ ಚಿಂತಕ ಕೆ ಹೆಚ್ ಮೊಹಮ್ಮದ್ ಮುಸ್ಲಿಯಾರ್, ಭೀಮ್ ಆರ್ಮಿ ರಾಜ್ಯ ಉಪಾಧ್ಯಕ್ಷ ಜಯಕುಮಾರ್ ಹಾದಿಗೆ, ಬೇಲೂರು ತಾಲೂಕು ಅಧ್ಯಕ್ಷ ಕೀರ್ತಿ ಬಿ ಅಣ್ಣಪ್ಪ, ಆಲೂರು ತಾಲೂಕು ಅಧ್ಯಕ್ಷ ಜಗದೀಶ್ ನಿಡನೂರು, ಜಿಲ್ಲಾ ಉಪಾಧ್ಯಕ್ಷ ನವೀನ್ ಸಾಲಗಾಮೆ, ಖಜಾಂಚಿ ಎಂ ಸಿ ಮಂಜುನಾಥ, ತಾಲೂಕು ಅಧ್ಯಕ್ಷ ಡಿ ಕೆ ಹೇಮಂತ್, ಸಂಚಾಲಕ ಪರಮೇಶ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...