ಹಾಸನ | ಸಚಿವ ಸ್ಥಾನಕ್ಕೆ ಪರೋಕ್ಷವಾಗಿ ಬೇಡಿಕೆ ಇಟ್ಟ ಕೆ ಎಂ ಶಿವಲಿಂಗೇಗೌಡ

Date:

  • ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆ
  • ಯಾವ ಹಳ್ಳಿಗೆ ಹೋದ್ರೂ ನೀವು ಸಚಿವರಾಗ್ತಿರಾ ಅಂತ ಕೇಳ್ತಾರೆ

ಹಾಸನ ಜಿಲ್ಲೆ ಅರಸೀಕೆರೆ ಕ್ಷೇತ್ರದ ಮಾಜಿ ಶಾಸಕ ಕೆ ಎಂ ಶಿವಲಿಂಗೇಗೌಡ ಅವರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾದರು. ಈ ವೇಳೆ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ತಮಗೆ ಸಚಿವ ಸ್ಥಾನ ನೀಡುವಂತೆ ವೇದಿಕೆ ಮೇಲೆಯೇ ಪರೋಕ್ಷವಾಗಿ ಬೇಡಿಕೆ ಇಟ್ಟಿದ್ದಾರೆ.

- Advertisement -

ಅರಸೀಕೆರೆಯಲ್ಲಿ ಭಾನುವಾರ ರಾತ್ರಿ ಆಯೋಜಿಸಿದ್ದ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೆ ಎಂ ಶಿವಲಿಂಗೇಗೌಡ, “ನಾನು ಕಾಂಗ್ರೆಸ್ ನಾಯಕರಾದ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಡಿ ಕೆ ಸುರೇಶ್ ಅವರನ್ನು ನಂಬಿ ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದೇನೆ, ನೀವು ನೀರಲ್ಲಾದರೂ ಹಾಕಿ ಹಾಲಲ್ಲಾದರೂ ಹಾಕಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಕಾಂಗ್ರೆಸ್‌ ಸೇರಿರುವುದಕ್ಕೆ ರಾಥೋಡ್ ಒಬ್ಬರು ವೇದಿಕೆಯಲ್ಲಿ ಇದ್ದಾರೆ ಅವರೇ ಸಾಕ್ಷಿ, ನಾನು ಅರಸೀಕೆರೆಯ ಯಾವ ಹಳ್ಳಿಗೆ ಹೋದರೂ ಅಲ್ಲಿ ನೀವು ಸಚಿವರಾಗ್ತಿರಾ ಅಂತ ಕೇಳ್ತಾರೆ. ನೀವು ಅದೇನ್ ಮಾಡ್ತಿರೋ ಮಾಡಿ” ಎಂದು ಪರೋಕ್ಷವಾಗಿ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಹುಲಿ ಸಂರಕ್ಷಣಾ ಸಂಭ್ರಮ ದಿನ ವಿರೋಧಿಸಿ ಆದಿವಾಸಿಗಳಿಂದ ಶೋಕ ದಿನ ಆಚರಣೆ

ಬಳಿಕ ಮಾತನಾಡಿದ ಸಿದ್ದರಾಮಯ್ಯ, “ಶಿವಲಿಂಗೇಗೌಡ ಜನಪರ ಕಾಳಜಿಯ ಶಾಸಕ, ಇವರನ್ನು ಹಾಲಿಗೆ ಹಾಕುತ್ತೇವೆ. ನಂಬಿಕೆ ಇರಲಿ ಪಕ್ಷದಲ್ಲಿ ಅವರಿಗೆ ಯಾವುದೇ ತಾರತಮ್ಯ ಮಾಡುವುದಿಲ್ಲ” ಎಂದು ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...