ಹಾಸನ | ಭೂಹೀನ ದಲಿತ ಕುಟುಂಬಗಳಿಗೆ ಭೂ ಮಂಜೂರುಗಾಗಿ KPRS, DHS ಪ್ರತಿಭಟನೆ

Date:

ಅನುಭವದಲ್ಲಿದ್ದವರನ್ನ ದರಕಾಸ್ತು ರದ್ದುಗೊಳಿಸಿ, ಕಳೆದ 50 ವರ್ಷಗಳಿಂದ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಕಾರೆಕೆರೆ ಕಾವಲುಗ್ರಾಮದ 58 ಭೂಹೀನ ದಲಿತ ಕುಟುಂಬಗಳಿಗೆ ಮಂಜೂರು ಮಾಡಲು ಒತ್ತಾಯಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆಯನ್ನು ಬುಧವಾರ ನಡೆಸಲಾಯಿತು. 

- Advertisement -

ಹಾಸನ ತಾಲ್ಲೂಕು ಶಾಂತಿಗ್ರಾಮ ಹೋಬಳಿಯ ಕಾರೆಕೆರೆ ಕಾವಲಿನ ಸರ್ವೆ ನಂಬರ್ 48, 49, 50, 78, 79, 80, 81, 82, 83, 84, 85, 86, 87, 90, 91, 92, 93, 94, 95, 96, 104, 107, 108, ಹೊಸೂರು ಗ್ರಾಮದ ಸರ್ವೆ ನಂಬರ್ 11, 12, ಹಾಗೂ ಜುಂಜನಹಳ್ಳಿ ಗ್ರಾಮದ ಸರ್ವೆ ನಂಬರ್ 20, 27, 28, 30 ರಲ್ಲಿ ಅನುಭವದಲ್ಲಿ ಇಲ್ಲದವರ ದರಕಾಸ್ತು ಮಂಜೂರು ರದ್ದುಗೊಳಿಸಿ, ಕಳೆದ 60 ವರ್ಷಗಳಿಂದ ಇದೇ ಸರ್ವೆ ನಂಬರ್‌ಗಳಲ್ಲಿ ಭೂಮಿ ಸಾಗುವಳಿ ಮಾಡುತ್ತಿರುವ ಕಾರೆಕೆರೆ ಕಾವಲು ಗ್ರಾಮದ 47 ಭೂಹೀನ ದಲಿತ ಕುಟುಂಬಗಳಿಗೆ ಭೂಮಿ ಮಂಜೂರು ಮಾಡಲು ಕೋರಿ ಮನವಿಯನ್ನು ಮಾಡಲಾಗಿದೆ ಎಂದು ರೈತ ಪ್ರಾಂತ ಸಂಘದ ಹೆಚ್. ಆರ್ ನವೀನ್ ಕುಮಾರ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಹಾಸನ ತಾಲ್ಲೂಕು ಶಾಂತಿಗ್ರಾಮ ಹೋಬಳಿಯ ಕಾರೆಕೆರೆ ಕಾವಲಿನ ಮೇಲ್ಕಾಣಿಸಿದ ಸರ್ವೆ ನಂಬರ್‌ಗಳಲ್ಲಿ 246 ಎಕರೆ ಭೂಮಿಯನ್ನು 1966 ರಲ್ಲಿ 30 ದಲಿತ ಕುಟುಂಬಗಳಿಗೆ ಮಂಜೂರು ಮಾಡಲಾಗುತ್ತದೆ. ಇದರಲ್ಲಿ ಕಾರೆಕೆರೆ ಕಾವಲಿನಲ್ಲಿ ವಾಸವಿದ್ದು ಭೂಮಿಯನ್ನು ಸ್ವಾದೀನಾನುಭವದಲ್ಲಿ ಉಳುಮೆ ಮಾಡಿದ ಕುಟುಂಬಗಳು ಕೇವಲ 10 ಮಾತ್ರ. ಇನ್ನುಳಿದ ವಾಸವಿಲ್ಲದ 20 ಕುಟುಂಬಗಳು ಅಂದಿನಿಂದ ಇಲ್ಲಿಯವರೆಗೂ ಈ ಭೂಮಿಯನ್ನು ಸ್ವಾಧೀನಕ್ಕೆ ತೆಗೆದುಕೊಂಡು ಉಳುಮೆ ಮಾಡಿರುವುದಿಲ್ಲ. ಅದೇ ಪ್ರದೇಶದಲ್ಲಿ ಕಳೆದ 60 ವರ್ಷಗಳಿಂದ ಕಾರೆಕೆರೆ ಕಾವಲು ಗ್ರಾಮದ 47 ಭೂಹೀನ ದಲಿತ ಕುಟುಂಬಗಳು ಭೂಮಿಯಲ್ಲಿ ಸ್ವಾದೀನಾನುಭವದಲ್ಲಿದ್ದು ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿದ್ದಾರೆಂದು ಡಿ. ಎಚ್. ಎಸ್ ಮುಖಂಡ ಪೃಥ್ವಿ ತಿಳಿಸಿದರು.

ಈ ಭೂಮಿಯಲ್ಲಿ ಸ್ವಾಧೀನಾನುಭವದಲ್ಲಿ ಇಲ್ಲದವರ ಮತ್ತು ಈ ಗ್ರಾಮದಲ್ಲಿ ವಾಸವಿಲ್ಲದವರ ಮೂಲ ಮಂಜೂರಾತಿಯನ್ನು ರದ್ದುಗೊಳಿಸಿ, ಹಾಲಿ ಅನುಭವದಲ್ಲಿದ್ದು ಸಾಗುವಳಿ ಮಾಡುತ್ತಿರುವ ಕಾರೆಕೆರೆ ಕಾವಲು ಗ್ರಾಮದ 47 ಕುಟುಂಬಗಳಿಗೆ ಹೊಸದಾಗಿ ಭೂ ಮಂಜೂರು ಮಾಡಿಕೊಡಬೇಕೆಂದು ಈ ಹಿಂದೆ ಹಲವು ಬಾರಿ ತಾಲ್ಲೂಕು ಮತ್ತು ಜಿಲ್ಲಾಡಳಿತಕ್ಕೆ ರೈತರು ವೈಯಕ್ತಿಕವಾಗಿ ಮತ್ತು ಸಾಮೂಹಿಕವಾಗಿ ಹಲವು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಜೊತೆಗೆ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣದ ಅಡಿಯಲ್ಲಿ ಅರ್ಜಿ ನಮೂನೆ 50, 53, ಮತ್ತು 57ನ್ನು ಸಲ್ಲಿಸಿದ್ದಾರೆ. ದಿ. 6.8.2002 ರಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯ ಪತ್ರ ಸಂಖ್ಯೆ ಎಲ್‌ಎನ್‌ಡಿ(1)797:01-02 ಮೈಸೂರು ವಿಭಾಗೀಯ ಕಛೇರಿಗೆ ದರಕಾಸ್ತು ಮಂಜೂರಿ ರದ್ದುಗೊಳಿಸುವ ಕುರಿತು ಪತ್ರ ಬರೆಯಲಾಗಿದ್ದು, ವಿಭಾಗೀಯ ಕಛೇರಿಯಿಂದ ಕೆಲವು ದಾಖಲಾತಿಗಳ ಕುರಿತು ಸ್ಪಷ್ಟೀಕರಣ ಕೇಳಿ ದಿ. 3.9.2022ರಲ್ಲಿ ಹಾಸನ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಈ ಕುರಿತು ಜಿಲ್ಲಾಡಳಿತದಿಂದ ಸಕಾರಾತ್ಮಕ ಸ್ಪಂದನೆ ದೊರೆತಿರುವುದಿಲ್ಲ.

ಪ್ರಸ್ತುತ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಹಾಲಿ ಉಳುಮೆ ಮಾಡುತ್ತಿರುವ ದಲಿತರನ್ನು ಈ ಭೂಮಿಯಿಂದ ವಕ್ಕಲೆಬ್ಬಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೇರೆ ಯಾವ ಆದಾಯದ ಮೂಲವೂ ಇಲ್ಲದೇ, ಇದೇ ಭೂಮಿಯನ್ನು ನಂಬಿ ಕೃಷಿ ಮೂಲಕ ಬದುಕು ಸಾಗಿಸುತ್ತಿರುವ ಕಾರೆಕೆರೆ ಕಾವಲು ಗ್ರಾಮದ 46 ದಲಿತ ಕುಟುಂಬಗಳಿಗೆ ದೀರ್ಘಕಾಲದ ಭೂಸ್ವಾಧೀನಾನುಭವ ಮತ್ತು ಸಾಗುವಳಿಯನ್ನು ಪರಿಗಣಿಸಿ, ಸ್ಥಳಪರಿಶೀಲನೆ ನಡೆಸಿ, ಮೂಲ ಮಂಜೂರಾತಿಯನ್ನು ರದ್ದುಗೊಳಿಸಿ, ಹಾಲಿ ಸಾಗುವಳಿದಾರರಿಗೆ ಭೂಮಿಯನ್ನು ಮಂಜೂರು ಮಾಡಬೇಕಾಗಿ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ಮತ್ತು ದಲಿತ ಹಕ್ಕುಗಳ ಸಮಿತಿ – ಕರ್ನಾಟಕ (ಡಿಹೆಚ್‌ಎಸ್) ಹಾಸನ ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ 47 ಕುಟುಂಬಗಳು ತಮ್ಮ ಕಛೇರಿಯ ಎದುರು ದಿ. 4ರಂದು ಪ್ರತಿಭಟನೆ ನಡೆಸುವ ಮೂಲಕ ಮನವಿ ಮಾಡಿಕೊಳ್ಳಲಾಗಿದೆ ಎಂದು ಸಂಘಟನೆಯ ಮುಖಂಡರು ತಿಳಿಸಿದರು.

ಇದನ್ನೂ ಓದಿದ್ದೀರಾ?ಹಾಸನ | ಶಾಲಾ ಮೈದಾನ; ಯುವಕನ ಮೃತ ದೇಹ ಪತ್ತೆ

ಈ ವೇಳೆ ಹೆಚ್.ಆರ್. ನವೀನ್ ಕುಮಾರ್, ಎಂ.ಜಿ. ಪೃಥ್ವಿ, ಹೆಚ್. ಸ್ವಾಮಿ, ಪಾಂಡುರಂಗ, ಕರ್ನಾಟಕ ಪ್ರಾಂತ ರೈತ ಸಂಘ, ಕಾರೆಕೆರೆ ಕಾವಲು ಗ್ರಾಮ ಘಟಕ ದೇವರಾಜು, ಸುನಿಲ್, ರವಿಕುಮಾರ್, ಧರ್ಮ, ಮೀನಾಕ್ಷಿ, ಮೂರ್ತಿ ಪ್ರಕಾಶ್, ಸುರೇಶ್, ಬಾಬು, ಶಾಂತ ಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...