ಒಂದೇ ದಿನ ಓರ್ವ ಮಹಿಳೆ ಸೇರಿ ನಾಲ್ವರು ಹೃದಯಾಘಾತದಿಂದ ಸರಣಿಯಾಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
ಗೃಹಿಣಿಯಾಗಿದ್ದ ಲೇಪಾಕ್ಷಿ, ಪತಿ ನಾಗರಾಜು ಅವರ ನಡೆಸುತ್ತಿದ್ದ ಹಿಟ್ಟಿನ ಗಿರಣಿ ನೋಡಿಕೊಳ್ಳುತ್ತಿದ್ದರು. ಸೋಮವಾರ ಬೆಳಿಗ್ಗೆ ಮನೆಯಲ್ಲಿದ್ದಾಗ ಲೇಪಾಕ್ಷಿ ಅವರಿಗೆ ದಿಢೀರ್ ಸುಸ್ತು ಕಾಣಿಸಿಕೊಂಡಿದೆ. ಇದನ್ನು ಪತಿ ಬಳಿ ಹೇಳಿಕೊಂಡಿದ್ದಾರೆ. ಕೂಡಲೇ ಲೇಪಾಕ್ಷಿ ಅವರನ್ನು ಸ್ಥಳೀಯ ತಾಲೂಕು ಆಸ್ಪತ್ರೆಗೆ ಕುಟುಂಬಸ್ಥರು ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಲೇಪಾಕ್ಷಿ ಎಂಬ ಮಹಿಳೆ ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಬೇಲೂರು ಪಟ್ಟಣದ ಜೆ.ಪಿ ನಗರದ ನಿವಾಸಿ ಲೇಪಾಕ್ಷಿ (50), ಹೊಳೆನರಸೀಪುರ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಸೋಸಿಯೇಟ್ ಇಂಗ್ಲೀಷ್ ಪ್ರೊಫೆಸರ್ ಮುತ್ತಯ್ಯ (58) ಹಾಗೂ ನುಗ್ಗೇಹಳ್ಳಿ ನಾಡಕಚೇರಿ ಡಿ ಗ್ರೂಪ್ ನೌಕರ ಕುಮಾರ್ (53), ರಂಗೋಲಿ ಹಳ್ಳ ಬಡಾವಣೆ ಆಟೋ ಚಾಲಕ ಸತ್ಯನಾರಾಯಣರಾವ್ ( 63), ಮೃತಪಟ್ಟವರು
ಹಾಗೆಯೇ, ಹೊಳೆನರಸೀಪುರ ತಾಲೂಕಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಅಸೋಸಿಯೇಟ್ ಇಂಗ್ಲಿಷ್ ಪ್ರೊಫೆಸರಾಗಿ ಮುತ್ತಯ್ಯ (58), ಕಾರ್ಯನಿರ್ವಹಿಸುತ್ತಿದ್ದರು. ಬಿಡುವಿನ ಸಮಯದಲ್ಲಿ ಹೊಳೆನರಸೀಪುರ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಟೀ ಕುಡಿಯುವಾಗ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಸ್ಥಳೀಯರು ತಕ್ಷಣ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಮುತ್ತಯ್ಯ ಹೃದಯಾಘಾತದಿಂದ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.
ಮೃತ ವ್ಯಕ್ತಿ ಕುಮಾರ್ (57), ಎಂಬುವರು ಚನ್ನರಾಯಪಟ್ಟಣ ತಾಲೂಕಿನ ನುಗ್ಗೇಹಳ್ಳಿ ಹೋಬಳಿಯ ನಾಡಕಚೇರಿಯಲ್ಲಿ ಡಿ. ಗ್ರೂಪ್ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದರು. ಮನೆಯಲ್ಲಿ ಮಲಗಿದ್ದಾಗ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಕುಟುಂಬದವರು ಆಸ್ಪತ್ರೆಗೆ ರವಾನಿಸಿದ್ದಾರೆ. ಹೃದಯಗಾತದಿಂದ ಮೃತ ಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.

ಎಲ್ಲಾ ಸಾವು ಪ್ರಕರಣ ಹೃದಯಾಘಾತ ಅಲ್ಲ, ಜನರು ಆತಂಕ ಪಡುವ ಅಗತ್ಯ ಇಲ್ಲ, ಜಿಲ್ಲೆಯ ಹೊರಗೆ ಮೃತಪಟ್ಟರೂ ಹಾಸನ ಎಂದು ಲೆಕ್ಕವಾಗುತ್ತಿದೆ. ಆದರೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಏರಿಲ್ಲ. ಅನಾರೋಗ್ಯ ಅಥವಾ ಹೃದಯ ಸಂಬಂಧಿ ಸಮಸ್ಯೆಯಿಂದಲೂ ಸಾವಾಗುತ್ತಿದೆ. ಈ ಬಗ್ಗೆ ಗಮನ ಹರಿಸಲಾಗಿದೆ. ಎಲ್ಲ ಪಿಹೆಚ್ ಸಿ ವ್ಯಾಪ್ತಿಯಲ್ಲಿ ಜನರಿಗೆ ಆರಿವು ಮೂಡಿಸಲು ಕ್ರಮವಹಿಸಲಾಗಿದೆ. ಶಾಲಾ- ಕಾಲೇಜುಗಳಲ್ಲೂ ಯುವ ಜನರಿಗೆ ಅರಿವು ಮೂಡಿಸಲಾಗುತ್ತಿದೆ. ಆರೋಗ್ಯ ಸಮಸ್ಯೆ ಇರುವವರು ನಿಯಮಿತ ಆರೋಗ್ಯ ತಪಾಸಣೆ ಮಾಡಿಸಬೇಕು. ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಅನಾರೋಗ್ಯಕರ ಆಹಾರ ಸೇವನೆ ಬೇಡ. ಈ ಬಗ್ಗೆ ಎಲ್ಲರೂ ಎಚ್ಚೆತ್ತುಕೊಳ್ಳಬೇಕು ಎಂದು ಡಿಹೆಚ್ ಓ ಡಾ. ಅನಿಲ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕುಡಿದ ಅಮಲಿನಲ್ಲಿ ಪ್ರವಾಸಿಗರ ಹೊಡೆದಾಟ
ಹಾಸನ ಜಿಲ್ಲೆಯಲ್ಲಿ ಕಳೆದ ಮೇ 28ರಿಂದ ಇಲ್ಲಿಯವರೆಗೆ ಒಟ್ಟು 21 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಸರಣಿ ಸಾವಿನಿಂದ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಹಾಸನದಲ್ಲಿ ಹೃದಯಾಘಾತ ಹೆಚ್ಚಾಗಲು ಕಾರಣ ತಿಳಿದು ಬಂದಿಲ್ಲ.