ಹಾಸನ l ಮುಂದುವರೆದ ಮೈಕ್ರೋ ಫೈನಾನ್ಸ್‌ ಕಿರುಕುಳ; ಕೊಟ್ಟಿಗೆಗೆ ಬಿದ್ದಿದ್ದ ಕುಟುಂಬ ಮರಳಿ ಮನೆಗೆ

Date:

ರಾಜ್ಯದಲ್ಲಿ ಮೈಕ್ರೊ ಫೈನಾನ್ಸ್‌ ಹಾವಳಿ ಮುಂದುವರೆದಿದ್ದು, ಸಾಲ ಮರುಪಾವತಿಸದ ಕಾರಣಕ್ಕೆ ಮನೆಗೆ ಬೀಗ ಹಾಕಿ ಕುಟುಂಬವನ್ನು ಹೊರಹಾಕಿರುವ ಘಟನೆ ಹಾಸನ ತಾಲೂಕಿನ ದೊಡ್ದ ಆಲದಹಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -

ಆಧಾ‌ರ್ ಹೌಸಿಂಗ್ ಫೈನಾನ್ಸ್ ಸಂಸ್ಥೆಯಿಂದ ಗ್ರಾಮದ ಮಂಜೇಗೌಡ ಮನೆ ನಿರ್ಮಾಣಕ್ಕಾಗಿ ₹9 ಲಕ್ಷ ಸಾಲ ಪಡೆದಿದ್ದರು. ಮನೆ ನಿರ್ಮಾಣದ ಹಂತದಲ್ಲಿರುವಾಗಲೇ ಮಂಜೇಗೌಡ ಅವರ ಮಗ ಅಪಘಾತಕ್ಕೀಡಾದ ಕಾರಣ, ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತು. ಸಾಲ ಕಟ್ಟಲು ಸಾಧ್ಯವಾಗದೆ ಪರದಾಡಿದೆ. ಸಾಲ ಮರುಪಾವತಿ ಮಾಡಲು ವಿಳಂಬವಾಗಿದ್ದರಿಂದ ಮನೆಗೆ ಬೀಗ ಹಾಕಿ ಕುಟುಂಬವನ್ನು ಆಧಾ‌ರ್ ಹೌಸಿಂಗ್ ಫೈನಾನ್ಸ್ ಸಂಸ್ಥೆ ಬೀದಿಗಿಟ್ಟಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಫೈನಾನ್ಸ್‌ ಕಂಪನಿಯ ಕಿರುಕುಳದ ಕಾರಣ ಮಂಜೇಗೌಡರ ಕುಟುಂಬ ತಿಂಗಳುಗಳಿಂದ ಕೊಟ್ಟಿಗೆಯಲ್ಲಿಯೇ ಜೀವನ ನಡೆಸುತ್ತಿತ್ತು. ವಿಷಯ ಬೆಳಕಿಗೆ ಬಂದ ಬಳಿಕ ರೈತ ಸಂಘದ ಕಾರ್ಯಕರ್ತರು ಇಂದು ಫೈನಾನ್ಸ್ ಕಂಪನಿ ಹಾಕಿದ್ದ ಬೀಗ ಒಡೆದು ಕುಟುಂಬವನ್ನು ಮನೆಯೊಳಗೆ ಸೇರಿಸಿದೆ.

ಇದನ್ನೂ ಓದಿದ್ದೀರಾ?ಹಾಸನ | ಜೀತ ಕಾರ್ಮಿಕ ಪ‌ದ್ದತಿ ಆಚರಣೆ ಶಿಕ್ಷಾರ್ಹ ಅಪರಾಧ: ಪಿಡಿಒ ಆರ್‌ ಪ್ರಭಾ

ಆರು ತಿಂಗಳ ಹಿಂದೆ ಕಂಪನಿ ಮನೆಯನ್ನು ಸೀಜ್ ಮಾಡಿತ್ತು. ರೈತ ಸಂಘ ಮಾಡಿದ ಕಾರ್ಯದಿಂದ ಇದೀಗ ಮಂಜೇಗೌಡ ಕುಟುಂಬ ನಿಟ್ಟುಸಿರು ಬಿಟ್ಟಂತಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...