ಹಾಸನ l ಬೆಲೆ ಏರಿಕೆ ವಿರೋಧಿಸಿ: ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಸಿಪಿಐಎಂ ಪ್ರತಿಭಟನೆ

Date:

ಬೆಲೆ ಏರಿಕೆ ಖಂಡಿಸಿ ಹಾಸನ ನಗರದ ಮಹಾವೀರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮಾರ್ಕ್ಸ್‌ವಾದಿ ಕಮ್ಯೂನಿಸ್ಟ್ ಪಕ್ಷ (ಸಿಪಿಐಎಂ) ಪ್ರತಿಭಟನೆಯನ್ನು ಬುಧವಾರ ನಡೆಸಲಾಯಿತು.

- Advertisement -

ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಸಾಮಾನ್ಯರ ಆಧಾಯವನ್ನು ಲೂಟಿ ಮಾಡುತ್ತಿವೆ. ಒಂದೆಡೆ ಕೇಂದ್ರದ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರ ಪೆಟ್ರೋಲ್ ಡೀಸೆಲ್, ಅಡುಗೆ ಅನಿಲ ಸಿಲೀಂಡರ್ ಬೆಲೆಗಳನ್ನು ವಿಪರೀತ ಹೆಚ್ಚಳ ಮಾಡಿದರೆ, ಮತ್ತೊಂದೆಡೆ ರಾಜ್ಯದ ಕಾಂಗ್ರೇಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರ ಹಾಲು, ವಿದ್ಯುತ್, ಮತ್ತಿತರೆ ಅಗತ್ಯವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಎರಡೂ ಸರ್ಕಾರಗಳು ಜನಸಾಮಾನ್ಯರ ಮೇಲಿನ ಹೊರೆಯನ್ನು ಹೆಚ್ಚಳ ಮಾಡಲು ಪೈಪೋಟಿ ನಡೆಸುತ್ತ ಕಾಪೋರೇಟ್ ಪರವಾದ ಜನವಿರೋಧಿ ನೀತಿಗಳಾಗಿವೆ ಎಂದು ಸಿಪಿಐಎಂ ಹಾಸನ ಜಿಲ್ಲಾ ಕಾರ್ಯದರ್ಶಿ ಎಚ್.ಆರ್.ನವೀನ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಕೇಂದ್ರ ರಾಜ್ಯ ಸರ್ಕಾರಗಳ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಬೆಲೆ ಏರಿಕೆಯ ವಿರುದ್ಧ ಬಿಜೆಪಿ ಮತ್ತು ಕಾಂಗ್ರೇಸ್ ಸರ್ಕಾರಗಳು ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸುವ ನೈತಿಕತೆಯನ್ನು ಸಂಪೂರ್ಣ ಕಳೆದುಕೊಂಡಿದ್ದು ಜನರಿಗೆ ಕಣ್ಣೊರೆಸುವ ನಾಟಕ ಮಾಡುತ್ತಿದ್ದಾರೆ. ಒಂದೆಡೆ ದಿನನಿತ್ಯ ದುಡಿದು ತಿನ್ನುವ ಅಸಂಘಟಿತ ಕಾರ್ಮಿಕರು, ರೈತರು, ಬೀದಿ ಬದಿ ವ್ಯಾಪಾರಸ್ತರು, ಶ್ರಮಜೀವಿಗಳ ಆಧಾಯ ವ್ಯಾಪಕವಾಗಿ ಕುಸಿಯುತ್ತಿದ್ದು, ಮತ್ತೊಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಕೂಡಲೇ ಕೇಂದ್ರ ಮತ್ತು ರಾಜ್ಯದ ಎರಡೂ ಸರ್ಕಾರಗಳು ಬೆಲೆ ಏರಿಕೆ ನೀತಿಗಳನ್ನು ಕೈಬಿಟ್ಟು ಕೂಡಲೇ ಜನಸಾಮಾನ್ಯರ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸಿಪಿಐಎಂ ಸಂಘಟಕರು ಆಗ್ರಹಿಸಿದರು.

ಬೆಲೆ ಏರಿಕೆ ಮತ್ತು ರೈತ ಕಾರ್ಮಿಕರ ವಿರೋಧಿ ನೀತಿಗಳನ್ನು ಅನುಸರಿಸಿರುವುದರಲ್ಲಿ ಎರಡೂ ಸರ್ಕಾರಗಳಿಗೂ ಯಾವುದೇ ವ್ಯತ್ಯಾಸಗಳಿಲ್ಲ. ಒಮ್ಮೆ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಸಿಲೆಂಡರ್ ಬೆಲೆಗಳು ಹೆಚ್ಚಾದರೆ ಎಲ್ಲಾ ಅಗತ್ಯವಸ್ತುಗಳ ಬೆಲೆಗಳು ಗಗನಕ್ಕೇರುತ್ತವೆ. ಇದರಿಂದ ನಾಗರೀಕರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಈ ಬೆಲೆ ಏರಿಕೆಯ ಲಾಭವನ್ನು ಕೆಲವೇ ಕೆಲವು ಕಾರ್ಪೊರೇಟ್ ಕಂಪನಿಗಳಿಗೆ ಲಾಭ ಮಾಡಿಕೊಡುವ ಉದ್ದೇಶ ಇದರ ಹಿಂದೆ ಅಡಗಿದೆ. ಇದರಿಂದಾಗಿ ಬಡವರು ಕಡು ಬಡವರಾಗಿ, ಶ್ರೀಮಂತರು ಮತ್ತಷ್ಟು ಶ್ರೀಮಂತರಾಗುತ್ತಿದ್ದಾರೆ. ಆರ್ಥಿಕ ಅಸಮಾನತೆ ದೊಡ್ಡ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ ಎಂದು  ಸಿಐಟಿಯು ಜಿಲ್ಲಾ ಅಧ್ಯಕ್ಷರಾದ ಧರ್ಮೇಶ್ ಮಾತಾಡಿದರು.

ಇದನ್ನೂ ಓದಿದ್ದೀರಾ?ಹಾಸನ l ಜಾನುವಾರು ಕಳವು: ಕಳ್ಳತನ ಮಾಡಿದ ವ್ಯಕ್ತಿಗೆ ಹಲ್ಲೆ 

ಈ ವೇಳೆ ಸಿಪಿಐಎಂ ಕಾರ್ಯದರ್ಶಿ ಎಂ.ಜಿ. ಪೃಥ್ವಿ, ಅರವಿಂದ, ಸತ್ಯನಾರಾಯಣ, ಪುಷ್ಪ, ಪ್ರಕಾಶ್, ರಮೇಶ್ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...

ಕೋಲಾರ | ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಎನ್. ಸಂಪಂಗಿ

ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು...