ಹಾಸನ ಜಿಲ್ಲೆಯಲ್ಲಿ ನವೆಂಬರ್ 20ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಾಸನದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರೂ ಯುವಕೇಂದ್ರದ ಸಹಯೋಗದೊಂದಿಗೆ ಯುವಜನೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಲಿದೆ ಎಂದರು.
ಪ್ರಸಕ್ತ ಸಾಲಿನಲ್ಲಿ ನವಂಬರ್ 20ರಂದು ಬೆಳಿಗ್ಗೆ 9 ಗಂಟೆಗೆ ಕಲಾಭವನ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಯುವಜನೋತ್ಸವ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ.
ಇದನ್ನೂ ಓದಿದ್ದೀರಾ?ಹಾಸನ l ಜ. 1ರಿಂದ ಮಾ. 31 ವರೆಗೆ ರಾಗಿ,ಭತ್ತ, ಬಿಳಿಜೋಳ ಖರೀದಿ: ಜಿಲ್ಲಾಧಿಕಾರಿ ಸತ್ಯಭಾಮ
ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಶಾಲೆ-ಕಾಲೇಜಿನ ವಿದ್ಯಾರ್ಥಿಗಳು 15ರಿಂದ 29 ವರ್ಷದೊಳಗಿನ ಯುವಜನರು ನವಂಬರ್ 18ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಪೂರ್ವ ನೋಂದಣಿ ಮಾಡಿಕೊಳ್ಳಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
