ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಆನೆ ದಾಳಿ ಮಾಡಿರುವ ಘಟನೆ, ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ನಂದಗೊಂಡನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಇತ್ತೀಚಿನ ದಿನಗಳಲ್ಲಿ ರೈತರು ಹಾಗೂ ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರ ಮೇಲೆ ಆನೆ ದಾಳಿಗಳು ಎಲ್ಲೆಡೆ ಹೆಚ್ಚಾಗಿದೆ. ಹಾಗೆಯೇ, ಕೆಲವು ದಿನಗಳ ಹಿಂದೆ ಆನೆ ದಾಳಿಯಿಂದ ಮಹಿಳೆ ಸಾವನ್ನಪ್ಪಿದ್ದರು,
ಹಾಗೆಯೇ, ಆನೆ ದಾಳಿಯಿಂದ ಗಾಯಗೊಂಡ ವ್ಯಕ್ತಿ ಮಂಜುನಾಥ್ (52) ಎಂಬವರ ಮೇಲೆ ಏಕಾಏಕಿ ದಾಳಿ ನಡೆಸಿದ, ಕಾಡಾನೆ ವ್ಯಕ್ತಿಯನ್ನು ಸೊಂಡಲಿನಿಂದ ಎತ್ತಿ ಬಿಸಾಡಿದ ಪರಿಣಾಮ ಗಂಭೀರ ಗಾಯಗಳಾಗಿವೆ.
ಇದನ್ನೂ ಓದಿದ್ದೀರಾ?ಹಾಸನ l ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಆನೆ ದಾಳಿಯಿಂದ ಗಾಯಗೊಂಡ ವ್ಯಕ್ತಿಯನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅರಣ್ಯ ಇಲಾಖೆಯ ಇಟಿಎಫ್ (ಎಲಿಫೆಂಟ್ ಟಾಸ್ಕ್ ಫೋರ್ಸ್) ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
