ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣದಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹಳ್ಳಿಮೈಸೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಮೃತ ವಿದ್ಯಾರ್ಥಿ ಪಲಕೊಡು ಶ್ರೀಧರ್ ರೆಡ್ಡಿ (15) ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ತನ್ನ ಅಜ್ಜಿಯ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆಂಧ್ರಪ್ರದೇಶ ಮೂಲದ ಗುತ್ತಿಗೆದಾರ ವೆಂಕಟರಮಣರೆಡ್ಡಿಯವರ ಮಗನಾದ ಶ್ರೀಧರ್ ರೆಡ್ಡಿ, ಕೆಲಸದ ನಿಮಿತ್ತ ಹಳ್ಳಿಮೈಸೂರಿನಲ್ಲಿ ಕುಟುಂಬದವರ ಜೊತೆ ವಾಸವಾಗಿದ್ದರು.
ಹಳ್ಳಿಮೈಸೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿದ್ದ. ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಶ್ರೀಧರ್ ತನ್ನ ಅಜ್ಜಿಯ ಮನೆಗೆ ತೆರಳಿದ್ದು, ಶುಕ್ರವಾರ ಪ್ರಕಟಗೊಂಡ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಅನುತ್ತೀರ್ಣಗೊಂಡಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದುಬಂದಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು : ರಸ್ತೆ ಅಪಘಾತ; ಇಬ್ಬರಿಗೆ ಗಾಯ
ಈ ಘಟನೆ ಕುರಿತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಶಿಕ್ಷಣ ವ್ಯವಸ್ಥೆಯ ಒತ್ತಡ ಮತ್ತು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಕಡೆ ಪರಿಣಾಮ ಬೀರುತ್ತಿದೆ ಎಂದು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ.
