ಹಾಸನ l ಮದ್ಯ ಸೇವಿಸಿದ ಅಮಲಿನಲ್ಲಿ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ; ಮೂವರು ಆರೋಪಿಗಳು ಪರಾರಿ

Date:

ಮದ್ಯ ಸೇವಿಸಿದ ಅಮಲಿನಲ್ಲಿ ಮೂವರು ಸ್ನೇಹಿತರು ಒಗ್ಗೂಡಿ ಇನ್ನೋರ್ವ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಬೈರಾಪುರ ಬಳಿ ನಡೆದಿದೆ.

- Advertisement -

ಮದ್ಯಪಾನದ ಮತ್ತಿನಲ್ಲಿ ಸ್ನೇಹಿತರಿಂದಲೇ ಹಲ್ಲೆಗೊಳಗಾದ ಯುವಕ ಸತ್ಯ ಅಲಿಯಾಸ್ ಸ್ಪಾಟ್ ಸತ್ಯ ಎಂಬಾತ ಹಾಸನ ನಗರದದ ಬಿ ಕಾಟೀಹಳ್ಳಿಯ ಮೂಲ ನಿವಾಸಿಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸತ್ಯ ಅಲಿಯಾಸ್ ಸ್ಪಾಟ್ ಸತ್ಯ ತನ್ನ ಮೂವರು ಸ್ನೇಹಿತರೊಂದಿಗೆ ಬೈರಾಪುರ ಬಳಿಯಿರುವ ಬಾರ್‌ನಲ್ಲಿ ಪಾರ್ಟಿ ಮಾಡುತ್ತಿದ್ದನು. ನಂತರ ರಸ್ತೆಯಲ್ಲಿ ಸತ್ಯನಿಗೆ ಬಾಟಲ್, ಚಾಕು ಸೇರಿದಂತೆ ಇತರೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದು, ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಮನಸೋಯಿಚ್ಛೆ ಮೂವರು ಸ್ನೇಹಿತರು ಥಳಿಸಿದ್ದಾರೆ.

ಇದನ್ನೂ ಓದಿದ್ದೀರಾ?ಹಾಸನ l ಜ. 1ರಿಂದ ಮಾ. 31 ವರೆಗೆ ರಾಗಿ,ಭತ್ತ, ಬಿಳಿಜೋಳ ಖರೀದಿ: ಜಿಲ್ಲಾಧಿಕಾರಿ ಸತ್ಯಭಾಮ

ಗಂಭೀರವಾಗಿ ಗಾಯಗೊಂಡಿದ್ದ ಸತ್ಯ ಎಂಬಾತ ನಡುರಸ್ತೆಯಲ್ಲಿಯೇ ರಕ್ತದ ಮಡುವಿನಲ್ಲಿ ಬಿದ್ದಿದ್ದನು. ಈ ದೃಶ್ಯವನ್ನು ಕಂಡ ಸ್ಥಳೀಯರು ಆಪೆ ಆಟೋದಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ. ಹಲ್ಲೆ ನಡೆಸಿ ತಲೆಮರೆಸಿಕೊಂಡಿರುವ ಮೂವರು ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ನಡೆಸಿದ್ದಾರೆ. ಗಾಯಾಳು ಸತ್ಯ ಎಂಬಾತನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಪರಿಶೀಲನೆ ನಡೆಸಿ, ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...