ಹಾಸನ l ಎಫ್ ಡಿಎ ವಿರುದ್ದ ಲಂಚ ಆರೋಪ, ಅಮಾನತು ಆಗಿದ್ದರೂ ಕರ್ತವ್ಯ ನಿರ್ವಹಣೆ 

Date:

ಲಂಚ ನೀಡಿದರೂ ದಲಿತ ಎಂಬ ಕಾರಣಕ್ಕೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಖಾಸಗಿ ಶಾಲೆಗೆ ಪರವಾನಗಿ ನೀಡಲು ನಿರಾಕರಣೆ ಹಿನ್ನೆಲೆಯಲ್ಲಿ ಗುರುವಾರ ಡಿಡಿಪಿಐ ಕಚೇರಿಯಲ್ಲೇ ಎಫ್‌ಡಿಎ ಅಧಿಕಾರಿಯನ್ನು ಖಾಸಗಿ ಶಾಲೆಯ ಮಾಲೀಕ ತರಾಟೆ ತೆಗೆದುಕೊಂಡ ಘಟನೆ ನಡೆದಿದೆ.

- Advertisement -

ಡಿಡಿಪಿಐ ಕಚೇರಿ ಸಿಬ್ಬಂದಿ ಮಂಜುನಾಥ್ ಮೇಲೆ ಅರಕಲಗೂಡಿನ ನ್ಯಾಷನಲ್ ಹೆರೋಡೈಟ್ ಶಾಲೆಯ ಮಾಲೀಕ ತೀವ್ರ ವಾಗ್ದಾಳಿ ನಡೆಸಿದ್ದು, ಕಚೇರಿಯಲ್ಲಿ ಆಕ್ರೋಶವನ್ನು ಹೊರ ಹಾಕಿ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ. ಕಚೇರಿಯಲ್ಲಿ ಮಂಜುನಾಥ್ ಅವರು ಕಳೆದ 22 ವರ್ಷದಿಂದ ಪ್ರಥಮ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ ಇದೀಗ ಇವರ ವಿರುದ್ಧ 50 ಸಾವಿರ ಹಣ ಪಡೆದಿರುವ ಆರೋಪ ಕೇಳಿ ಬಂದಿದೆ. 2009ರಲ್ಲಿ ತನ್ನಿಂದ 50,000 ಹಣ ಪಡೆಯುವ ಜೊತೆಗೆ ಮತ್ತೆ ಇದೀಗ ಈಗಾಗಲೇ 50 ಸಾವಿರ ರೂಪಾಯಿ ಚೆಕ್‌ ನೀಡಿದ್ದೇನೆ. ಆದರೂ ಪರವಾನಗಿ ನೀಡಲು ಮೂಲಭೂತ ಸೌಕರ್ಯಗಳ ಕೊರತೆ ನೆಪ ಹೇಳಿ ವಿಳಂಬ ಮಾಡುತ್ತಿದ್ದಾರೆ ಎಂದು ಶಾಲೆಯ ಮಾಲೀಕ ರಂಗಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಹಿಂದೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಇದೇ ಮಂಜುನಾಥ್ ಅಮಾನತು ಗೊಂಡಿದ್ದರು. ಆದರೆ ಕೆಎಟಿ ಹಾಗೂ ಹೈಕೋರ್ಟ್‌ನಲ್ಲಿ ದಾಖಲಾದ ಪ್ರಕರಣಗಳಲ್ಲಿ ಅರ್ಜಿದಾರರ ಪರವಾಗಿ ಯಾವುದೇ ಆದೇಶ ಆಗಿಲ್ಲ. ನಂತರ ಎರಡೂ ಕಡೆ ಅರ್ಜಿ ವಜಾ ಆಗಿದೆ. ನಂತರ ಮುಂದಿನ ಕ್ರಮಕ್ಕೆ ಡಿಡಿಪಿಐ ಡಿಸಿ ಅವರು ಪತ್ರ ಬರೆದಿದ್ದರು. ಡಿಸಿ ಸಿ. ಸತ್ಯಭಾಮ ಅವರು ಕಳೆದ ಡಿ.19 ರಂದು ಮಂಜುನಾಥ್ ಅವರ ಅಮಾನತು ಆದೇಶ ಮುಂದುವರಿಯಲಿದೆ. ವಿಚಾರಣೆ ನಡೆಸಿ ಅಗತ್ಯ ಕ್ರಮ ಕೈಗೊಂಡು ವರದಿ ನೀಡುವಂತೆ ಸೂಚಿಸಿದ್ದರು. ಆದರೂ ಇಲಾಖೆ ಅಧಿಕಾರಿಗಳು ಮಂಜುನಾಥ್ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡದೆ ನಿರ್ಲಕ್ಷ್ಯ ತೋರಿದ್ದಾರೆ. ಮಂಜುನಾಥ್ ಈಗಲೂ ಸೇವೆ ಮುಂದುವರಿಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿದ್ದೀರಾ?ಹಾಸನ | ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

ಮೂಲಭೂತ ಸೌಕರ್ಯಗಳ ಕೊರತೆ ಇದ್ದರೂ ಲಂಚ ಕೊಟ್ಟರೆ ಅಧಿಕಾರಿಯು ಪರವಾನಗಿ ನೀಡುತ್ತಿದ್ದಾರೆ. ನನ್ನನ್ನು ದಲಿತನೆಂಬ ಕಾರಣಕ್ಕೆ ಪರವಾನಗಿ ನೀಡಲು ವಿಳಂಬ ಮಾಡಿ ಸಂಸ್ಥೆಯನ್ನು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ತನ್ನ ಮೇಲೆ ದೌರ್ಜನ ಮಾಡುತ್ತಿರುವ ಮಂಜುನಾಥ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಲೆಯ ಮಾಲೀಕ ರಂಗಸ್ವಾಮಿ ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...