ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ರಾಮೇಶ್ವರ ಬಡಾವಣೆಯಲ್ಲಿ ರಸ್ತೆ ಬದಿ ನಿಂತಿದ್ದ, ಕಾರಿನೊಳಗೆ ದಿಡಗ ಗ್ರಾಮ ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿಯ ಶವ ಪತ್ತೆಯಾಗಿದೆ.
ಮೃತ ವ್ಯಕ್ತಿ ಶಿವಪ್ರಸಾದ್ (32) ಆಲೂರು ತಾಲ್ಲೂಕಿನ ಸಿದ್ದಾಪುರ ಗ್ರಾಮದ ನಿವಾಸಿಯಾಗಿದ್ದರು, ಅತಿಯಾಗಿ ಮದ್ಯ ಸೇವಿಸುವ ಚಟ ಹೊಂದಿದ್ದರು, ಶುಕ್ರವಾರ ತಡರಾತ್ರಿ ಮದ್ಯ ಸೇವಿಸಿ, ತಮ್ಮ ಕಾರಿನೊಳಗೆ ಮಲಗಿದ್ದ ಅವರು, ಅಲ್ಲಿಯೇ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದರು.
ಇದನ್ನೂ ಓದಿದ್ದೀರಾ?ಹಾಸನ | ಪ್ರಜ್ವಲ್ ರೇವಣ್ಣ ಲೈಂಗಿಕ ಹಲ್ಲೆ ಪ್ರಕರಣ; ದಿನನಿತ್ಯ ವಿಚಾರಣೆ
ಕಾರಿನ ಕೀ ಒಳಗೆ ಇರುವುದು ಹಾಗೂ ಕಾರು ನಿಂತ ಸ್ಥಿತಿಯಲ್ಲಿಯೇ ಇರುವುದನ್ನು ಗಮನಿಸಿದ ಸ್ಥಳೀಯರು, ಚನ್ನರಾಯಪಟ್ಟಣ ನಗರ ಠಾಣೆಗೆ ಮಾಹಿತಿ ನೀಡಿದ್ದರಿಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮೆಕ್ಯಾನಿಕ್ ಸಹಾಯದಿಂದ ಕಾರಿನ ಬಾಗಿಲು ತೆಗೆದು ಪರಿಶೀಲಿಸಿದಾಗ, ಶಿವಪ್ರಸಾದ್ ಕಾರಿನೊಳಗೆ ವಿಷ ಸೇವಿಸಿ ಮೃತಪಟ್ಟಿರುವುದು ಸಧ್ಯದ ಪರಿಸ್ಥಿಯ ತನಿಖೆಯಲ್ಲಿ ತಿಳಿದು ಬಂದಿದೆ.
