ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿರುವ ಬಿ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಫೆಬ್ರವರಿ 22ರಂದು ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಡಿಸಿ ಉಪಾಧ್ಯಕ್ಷ ಎಸ್ ಸಿ ಚೌಡೇಗೌಡ ತಿಳಿಸಿದ್ದಾರೆ.
ಉದ್ಯೋಗ ಮೇಳ ನಡೆಸುವ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತಾನಾಡಿದ ಅವರು, “ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಜಾಗತಿಕ ಸ್ಪರ್ಧೆಗೆ ತಯಾರಿಸುವ ನಿಟ್ಟಿನಲ್ಲಿ ಹಾಗೂ ತಾಲೂಕಿನಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದು, ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಳ್ಳಬೇಕು” ಎಂದು ಹೇಳಿದರು.
ನಮ್ಮ ತಾಲೂಕಿನಲ್ಲಿ ಐದನೇ ಬೃಹತ್ ಉದ್ಯೋಗ ಮೇಳವಾಗಿದೆ. ಬೆಂಗಳೂರಿನ 30ಕ್ಕಿಂತ ಹೆಚ್ಚು ಕಂಪನಿಗಳು, ಈ ಉದ್ಯೋಗ ಮೇಳದಲ್ಲಿ ಭಾಗವಹಿಸುತ್ತಿದ್ದು, ಅರಕಲಗೂಡು ವಿಧಾನಸಭಾ ಕ್ಷೇತ್ರದ ನಿರುದ್ಯೋಗಿ ಹಾಗೂ ವಿದ್ಯಾವಂತ ಯುವಕ, ಯುವತಿಯರು ಅವಕಾಶವನ್ನು ಉಪಯೋಗಿಸಿಕೊಳ್ಳಬೇಕಾಗಿದೆ. ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲೂ ಧ್ವನಿವರ್ಧಕದ ಮೂಲಕ ಪ್ರಚಾರ ನಡೆಸಿ, ಪ್ರತಿ ಮನೆ ಮನೆಗೂ ಕರಪತ್ರಗಳನ್ನು ತಲುಪಿಸಬೇಕಾಗಿದೆ” ಎಂದು ಪೂರ್ವಭಾವಿ ಸಭೆಯಲ್ಲಿ ತಿಳಿಸಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಸರ್ವೇ ಅಧಿಕಾರಿ ಆತ್ಮಹತ್ಯೆ
ಈ ವೇಳೆ ಕಾಲೇಜು ಸಿಬ್ಬಂದಿ, ಮುಖ್ಯೋಪಾಧ್ಯಾಯರು, ಸಿಡಿಸಿ ಉಪಾಧ್ಯಕ್ಷರು ಸೇರಿದಂತೆ ಇತರರು ಇದ್ದರು.
