ಹಾಸನ l ರೈತರಿಗೆ ಬೆಂಬಲ ಬೆಲೆ: ಸಂಸದರು ಧ್ವನಿ ಎತ್ತದಿದ್ದರೆ ಉಪವಾಸ ಸತ್ಯಾಗ್ರಹ; ರೈತ ಸಂಘ ಎಚ್ಚರಿಕೆ

Date:

ಅನ್ನದಾತರ ವಿವಿಧ ಸಮಸ್ಯೆಗಳ ಬಗ್ಗೆ ಸಂಸತ್ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಹಾಸನದಲ್ಲಿ ಸಂಸದರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

- Advertisement -

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಮ್ಮ ಜಿಲ್ಲೆಯ ರೈತರು ರಾಷ್ಟ್ರೀಯ ಕಿಸಾನ್ ಮೋರ್ಚಾ ಅಧ್ಯಕ್ಷ ಜಗಜಿತ್ ಸಿಂಗ್ ದಲೈವಾ ಅವರ ನೇತೃತ್ವದಲ್ಲಿ ನವೆಂಬರ್ 26ರಿಂದ ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ಅದರಂತೆ ಕರ್ನಾಟಕದಲ್ಲಿ ಜಿಲ್ಲಾವಾರು ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾ‌ರ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಹಾಸನ ಜಿಲ್ಲೆಯ ಕೊಬ್ಬರಿ, ಜೋಳಕ್ಕೆ ಬೆಂಬಲ ಬೆಲೆ ಸಿಗುತ್ತಿಲ್ಲ. ರೈತರು ಪಡೆದಿರುವ ವಿದ್ಯುತ್ ಸಂಪರ್ಕಕ್ಕೆ ಲಕ್ಷಾಂತರ ಹಣ ವಸೂಲಿ ಮಾಡಲು ಸರ್ಕಾರ ಚಿಂತಿಸಿರುವುದು ಸರಿಯೇ, ನಮ್ಮಿಂದ ಆಯ್ಕೆಯಾದ ಸಂಸತ್ ಸದಸ್ಯರು ರೈತರ ಪರ ಪ್ರಬಲ ಧ್ವನಿ ಎತ್ತುತ್ತಿಲ್ಲ ಎಂದು ರೈತ ಸಂಘದ ಶಾಂತರಾಜು ತಿಳಿಸಿದರು.

ದೆಹಲಿ ರೈತ ಹೋರಾಟದ ರೂವಾರಿ, ರಾಷ್ಟ್ರೀಯ ರೈತ ಮುಖಂಡ ಜಗಜೀತ್ ಸಿಂಗ್ ದಲೈವಾಲ ಅವರ ಉಪವಾಸ 15ನೇ ದಿನಕ್ಕೆ ಮುಂದುವರಿದಿದ್ದು, ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿದೆ. ಇಂತಹ ಗಂಭೀರ ಸ್ಥಿತಿಯಲ್ಲಿಯೂ ಸಂಸದರು ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡದಿರುವುದು ವಿಪರ್ಯಾಸ ಎಂದು ರೈತ ಸಂಘದ ಮುಖಂಡ ಶಾಂತರಾಜು ತಿಳಿಸಿದರು.

ನಾವು ಕೇಂದ್ರ ಸರ್ಕಾರವನ್ನು ಭಿಕ್ಷೆ ಕೇಳುತ್ತಿಲ್ಲ. ನಮ್ಮ ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಕೇಳುತ್ತಿದ್ದೇವೆ ಅಷ್ಟೇ. ಪ್ರಧಾನಿ ಮೋದಿಯವರು ಎರಡು ವರ್ಷಗಳ ಹಿಂದೆ ರೈತರಿಗೆ ನೀಡಿದ್ದ ಭರವಸೆ ಈಗ ಹುಸಿಯಾಗಿದೆ. ದೇಶದ ರೈತರಿಗಾಗಿ ತಮ್ಮ ಪ್ರಾಣವನ್ನು ಪಣಕಿಟ್ಟು ಉಪವಾಸ ನಡೆಸುತ್ತಿರುವ ಜಗಜೀತ್ ಸಿಂಗ್ ದಲೈವಾಲ ಅವರ ಜೊತೆ ಕೇಂದ್ರ ಸರ್ಕಾರ ಕೂಡಲೇ ಮಾತುಕತೆ ನಡೆಸಿ ರೈತರ ಬೇಡಿಕೆ ಈಡೇರಿಸಬೇಕು ಎಂದು ರೈತ ಮುಖಂಡರಾದ ಶಾಂತರಾಜು ತಿಳಿಸಿದರು.

ದೇಶದ ರೈತರ ಸಂಪೂರ್ಣ ಸಾಲಮನ್ನಾ ಆಗಬೇಕು. 60 ವರ್ಷ ತುಂಬಿದ ರೈತ ರಿಗೆ ಪಿಂಚಣಿ ಯೋಜನೆ ಜಾರಿಗೆ ತರಬೇಕು. ಬೆಳೆ ವಿಮೆ ಪದ್ಧತಿ ಬದಲಾಗಬೇಕು. ಪ್ರತಿ ರೈತನ ಹೊಲದ ಬೆಳೆ ವಿಮೆ ಪರಿಹಾರ ಪದ್ಧತಿಯನ್ನು ಜಾರಿಗೆ ತರಬೇಕು. ಎಲ್ಲ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಯಾಗಬೇಕು ಎಂದು ಹೆಚ್ . ಬಿ ಧರ್ಮರಾಜ ತಿಳಿಸಿದರು.

ಇದನ್ನೂ ಓದಿದ್ದೀರಾ?ಹಾಸನ | ದೀನ ದಲಿತರು, ಎಲ್ಲ ವರ್ಗದ ಮಹಿಳೆಯರಿಗೆ ಸ್ವಾಭಿಮಾನದ ಬದುಕು ಕಲ್ಪಿಸಿದವರೇ ಅಂಬೇಡ್ಕರ್: ಶಾಸಕ ಸ್ವರೂಪ್

ಈ ವೇಳೆ ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಹೆಚ್.ಬಿ.ಧರ್ಮರಾಜು, ಅತ್ತಿಹಳ್ಳಿ ದೇವರಾಜು, ದರ್ಶನ್, ಪವನ್, ಯೋಗಾನಂದ್, ಕೃಷ್ಣ ಮೂರ್ತಿ, ತೀರ್ಥಕುಮಾ‌ರ್, ಬಡಗಲಪುರ ನಾಗರಾಜು, ಸೂರಿ, ಧರಣಿ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿರ್ಲಾ ಎಸ್ಟೇಟ್ ಹೆಸರಿನಲ್ಲಿ ದೋಖಾ; 8 ಲಕ್ಷ ರೂ. ಕಳೆದುಕೊಂಡ ಉದ್ಯಮಿ!

ಕಡಿಮೆ ದರಕ್ಕೆ ಕಬ್ಬಿಣದ ಸರಳುಗಳನ್ನು ನೀಡುತ್ತೇವೆ ಎಂದು ನಂಬಿಸಿ, ಶಿವಮೊಗ್ಗದ ಉದ್ಯಮಿಯೊಬ್ಬರಿಗೆ...

ಶಿವಮೊಗ್ಗ | ಹಾವು ಕಡಿತದಿಂದ ರೈತ ಅಸ್ವಸ್ಥ: ಆಸ್ಪತ್ರೆಗೆ ಸಾಗಿಸಲು ʻ108ʼ ಸಿಬ್ಬಂದಿ ನಕಾರ

ಶಿವಮೊಗ್ಗ ಜಿಲ್ಲೆಯ ನಗರ ಸಮೀಪದ ಕರಿಮನೆಯ ಕಾಡಿಗೆರೆ ಗ್ರಾಮದ ರೈತ ಜಮೀನಿನಲ್ಲಿ...

ಜಾಮಿಯಾ ಮಸೀದಿ ಉಪ್ಪಿನಕೋಟೆ: ನೂತನ ಕಮಿಟಿ ರಚನೆ, ಅಧ್ಯಕ್ಷರಾಗಿ ತಾಜುದ್ದೀನ್ ಇಬ್ರಾಹಿಂ ಆಯ್ಕೆ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಉಪ್ಪಿನಕೋಟೆ ಜಾಮಿಯಾ ಮಸೀದಿಯ ಮಹಾಸಭೆಯು ಅ.4ರಂದು...

ಶಿವಮೊಗ್ಗ | ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಸೈಕಲ್ ಜಾಥಾ

ಶಿವಮೊಗ್ಗ ವನ್ಯಜೀವಿ ವಿಭಾಗದ ವತಿಯಿಂದ 72ನೇ ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಅಕ್ಟೋಬರ್...