ಹಾಸನ l ಅಕ್ರಮವಾಗಿ ಮದ್ಯ ಮಾರಾಟ; ನಾಶ ಪಡಿಸಿದ ಅಬಕಾರಿ ಇಲಾಖೆ ಅಧಿಕಾರಿಗಳು

Date:

ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಹಲವಾರು ಪ್ರಕರಣಗಳಲ್ಲಿ ವಶಕ್ಕೆ ಪಡೆದಿದ್ದ ಅಕ್ರಮ ಮದ್ಯವನ್ನು ಪ್ರಾಧಿಕೃತ ಅಧಿಕಾರಿ ಹಾಗೂ ಅಬಕಾರಿ ಉಪಆಯುಕ್ತರ ಆದೇಶದಂತೆ ಅಬಕಾರಿ ಉಪ ಅಧೀಕ್ಷಕ ಎಂ ಹೆಚ್ ರಘು, ತಹಸೀಲ್ದಾರ್ ಗ್ರೇಡ್-2 ಅಶೋಕ್ ಕುಮಾರ್ ಸೇರಿದಂತೆ ಇತರರ ಸಮ್ಮುಖದಲ್ಲಿ ಸಿಬ್ಬಂದಿಗಳು ಮದ್ಯ ನಾಶಪಡಿಸಿದರು.

- Advertisement -

ಹಾಸನ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕ ಎಂ ಹೆಚ್ ರಘು ಸುದ್ದಿಗಾರರೊಂದಿಗೆ ಮಾತನಾಡಿ, “ಅಬಕಾರಿ ಮೊಕದ್ದಮೆ ಹಾಗೂ ಪೊಲೀಸ್ ಮೊಕದಮ್ಮೆಗಳಲ್ಲಿ ವಶಕ್ಕೆ ಪಡೆದ 5 ಪ್ರಕರಣಗಳಲ್ಲಿ 486.465 ಲೀಟರ್ ಮದ್ಯ, 172.310 ಲೀಟರ್ ಬಿಯರ್, 06 ಲೀಟರ್ ಕಳ್ಳಭಟ್ಟಿ, 14.5 ಲೀಟರ್ ಬೆಲ್ಲದ ಕೊಳೆ ಹಾಗೂ ಇತರೆ ವಸ್ತುಗಳನ್ನು ಅಬಕಾರಿ ಉಪ ಆಯುಕ್ತರ ಆದೇಶ‌ದಂತೆ ಇಲಾಖೆ ಅಧಿಕಾರಿಗಳ ಹಾಗೂ ತಹಶೀಲ್ದಾರ್ ಗ್ರೇಡ್-2 ಅಶೋಕ್ ಕುಮಾರ್ ಸಮ್ಮುಖದಲ್ಲಿ ಪರಿಸರಕ್ಕೆ ಹಾನಿಯಾಗದಂತೆ ಮದ್ಯ ನಾಶಪಡಿಸುತ್ತಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಯಾರಾದರೂ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದು, ಸರಬರಾಜು ಮಾಡುವುದು ಕಂಡು ಬಂದಲ್ಲಿ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಮುಖ್ಯವಾಗಿ ಬಾರ್ ಅಂಡ್‌ ರೆಸ್ಟೋರೆಂಟ್‌ಗಳಲ್ಲಿ ಸ್ವಚ್ಛತೆ ಕೊರತೆ ಬಗ್ಗೆ ದೂರು ಕಂಡುಬಂದಲ್ಲಿ ಅಂತಹವರನ್ನು ಕರೆದು ತಿಳಿ ಹೇಳುತ್ತೇವೆ. ಆದರೂ ಸರಿ ಪಡಿಸದಿದ್ದಲ್ಲಿ ಕ್ರಮಕ್ಕೆ ಮುಂದಾಗಲಿದ್ದೇವೆ” ಎಂದು ಅಬಕಾರಿ ಇಲಾಖೆ ತಹಶೀಲ್ದಾರ್ ಗ್ರೇಡ್-2 ಅಶೋಕ್ ಕುಮಾರ್ ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿದ್ದೀರಾ?ಹಾಸನ | ಗರ್ಭ ಕೊರಳ, ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಜಾಥಾ

ಈ ವೇಳೆ ಅಬಕಾರಿ ಇಲಾಖೆ ತಹಶೀಲ್ದಾರ್ ಗ್ರೇಡ್-2 ಅಶೋಕ್ ಕುಮಾರ್, ನಿರೀಕ್ಷಕಿ ಎ ಟಿ ಚಂದನ, ಅಬಕಾರಿ ಉಪ ನಿರೀಕ್ಷಕ ಹರೀಶ್ ಸಿ ಹಾಗೂ ಹಾಸನದ ಕೆಎಸ್‌ಬಿಎಲ್ ಡಿಪೋ-2 ವ್ಯವಸ್ಥಾಪಕರು ಹಾಗೂ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...