ಹಾಸನ l ಅಕ್ರಮ ಸಂಬಂಧಕ್ಕೆ ಅಡ್ಡಿ: ವ್ಯಕ್ತಿಯ ಹತ್ಯೆ 

Date:

Advertisements

ಪತ್ನಿಯೇ ಪ್ರೀತಿಸಿದ ಪ್ರಿಯಕರನ ಜೊತೆ ಸೇರಿ ಸುಪಾರಿಕೊಟ್ಟು ಪತಿಯನ್ನೇ ಬರ್ಬರವಾಗಿ ಕೊಲೆ ಮಾಡಿಸಿದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ, ಮರುವನಹಳ್ಳಿ- ಮಡಬ ರಸ್ತೆಯಲ್ಲಿ ಗುರುವಾರ ನಡೆದಿದೆ. 

ಕೊಲೆಯಾದ ಲೋಕೇಶ,(ನಂಜುಂಡೇಗೌಡ) ಚನ್ನರಾಯ ಪಟ್ಟಣ ತಾಲ್ಲೂಕಿನ ಕುಂಬಾರಹಳ್ಳಿ ಗ್ರಾಮದವರು. ಅದೇ ಗ್ರಾಮದ ಅರುಣ ತನ್ನ ಸಹಚರರೊಂದಿಗೆ ಸೇರಿ ಲೋಕೇಶನನ್ನು ಹತ್ಯೆ ಮಾಡಿದ್ದಾನೆ.

ಘಟನೆ ಏನಿದು: ಸುಮಾರು 14 ವರ್ಷಗಳ ಹಿಂದೆ ಸವಿತಾ ಎಂಬುವರ ಜೊತೆ ವಿವಾಹವಾಗಿದ್ದು, ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮದುವೆಯಾಗಿ ಮೂರು ವರ್ಷದವರೆಗೂ ಪತಿ ಜೊತೆ ಚೆನ್ನಾಗಿದ್ದ ಸವಿತಾ, ನಂತರ ಎದುರು ಮನೆಯ ಅರುಣ್‌ ಎಂಬಾತನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಳು.

Advertisements

ಈ ವಿಚಾರ ಗ್ರಾಮಸ್ಥರಿಗೆ ಹಾಗೂ ಕುಟುಂಬಸ್ಥರಿಗೆ ತಿಳಿದ ಕೂಡಲೇ ಮೃತ ಲೋಕೇಶ್, ಅರುಣನ ವಿರುದ್ಧ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು, ನಂತರ ಈ ಗ್ರಾಮದ ಗ್ರಾಮಸ್ಥರು ಪಂಚಾಯಿತಿ ನಡೆಸಿ ಹೊಂದಿಕೊಂಡು ಹೋಗುವಂತೆ ಕುಟುಂಬಸ್ಥರು ತಿಳಿ ಹೇಳಿದ್ದರೂ ಬದಲಾಗದ ಸವಿತಾ ತನ್ನ ಮನೆಯಲ್ಲಿ ಏನೇ ನಡೆದರೂ, ಎಲ್ಲವನ್ನೂ ಪ್ರಿಯಕರಿನಿಗೆ ತಿಳಿಸುತ್ತಿದ್ದಳು, ತನ್ನ ಅಕ್ರಮ ಸಂಬಂಧಕ್ಕೆ ಯಾರೂ ಅಡ್ಡಿ ಮಾಡಬಾರದೆಂದು ಪತಿಯನ್ನು ಅವರ ಸಂಬಂಧಿಕರಿಂದ ದೂರ ಮಾಡಿದ್ದಳು. ತನ್ನ ಎರಡು ಹೆಣ್ಣುಮಕ್ಕಳಿಗಾಗಿ ಲೋಕೇಶ್ ಎಲ್ಲವನ್ನೂ ಸಹಿಸಿಕೊಂಡಿದ್ದನು, ಆದರೆ ತನ್ನ ಗಂಡನನ್ನೇ ಪ್ರೀತಿಸಿದವನಿಗೋಸ್ಕರ ಕೊಲೆ ಮಾಡಿಸಿ ಬಿಟ್ಟಳು ಎಂದು ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಆರೋಪವನ್ನು ವ್ಯಕ್ತಪಡಿಸಿದ್ದಾರೆ.

ಹತ್ಯೆಗೆ ಮಾಡಿದ ಸಂಚು: ಈ ಹಿಂದೆ ಕೆಲ ದಿನಗಳ ಹಿಂದೆ ಎರಡು ಬಾರಿ ಲೋಕೇಶ (ನಂಜುಂಡೇಗೌಡ)ನ ಮೇಲೆ ಅರುಣ ತನ್ನ ಸಹಚರರೊಂದಿಗೆ ಸೇರಿ ಅಟ್ಯಾಕ್ ಮಾಡಿದ್ದ. ಆಗ ಅದೃಷ್ಟವಶಾತ್ ಲೋಕೇಶ ಬಚಾವಾಗಿದ್ದರು, ಮೂರನೇ ಬಾರಿ ತಪ್ಪಿಸಿಕೊಳ್ಳಬಾರದು ಎಂದು ಸವಿತಾ ಹಾಗೂ ಅರುಣ ಖತರ್ನಾಕ್ ಸ್ಕೆಚ್ ಹಾಕಿದ್ದರು. ಮರುವನಹಳ್ಳಿ-ಮಡಬ ಮಾರ್ಗ ಮಧ್ಯೆ ಮಹೀಂದ್ರಾ ಜಿತೋ ವಾಹನದಲ್ಲಿ ಬರುತ್ತಿದ್ದ ಲೋಕೇಶನ ಕೊಲೆಗೆ ಮೂರು ಜಾಗಗಳನ್ನು ಆರೋಪಿಗಳು ಗುರುತಿಸಿಕೊಂಡಿದ್ದರು.

ಬ್ಯಾಡರಹಳ್ಳಿಗೆ ಹೋಗುವ ರಸ್ತೆ ಮಧ್ಯೆಯಿರುವ ಬೋರೆಯ ಬಳಿ ಮರದಪಟ್ಟಿಗೆ ಉದ್ದವಾದ 50 ಕ್ಕೂ ಹೆಚ್ಚು ಮೊಳೆ ಚುಚ್ಚಿ ರಸ್ತೆಗೆ ಇಟ್ಟು ಹುಲ್ಲು ಮುಚ್ಚಿದ್ದರು. ಇದ್ಯಾವುದೂ ತಿಳಿಯದ ಲೋಕೇಶ, ಎಂದಿನಂತೆ ಹಾಲು ಅಳೆಸಿಕೊಂಡು ಗುರುವಾರ ರಾತ್ರಿ 8.30 ರ ಸುಮಾರಿಗೆ ಮಹೀಂದ್ರಾ ಜಿತೋ ವಾಹನದಲ್ಲಿ ತೆರಳುತ್ತಿದ್ದರು.

ರಸ್ತೆಯಲ್ಲಿ ಚಕ್ರಕ್ಕೆ ಮೊಳೆ ಸಿಕ್ಕಿ ಪಂಚರ್ ಆದ ವಾಹನದಿಂದ ತಕ್ಷಣವೇ ಕೆಳಗಿಳಿದು ಮೊಳೆ ಹೊಡೆದಿದ್ದ ರಿಪೀಸ್ ಪಟ್ಟಿ ವಾಹನಕ್ಕೆ ಹಾಕಿಕೊಂಡಿರುವುದು ಗೊತ್ತಾಯಿತು. ತಕ್ಷಣ ಲೋಕೇಶ ಸ್ನೇಹಿತ ತಮ್ಮಯ್ಯ ಎಂಬುವವರಿಗೆ ಕರೆ ಮಾಡಿ, ಯಾರೋ ರಿಪೀಸ್ ಪಟ್ಟಿಗೆ ಮೊಳೆ ಹೊಡೆದು ಅದರ ಮೇಲೆ ಹುಲ್ಲು ಮುಚ್ಚಿದ್ದಾರೆ. ವಾಹನ ಪಂಚರ್ ಆಗಿದೆ ಬೇಗ ಸ್ಥಳಕ್ಕೆ ಬನ್ನಿ ಎಂದು ಹೇಳಿ ವಾಹನದಲ್ಲಿ ಕುಳಿತಿದ್ದ.

ಈ ವೇಳೆ ಏಕಾಏಕಿ ದಾಳಿ ಮಾಡಿ ಲೋಕೇಶನ ಕಣ್ಣಿಗೆ ಖಾರದಪುಡಿ ಎರಚಿ, ಲಾಂಗ್‌ಗಳಿಂದ ಸಾಯುವವರೆಗೂ ಮನಬಂದಂತೆ ಕೊಚ್ಚಿ, ಲಾಂಗನ್ನು ಅಲ್ಲೇ ಬಿಟ್ಟು ಎಸ್ಕೆಪ್ ಆಗಿದ್ದರು. ಲೋಕೇಶ್ ಸ್ನೇಹಿತರು ಬರುವುದರೊಳಗೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ವಿಚಾರ ತಿಳಿದ ಕೂಡಲೇ ಪತ್ನಿ ಸವಿತಾ ಪ್ರಜ್ಞೆ ತಪ್ಪಿರುವಾಗೆ ನಾಟಕ ಆಡಿದಾಗ ಪೊಲೀಸ್ ಅವರಿಗೆ ಅನುಮಾನ ಬಂದು ವಿಚಾರಿಸಿದಾಗ ಸತ್ಯಾಂಶ ಹೇಳಿದ್ದಾಳೆ.

ಶುಕ್ರವಾರ ಸಂಜೆ ಕುಂಬಾರಹಳ್ಳಿ ಗ್ರಾಮದಲ್ಲಿ ಲೋಕೇಶ್ ಅವರ ಅಂತ್ಯಕ್ರಿಯೆ ನಡೆದಿದ್ದು, ಅವರ ಮಕ್ಕಳು ಹಾಗೂ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿದ್ದೀರಾ?ಹಾಸನ l ಜಿಲ್ಲೆಯ ಅಭಿವೃದ್ಧಿ ಮಾಡಿಯೇ, ರಾಜಕೀಯಕ್ಕೆ ನಿವೃತ್ತಿ ಪಡೆಯುವೆ; ಶಾಸಕ ಹೆಚ್ ಡಿ ರೇವಣ್ಣ 

ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X