ಹಾಸನ l ಮಹಾತ್ಮ ಜ್ಯೋತಿಬಾ ಫುಲೆ ಜಯಂತಿ ಆಚರಣೆ 

Date:

ಮಹಾತ್ಮ ಜ್ಯೋತಿಬಾ ಪುಲೆ ಅವರ 198ನೇ ಜಯಂತಿಯನ್ನು ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಭೀಮ ಆರ್ಮಿ ಸಂಘಟನೆ ವತಿಯಿಂದ ಶುಕ್ರವಾರ ಆಚರಿಸಲಾಯಿತು.

- Advertisement -

“ಜ್ಯೋತಿಬಾ ಪುಲೆ ಅವರು 1827 ಏಪ್ರಿಲ್ 11 ರಂದು ಮಹಾರಾಷ್ಟ್ರದ ಸತಾರ ಎಂಬಲ್ಲಿ ಜನಿಸಿ, ಚಿಕ್ಕಂದಿನಿಂದಲೇ ಬುದ್ಧಿಶಾಲಿಯಾಗಿದ್ದ ಜ್ಯೋತಿಬಾ ಫುಲೆ ಉತ್ತಮ ವಾತಾವರಣದಲ್ಲಿ ವಿದ್ಯಾಭ್ಯಾಸ ಮಾಡಿದರು ಹಾಗೂ ಸಿರಿವಂತ ಕುಟುಂಬದಲ್ಲಿ ಜನಿಸಿದ ಪುಲೆ  ತನ್ನ ಸಹಪಾಠಿಗಳಂತೆ ಬದುಕುತ್ತಿದ್ದರು. ಮೇಲ್ವರ್ಗದಲ್ಲಿ ಜನಿಸಿದರು ಸದಾ ಕೆಳ ವರ್ಗದ ಜನರ ಒಳಿತಿನ ಬಗ್ಗೆ ಚಿಂತಿಸುತ್ತಿದ್ದರು, ಚಿಕ್ಕಂದಿನಿಂದಲೇ ಸ್ತ್ರೀ ಶೋಷಣೆ ,ದಲಿತರ ಮೇಲಿನ ಅಸಮಾನತೆ, ಶಿಕ್ಷಣದಿಂದ ವಂಚಿತರಾಗಿದ್ದ ಭಾರತದ ಬಹು ಜನರ ಬಗ್ಗೆ ಚಿಂತಿಸುತ್ತಿದ್ದರು. ಭಾರತದ ಸಾಮಾಜಿಕ ಪಿಡುಕುಗಳಾದ ಸ್ತ್ರೀ ಅಸಮಾನತೆ, ಜಾತಿ ವ್ಯವಸ್ಥೆ ಮೌಲ್ಯ ಕಂದಾಚಾರ ಇವುಗಳ ವಿರುದ್ಧ ಹೋರಾಡಲು ಸಿದ್ದರಾದರು ಇದಕ್ಕೆ ಇವರು ಶಿಕ್ಷಣವನ್ನು ದೊಡ್ಡ ಅಸ್ತ್ರವನ್ನಾಗಿ ಬಳಸಿದರು. ಎಸ್ ಸಿ, ಎಸ್ ಟಿ , ಒ ಬಿ ಸಿ ಹಾಗೂ ಎಲ್ಲಾ ಜನಾಂಗದ ಮಹಿಳೆಯರು ವಿದ್ಯಾವಂತರಾಗಿದ್ದಾರೆ ಎಂದರೆ, ಇದಕ್ಕೆ ಮೂಲ ಕಾರಣ ಜ್ಯೋತಿಬಾ ಪುಲೆ ಹಾಗೂ ಅವರ ಪತ್ನಿ ಸಾವಿತ್ರಿಬಾಯಿ ಪುಲೆ” ಎಂದು ಕಾರ್ಯಕ್ರಮದಲ್ಲಿ ಶಿಕ್ಷರಾದ ಸಂಪತ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸಂವಿಧಾನವೇ ಶ್ರೇಷ್ಠ ಗ್ರಂಥವೆಂದು ಒಪ್ಪಿಕೊಂಡು ಸಂವಿಧಾನದ ಆಶ್ರಯದಲ್ಲಿ ಸುಖ ಜೀವನ ನಡೆಸುತ್ತಿದ್ದೇವೆ ಎಂದರೆ, ಇದಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಮೂಲ ಕಾರಣ ಜ್ಯೋತಿಬಾ ಪುಲೆ ಎಂದೇ ಹೇಳಬಹುದು. ಭಾರತದಲ್ಲಿ ಆರಂಭವಾದ ಸಮಾನತೆಯ ಕ್ರಾಂತಿಯು ಬುದ್ಧನ ಕಾಲದಿಂದ ಬಸವಣ್ಣನವರಿಗೆ ಹಿಡಿದು ಬಾಬಾ ಸಾಹೇಬರು ಬರೆದ ಸಂವಿಧಾನದಲ್ಲಿ ಅಂತ್ಯವಾಗುತ್ತದೆ. ಇದರ ಮಧ್ಯೆ ಭಾರತದ ಪಾಲಿನ ಜನರಿಗೆ ಮುಖ್ಯ ಘಟ್ಟವಾಗುವುದು, ಜ್ಯೋತಿಬಾ ಪುಲೆ ಅವರ ಸಾಮಾಜಿಕ ಕ್ರಾಂತಿ ಎಂದು ಭೀಮ್ ಆರ್ಮಿ ಸಂಘಟನೆಯ ಕೀರ್ತಿ ತಿಳಿಸಿದರು.

ಇದನ್ನೂ ಓದಿದ್ದೀರಾ?ಹಾಸನ l ವಳಲಹಳ್ಳಿ ಗ್ರಾ.ಪಂ ಉಪಾಧ್ಯಕ್ಷರಾಗಿ ಹೆಚ್ ಆರ್ ಸುಧಾಕರ್ ಅವಿರೋಧ ಆಯ್ಕೆ

ಈ ವೇಳೆ ಮುಖಂಡರಾದ ರಾಕೇಶ್ ನಾಗರಾಜ್, ಹರೀಶ್ ಕೊನೆರ್ಲು, ವಕೀಲರಾದ ಉಮೇಶ್, ಭೀಮ್ ಆರ್ಮಿ ವಿದ್ಯಾರ್ಥಿ ಘಟಕದ  ಸಂಚಾಲಕರಾದ ರಾಕೇಶ್ , ರಕ್ಷಿತ್, ಪ್ರತಾಪ್ ಅಜ್ಜೇನಹಳ್ಳಿ ವಿದ್ಯಾರ್ಥಿಗಳಾದ ಗಗನ್ ಹಾಗೂ ವಿನಯ್ ಇನ್ನಿತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...