ಹಾಸನ | ಆನೆ ದಾಳಿಯಿಂದ ಮೃತಪಟ್ಟ ಕುಟುಂಬಕ್ಕೆ ಸಚಿವ ಈಶ್ವರ್ ಖಂಡ್ರೆ ಭೇಟಿ

Date:

Advertisements

ಸಕಲೇಶಪುರ ತಾಲೂಕಿನ ಬೈಕೆರೆ ಗ್ರಾಮದಲ್ಲಿ ಇತ್ತೀಚೆಗೆ ಆನೆ ದಾಳಿಯಿಂದ ಮೃತಪಟ್ಟ ಷಣ್ಮುಖ ಅವರ ಮನೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಸಾಂತ್ವನ ಹೇಳಿದರು.

“ಆನೆ-ಮಾನವ ಸಂಘರ್ಷದಿಂದ ಹೆಚ್ಚಿನ ಸಾವು ಸಂಭವಿಸುತ್ತಿದ್ದು, ನಿಯಂತ್ರಣಕ್ಕೆ ಸರ್ಕಾರ ಸಕಲ ಪ್ರಯತ್ನ ಮಾಡುತ್ತಿದೆ. ಆದರೂ ಜೀವಹಾನಿ ಸಂಭವಿಸುತ್ತಿರುವುದು ವಿಷಾದನೀಯ. ವನ್ಯಜೀವಿ ಸಂರಕ್ಷಣಾ ಕಾಯಿದೆಯ ಕಠಿಣ ಅನುಷ್ಠಾನದಿಂದ ಆನೆಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಆದರೆ ಅದಕ್ಕೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗಿದ್ದಲ್ಲದೇ ಸಮಸ್ಯೆ ಉಲ್ಬಣಿಸಿದೆ” ಎಂದರು.  

“ಬಿಕ್ಕೋಡಿನಲ್ಲಿ ಆನೆ ಕಾರ್ಯಪಡೆಯ ಘಟಕ ಸ್ಥಾಪಿಸಿ ಸ್ಥಳೀಯರಿಗೆ ಆನೆಗಳ ಚಲನವಲನದ ಬಗ್ಗೆ ಸಕಾಲಿಕ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ ಹಾಗೂ ಆನೆಗಳ ಉಪಟಳ ತಡೆಯುವ ನಿಟ್ಟಿನಲ್ಲಿ ಅವುಗಳ ಚಲನವಲನ ಗಮನಹರಿಸಿ ರೈತರಿಗೆ ಮಾಹಿತಿ ನೀಡುವುದು, ರೈಲ್ವೆ ಬ್ಯಾರಿಕೇಡ್ ನಿರ್ಮಾಣ, ಇಟಿಎಫ್ ಸಿಬ್ಬಂದಿ ನೇಮಕ, ಅಗತ್ಯ ವಾಹನಗಳ ಸೌಲಭ್ಯ ಸೇರಿದಂತೆ ಉತ್ತಮ ಅಧಿಕಾರಿಗಳನ್ನು ನೇಮಿಸಲಾಗಿದ್ದರೂ ಪ್ರಕೃತಿಯಲ್ಲಿ ಕೈಮೀರಿ ಕೆಲವು ಘಟನೆಗಳು ಸಂಭವಿಸುತ್ತಿವೆ. ಇಂತಹ ಘಟನೆಗಳು ನಮಗೂ ನೋವುಂಟು ಮಾಡಿದೆ” ಎಂದರು.

Advertisements

“ಈ ಬಾರಿ ಬಜೆಟ್‌ನಲ್ಲಿ ವನ್ಯಜೀವಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನೀಡುವ ಪರಿಹಾರದ ಮೊತ್ತವನ್ನು ₹15 ಲಕ್ಷದಿಂದ ₹20 ಲಕ್ಷಕ್ಕೆ ಹೆಚ್ಚಳ ಮಾಡಿದ್ದು, ಷಣ್ಮುಖ ಅವರ ಕುಟುಂಬಕ್ಕೂ ₹20 ಲಕ್ಷ ಪರಿಹಾರ ನೀಡಲಾಗಿದೆ. ಕುಟುಂಬದವರು ಸರ್ಕಾರಿ ನೌಕರಿ ಕೇಳುತ್ತಿದ್ದಾರೆ. ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಮಾನವ ಮತ್ತು ವನ್ಯಜೀವಿಗಳ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಭದ್ರ ಅಭಯಾರಣ್ಯದಲ್ಲಿ ಸಾಫ್ಟ್ ರಿಲೀಸ್ ಸೆಂಟರ್ ಮಾಡಲು ಪ್ರಕ್ರಿಯೆ ಪ್ರಾರಂಭಿಸಲಾಗಿದೆ” ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಇದನ್ನೂ ಓದಿದ್ದೀರಾ?ಹಾಸನ l ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ; ಸಚಿವ ಈಶ್ವರ್ ಖಂಡ್ರೆ

ಈ ಸಂದರ್ಭದಲ್ಲಿ ಸಂಸತ್ ಸದಸ್ಯ ಶ್ರೇಯಸ್ ಪಟೇಲ್, ಶಾಸಕ ಸಿಮೆಂಟ್ ಮಂಜು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಏಳುಕೊಂಡಲ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್, ಕಾಂಗ್ರೆಸ್ ಮುಖಂಡ ಮುರಳಿ ಮೋಹನ್, ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X