ಹಾಸನ l ಪ್ರಚೋದನಕಾರಿ ಭಾಷಣ; ಮುತಾಲಿಕ್ ವಿರುದ್ದ ಪ್ರಕರಣ ದಾಖಲು

Date:

ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹಾಗೂ ಇತರರ ವಿರುದ್ಧ ಸಕಲೇಶಪುರ ತಾಲ್ಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಜ.9 ರಂದು ಸಕಲೇಶಪುದರಲ್ಲಿ ನಡೆದಿದ್ದ ವಿರಾಟ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಪ್ರಮೋದ್ ಮುತಾಲಿಕ್ ವಿರುದ್ದ ಗುಪ್ತ ಮಾಹಿತಿ ಸಿಬ್ಬಂದಿ ಎಂ.ಕೆ. ಶ್ರೀಧರ್ ದೂರು ಆಧರಿಸಿ ಮೊಕದ್ದಮೆ ದಾಖಲಿಸಲಾಗಿದೆ. ಬಿಎನ್ಎಎಸ್ 2023,196(1), 353 (2), 3 (5) ಅಡಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಹಿಂದೂಗಳು ಮುಸ್ಲಿಂರಿಗೆ ಕುರಿ ಮಾಂಸ ಎಂದು ಹೇಳಿ ಕೊಡಿ ಅವರು ಹಲಾಲ್ ಆಗಿಲ್ಲ ಎಂದು ತಿನ್ನುವುದಿಲ್ಲ. ಆದರೆ ಹಿಂದೂಗಳು ಮುಸ್ಲಿಂ ಹೋಟೆಲ್‌ಗಳಿಗೆ ಹೋಗಿ ಹಲಾಲ್ಮಾ ಮಾಡಿರುವ ಮಾಂಸವನ್ನು ಚಪ್ಪರಿಸಿಕೊಂಡು ತಿಂತಾರೆ ಅದೂ ಸಗಣಿ ತಿಂದಂಗೆ ಇದು ಸರಿನಾ ಎಂದು ಪ್ರಶ್ನಿಸಿದರು.

2003ರಲ್ಲಿ ಸಕಲೇಶಪುರದಲ್ಲಿ ಹಿಂದೂಗಳ ಏರಿಯಾದಲ್ಲಿ ಮುಸ್ಲಿಂ ಸಮುದಾಯದವರು ಒಂದು ಗೋಮಾಂಸದ ಅಂಗಡಿಯನ್ನು ತೆರೆದಿದ್ದರು. ಆಗ ಹಿಂದೂಗಳು ಸುಮ್ಮನೆ ಇರಲಿಲ್ಲ. ಅದೇ ಅಂಗಡಿಯ ಎದುರು ಒಂದು ಹಂದಿ ಮಾಂಸದ ಅಂಗಡಿಯನ್ನು ತೆರೆದರು. ಮುಸ್ಲಿಂರು ಏನಾದರು ದನದ ಮಾಂಸದ ಅಂಗಡಿ ಯನ್ನು ತೆರೆದರೆ ನಿಮ್ಮ ಮನೆಯ ಮುಂದೆ ಹಂದಿ ಕಡಿದು ತಿಂತೀವಿ ಎಂದು ಎಚ್ಚರಿಸಿದರು.

ಸಹನೆಗೆ ಒಂದು ಮಿತಿ ಬೇಡವಾ ಆಕಳ ರಕ್ತ, ನಮ್ಮ ರಕ್ತ, ಮುಂದಿನ ದಿನಗಳಲ್ಲಿ ನಾವು ಗೋಮಾತೆ ರಕ್ಷಣೆ ಮಾಡುತ್ತೇವೆ. ನಾವುಗಳು ಇವತ್ತಿನ ದಿನ ಪ್ರತಿಜ್ಞೆಮಾಡಬೇಕು. ಬೆಳಿಗ್ಗೆ ತರಕಾರಿ ಅಂಗಡಿಗೆ ಹೋದಾಗ ಹಿಂದೂಗಳ ಅಂಗಡಿಗಳಲ್ಲಿ ಮಾತ್ರ ತೆಗೆದುಕೊಳ್ಳಬೇಕು. ದೇವಸ್ಥಾನಕ್ಕೆ ಹೋದಾಗ ಹಿಂದೂಗಳ ಹತ್ತಿರ ಹಣ್ಣು ಕಾಯಿ ಖರೀದಿಸಬೇಕು. ಆಗ ಗೋಮಾತೆ ರಕ್ಷಣೆ ಮಾಡಿದಂತೆ ಆಗುತ್ತದೆ. ಆದರೆ ನಾವು ಮುಸ್ಲಿಂರ ಬಳಿ ತೆಗೆದುಕೊಂಡು ನಮ್ಮ ಮೇಲೆ ನಾವೇ ಚಪ್ಪಡಿ ಎಳೆದುಕೊಳ್ಳುತ್ತಿದ್ದೇವೆ. ಮುಸ್ಲಿಂರ ಹೋಟೆಲ್‌ಗೆ ಹೋಗುವಾಗ ಒಂದು ಸಾರಿ ಮೂತ್ರ ವಿಸರ್ಜನೆ ಮಾಡಿರುವುದನ್ನು ನೆನಪಿಸಿಕೊಳ್ಳಿ ಮೂತ್ರ ವಿಸರ್ಜನೆ ಮಾಡಿರುವವರನ್ನು ಪೊಲೀಸರು, ಸರ್ಕಾರ ಜಿಲ್ಲೆಯಿಂದ ಗಡಿಪಾರು ಮಾಡದಿದ್ದರೆ ನಾವೇ ಆತನ ಬಾಯಿಗೆ ಮೂತ್ರ ವಿಸರ್ಜನೆ ಮಾಡುತ್ತೇವೆ ಎಂದರು.

ಸಕಲೇಶಪುರ ಕಾಫಿ ಎಸ್ಟೇ ಟ್‌ಗಳಲ್ಲಿರುವ ಬಾಂಗ್ಲಾ ದೇಶದವರನ್ನು ಹೊರಹಾಕಬೇಕು. ಇಲ್ಲದ್ದಿದ್ದಲಿ ಮುಂದಿನ ದಿನಗಳಲ್ಲಿ ಗಂಡಾಂತರ ತಪ್ಪಿದ್ದಲ್ಲ. ಕಾಫಿ ತೋಟಕ್ಕೆ ಜನರು ಬೇಕಾದಲ್ಲಿ ನಾನು ಉತ್ತರ ಕರ್ನಾಟಕದಿಂದ ಕಳುಹಿಸಿ ಕೊಡುತ್ತೇನೆ. ಇಲ್ಲವಾದಲ್ಲಿ ನಾವೇ ಬಂದು ಬಾಂಗ್ಲಾ ಮುಸ್ಲಿಂರನ್ನು ಹೊರ ಹಾಕುತ್ತೇವೆ. ಹಿಂದೂಗಳ ರಕ್ಷಣೆಗಾಗಿ ಬರ್ಜಿ, ಕತ್ತಿತಲ್ವಾರ್, ಬಂದೂಕುಗಳನ್ನು ಮನೆಗಳಲ್ಲಿ ಕಾಣುವ ರೀತಿಯಲ್ಲಿ ಇಟ್ಟುಕೊಳ್ಳಬೇಕು. ಬಾಂಗ್ಲಾದಲ್ಲಿ ಹಿಂದೂಗಳ ಹತ್ಯೆ ಆಗುತ್ತಿದೆ. ಇದನ್ನು ಕ್ರೂರವಾಗಿ ನಾವು ಖಂಡಿಸುತ್ತೇವೆ ಎಂದರು.

ಇದನ್ನೂ ಓದಿದ್ದೀರಾ?ಹಾಸನ l ಸ್ನೇಹಿತನ ಕೊಲೆ ಶಿರಾಡಿ ಘಾಟ್ ಶವ ಎಸೆತ, ಆರೋಪಿಗಳ ಬಂಧನ; ಹರಳಹಳ್ಳಿ ಗ್ರಾಮಸ್ಥರ ಪ್ರತಿಭಟನೆ

ಸಮಾಜದ ಶಾಂತಿ ಹಾಳು ಮಾಡುವ ಉದ್ದೇಶ ಹಾಗೂ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಎಂಬ ಕಾರಣಕ್ಕೆ ಪ್ರಕರಣ ದಾಖಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...