ಹಾಸನ ಜಿಲ್ಲಾ ಲೋಕಾಯುಕ್ತ ಕಚೇರಿ ವತಿಯಿಂದ ತಾಲ್ಲೂಕು ಕಚೇರಿಯಲ್ಲಿ ಏ.28 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1.30 ರವರೆಗೆ ಅಹವಾಲು ಸ್ವೀಕಾರ.
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ನಿಗದಿತ ಸಮಯಕ್ಕೆ ಸರಿಯಾಗಿ ಸ್ಪಂದಿಸದೆ ಇರುವ ಬಗ್ಗೆ, ಸರ್ಕಾರಿ ಅಧಿಕಾರಿಗಳ ವಿರುದ್ಧ ಬರುತ್ತಿರುವ ದೂರು ಹಿನ್ನಲೆಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳ ನಿರ್ವಹಣೆ ಉದ್ದೇಶ ಸಾಕಾರಗೊಳಿಸುವ ನಿಟ್ಟಿನಲ್ಲಿ ಮತ್ತು ಸರ್ಕಾರಿ ಕಚೇರಿಯ ಕೆಲಸ ಕಾರ್ಯಗಳಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಸಭೆ ಹಮ್ಮಿ ಕೊಳ್ಳಲಾಗಿದೆ.
ಇದನ್ನೂ ಓದಿದ್ದೀರಾ?ಹಾಸನ l ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಯಶಸ್ವಿ
ತಾಲ್ಲೂಕು ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿರುವ ಸಾರ್ವಜನಿಕರ ಅಹವಾಲು ಸಭೆಗೆ ನಿಗದಿತ ದಿನಾಂಕ ಮತ್ತು ಸಮಯದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಕುಂದು-ಕೊರತೆಗಳ ಬಗ್ಗೆ ಅಹವಾಲುಗಳನ್ನು ಸಲ್ಲಿಸಲು ಕರ್ನಾಟಕ ಲೋಕಾಯುಕ್ತ ಹಾಸನ ವಿಭಾಗದ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ