ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುವಾಗ ಕಾರು ಅಪಘಾತವಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ, ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಾಗೆ ಸಮೀಪದ ಅರಸು ನಗರ ಬಳಿ ನಡೆದಿದೆ.
ಸಕಲೇಶಪುರ ಭಾಗದಲ್ಲಿ ಅತಿಯಾದ ಮಳೆಯಿಂದ ವೀಲ್ ಜಾರಿ ಡಿವೈಡರ್ ದಾಟಿ ಕಾರು ನೆಲಕ್ಕೆ ಉರುಳಿದೆ. ಇಬ್ಬರಿಗೆ ಗಂಭೀರ ಹಾಗೂ ನಾಲ್ವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿದ್ದೀರಾ?ಹಾಸನ l ನ್ಯಾಯವಾದಿ ಶಾರದ: ಪಂಜ ಕುಸ್ತಿಯಲ್ಲಿ ಪ್ರಥಮ ಸ್ಥಾನ
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾಂಕ್ರೀಟ್ ರಸ್ತೆಯಾಗಿದ್ದು, ಜಾರುವ ಸಾಧ್ಯತೆ ಇದ್ದು, ಮಲೆನಾಡಿನಲ್ಲಿ ಜೋರು ಮಳೆಯಾಗುತ್ತಿರುವುದರಿಂದ ವಾಹನ ಸವಾರರು ತಮ್ಮ ವಾಹನಗಳನ್ನು ಅತಿ ವೇಗವಾಗಿ ಚಾಲನೆ ಮಾಡುತ್ತಿರುವುದರಿಂದ ವಾಹನ ಚಲಾಯಿಸುವಾಗ ಹಿಡಿತಕ್ಕೆ ಸಿಗುವುದಿಲ್ಲ. ಹಾಗಾಗಿ ಇಂತಹ ಘಟನೆಗಳು ಸಂಭವಿಸುತ್ತಿವೆ, ಆದ್ದರಿಂದ ವಾಹನಗಳನ್ನು ಜಾಗರೂಕತೆಯಿಂದ ನಿಧಾನವಾಗಿ ಚಲಾಯಿಸಬೇಕೆoದು ಅಧಿಕಾರಿಗಳು ಸಾರ್ವಜನಿಕರಿಗೆ ತಿಳಿಸಿದರು.