ಹಾಸನ l ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಹೆಣ್ಣು ಮಗುವಿಗೆ ಜನ್ಮ: ಪೋಕ್ಸೋ ಪ್ರಕರಣ ದಾಖಲು

Date:

ಶಾಲೆಯ ವಾಹನ ಚಾಲಕನೊಬ್ಬ ಅದೇ ಶಾಲೆಯ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಮಗುವಿಗೆ ಜನ್ಮ ನೀಡಿದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಶಾಲೆಯ ವಾಹನ ಚಾಲಕನಾಗಿದ್ದ ರಂಜಿತ್ ಎಂಬಾತ ಆರೋಪಿ, 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಚಾಕೋಲೆಟ್ ಕೊಡುವುದಾಗಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಹೆದರಿ ಬಾಲಕಿ ಸುಮ್ಮನಾಗಿದ್ದಾಳೆ. ಮೂರು ದಿನಗಳ ಹಿಂದೆ ನಡೆದ ಕ್ರೀಡಾಕೂಟದಲ್ಲಿ ಬಾಲಕಿ ಓಟ ಸ್ಪರ್ಧೆಯಲ್ಲಿ ಭಾಗವಹಿಸಿದಾಗ ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ಗರ್ಭಿಣಿಯಾಗಿರುವ ವಿಚಾರ ತಿಳಿದು ಬಂದಿದೆ. 8 ತಿಂಗಳಿನಿಂದ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ್ದು, ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇನ್ನು ಬಾಲಕಿ ಮತ್ತು ಮಗುವನ್ನು ಕೆಲ ದಿನಗಳ ಆರೈಕೆ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಒಪ್ಪಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಗರ್ಭಿಣಿಯಾದರೂ ಶಾಲಾ ಶಿಕ್ಷಕರಿಗೆ ಹಾಗೂ ಪೋಷಕರಿಗೆ ಸಂಶಯ ಬಾರದೆ ಇರುವುದು ಆಶ್ಚರ್ಯಕರ ಸಂಗತಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮಳಲೂರು ಏತ ನೀರಾವರಿ ಯೋಜನೆಗೆ ಭೂಮಿ ವಶ; ಪರಿಹಾರಕ್ಕಾಗಿ ರೈತರ ಅಲೆದಾಟ.

ಆರೋಪಿ ರಂಜಿತ್ ಬಿಎಸ್‌ಸಿ ಪದವೀಧರೆ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆದರೂ ವಿದ್ಯಾರ್ಥಿನಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪ್ರಾಪ್ತೆ ಆಸ್ಪತ್ರೆಗೆ ದಾಖಲಾಗಿರುವ ವಿಚಾರ ತಿಳಿದು ನಾಪತ್ತೆಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಶೇಕ್ರಾ ನಾಯ್ಕ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ

2026ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶೇಕ್ರಾನಾಯ್ಕ...

ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲು ಸಂಪೂರ್ಣ ಭಸ್ಮ

ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ...

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...