ಹಾಸನ l ಅಕ್ರಮ ಮದ್ಯ ಮಾರಾಟ ನಿಲ್ಲಿಸುವಂತೆ ಮಹಿಳಾ ಸಂಘದಿಂದ ಮನವಿ 

Date:

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ವಳಂಬಿಗೆ ಗ್ರಾಮದಲ್ಲಿ ನಡೆಯುತ್ತಿರುವ, ಅಕ್ರಮ ಮದ್ಯ ಮಾರಾಟ ನಿಲ್ಲಿಸುವಂತೆ, ಸ್ತ್ರೀ ಶಕ್ತಿ ಸಂಘದ ಮಹಿಳೆಯರು ಬುಧವಾರ ಹಾಸನ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

- Advertisement -

ಗ್ರಾಮದಲ್ಲಿ ಸುಮಾರು 600 ಮನೆಗಳಿದ್ದು, ಸುಮಾರು 12 ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಗ್ರಾಮೀಣ ಭಾಗದ ಜನರು ಕುಡಿತಕ್ಕೆ ದಾಸರಾಗಿದ್ದಾರೆ ಎಂದು ಗ್ರಾಮದ ಮಂಜುಳ ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದಿಂದ ಚಿಕ್ಕ ಚಿಕ್ಕ ವಯಸ್ಸಿಗೆ ಮಕ್ಕಳೂ ಕುಡಿತಕ್ಕೆ ದಾಸರಾಗಿ ಶಾಲೆ ತೊರೆದು ಕುಳಿತಿದ್ದಾರೆ.  ಅಲ್ಲದೆ ಕುಡಿದು ಬಂದ ಗಂಡಸರು ಮಹಿಳೆಯರು ಹಾಗೂ ಮಕ್ಕಳ ಮೇಲೆ ಹಲ್ಲೆ, ದೌರ್ಜನ್ಯ ಮಾಡುವ ಪ್ರಕರಣಗಳು ಹೆಚ್ಚಾಗಿವೆ. ಕೂಡಲೇ ಅಕ್ರಮ ಮದ್ಯ ಮಾರಾಟ ತಡೆಗಟ್ಟಬೇಕು ಎಂದು ಗ್ರಾಮದ ಲಕ್ಷಿ ತಿಳಿಸಿದರು.

ಈ ಬಗ್ಗೆ ತಾಲೂಕು ಮಟ್ಟದ ಸಭಂದಿಸಿದ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು, ಈ ಬಗ್ಗೆ ಶಾಶ್ವತ ಪರಿಹಾರ ಕಲ್ಪಿಸಿಲ್ಲ, ಪೋಲಿಸರು ಒಮ್ಮೊಮ್ಮೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ. ಆದರೆ ಅವರ ಜೊತೆಗೇ ಶಾಮೀಲಾಗಿ ಪ್ರಕರಣವನ್ನು ಅಲ್ಲಿಗೆ ಕೈ ಬಿಟ್ಟಿದ್ದಾರೆ ಎಂದು ಗ್ರಾಮದ ರುಕ್ಮಿಣಿ ಮಾಹಿತಿ ತಿಳಿಸಿದರು.

ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ ಇನ್ನು ಮದ್ಯ ಮಾರಾಟ ನಿಲ್ಲಿಸದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡ ಹೋರಾಟ ಮಾಡಲಾಗುವುದು ಎಂದು ಸ್ತ್ರೀ ಶಕ್ತಿ ಮಹಿಳಾ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಗ್ರಾಮದ ನೇತ್ರ, ಮಂಜುಳಾ, ಮಹಾಲಕ್ಷ್ಮಿ, ರಾಣಿ, ರೇಣುಕಾ, ಕಾಳಮ್ಮ, ರತ್ನಮ್ಮ, ಲಕ್ಷ್ಮಮ್ಮ, ಮಾದೇವಿ, ರುಕ್ಕಿಣಿ, ಪಾರ್ವತಿ, ಮಣಿ, ಇಂದ್ರಮ್ಮ, ರಾಣಿ ಇತರರು ಉಪಸ್ಥಿತಿಯಲ್ಲಿದ್ದರು.

ಇದನ್ನೂ ಓದಿದ್ದೀರಾ?ಹಾಸನ l ಶಾಸಕ ರೇವಣ್ಣ ಹುಟ್ಟುಹಬ್ಬ; ಶುಭಕೋರುವ ಬ್ಯಾನರ್‌ನಲ್ಲಿ ಪ್ರಜ್ವಲ್ ಫೋಟೋಗೆ ವಿರೋಧ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...