ಹಾಸನ l ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ; ಸಚಿವ ಈಶ್ವರ್ ಖಂಡ್ರೆ

Date:

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೈಕೆರೆಯಲ್ಲಿ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

- Advertisement -

“ಯಾರೇ ಕೊಲೆ, ಸುಲಿಗೆ, ದರೋಡೆಯಲ್ಲಿ ಭಾಗಿಯಾಗಿದ್ದರೂ ಅವರನ್ನು ಕ್ರಿಮಿನಲ್‌ಗಳೆಂದೇ ಪರಿಗಣಿಸಲಾಗುವುದು. ಇಂತಹ ದುಷ್ಕೃತ್ಯಗಳಿಗೆ ಯಾವುದೇ ಜಾತಿ, ಮತದ ಪ್ರಶ್ನೆ ಬರುವುದಿಲ್ಲ. ಅವರೆಲ್ಲೆ ಇದ್ದರೂ ಪೊಲೀಸರು ಹುಡುಕಿ, ಉಗ್ರ ಶಿಕ್ಷೆ ವಿಧಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತದೆ. ಗುಂಪು ಹಲ್ಲೆ ಸೇರಿದಂತೆ ಯಾವುದೇ ಅಪರಾಧದಲ್ಲಿ ಭಾಗಿಯಾದವರಿಗೂ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ಖಚಿತ,” ಕಾನೂನು ಎಲ್ಲರಿಗೂ ಸಮಾನವಾಗಿದ್ದು, ಅದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಸಚಿವ ಖಂಡ್ರೆ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆ ಆತ್ಮಹತ್ಯೆಗೆ ಶರಣು

ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಶಿವಮೊಗ್ಗ...

ಜಮಖಂಡಿಯಲ್ಲಿ ಅ.4ರಂದು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ನಾಡು–ನುಡಿ, ಸಾಹಿತ್ಯ ಹಾಗೂ ಸಂಸ್ಕೃತಿಯ ಸೊಗಡನ್ನು ಪಸರಿಸುವ ಉದ್ದೇಶದಿಂದ ಜಮಖಂಡಿ...

ಕಾರವಾರ | ನಾಗರಮಡಿ ಫಾಲ್ಸ್‌ನಲ್ಲಿ ಪ್ರವಾಸಿಗರು–ಸ್ಥಳೀಯರ ನಡುವೆ ಗಲಾಟೆ; ದೂರು ಪ್ರತಿದೂರು ದಾಖಲು

ಕಾರವಾರ: ತಾಲೂಕಿನ ಚೆಂಡಿಯಾ ಸಮೀಪದ ನಾಗರಮಡಿ ಫಾಲ್ಸ್‌ನಲ್ಲಿ ಬಾಟಲಿ ಎಸೆದ ವಿಚಾರಕ್ಕೆ...

ಬಳ್ಳಾರಿ | ಮತದಾರರ ಹೆಸರು ತೆಗೆದುಹಾಕಲು ಸಂಚು: ಕಾರ್ಪೊರೇಟರ್, ಪಾಲಿಕೆ ಅಧಿಕಾರಿಗಳ ವಿರುದ್ಧ FIR

ಬಳ್ಳಾರಿ ನಗರ ಕ್ಷೇತ್ರದ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಲು...