ಕಾಡಾನೆ ದಾಳಿಯಿಂದ ಸುಶೀಲ ಎಂಬ ಮಹಿಳೆ ಮೃತಪಟ್ಟ ಘಟನೆಗೆ ಬೇಲೂರು ತಾಲೂಕಿನ ಬೊಮ್ಮನಹಳ್ಳಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸ್ಥಳಕ್ಕೆ ಅರಣ್ಯ ಸಚಿವರು ಬರುವವರೆಗೂ ಶವ ತೆಗೆಯುವುದಿಲ್ಲ ಎಂದು ಚೀಕನಹಳ್ಳಿ-ಬೇಲೂರು ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

ಆನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಕುಟುಂಬಸ್ಥರು ಹಾಗೂ ಗ್ರಾಮಸ್ಥರು, ಟೈರ್‌ಗೆ ಬೆಂಕಿ ಹಚ್ಚಿ ಧರಣಿ ಆರಂಭಿಸಿ, ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತ ಧರಣಿ ಕೂತಿದ್ದಾರೆ.
ಇದನ್ನೂ ಓದಿದ್ದೀರಾ?ಹಾಸನ l ಹೋಳಿ ಆಚರಣೆ ವೇಳೆ ಹಲ್ಲೆ ಪ್ರಕರಣ; ಮೂವರ ಬಂಧನ
ಇದಕ್ಕೆಲ್ಲ ಕಾರಣ ಅರಣ್ಯ ಇಲಾಖೆ ಹಾಗೂ ಅರಣ್ಯ ಸಚಿವರೇ ನೇರ ಹೊಣೆಯಾಗುತ್ತಾರೆಂದು ಗ್ರಾಮಸ್ಥರು ಹಾಗೂ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದರು. ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯವೆ ಕಾಡಾನೆ ಹಾವಳಿಯಿಂದ ತೀವ್ರವಾಗಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
