ಕಾಫಿ ಎಸ್ಟೇಟ್‌ನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಹೆಣ್ಣಾನೆ ಮತ್ತು ಮರಿಯಾನೆ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಉದೇವಾರ ಗ್ರಾಮದಲ್ಲಿ ನಡೆದಿದೆ.
ಮಳೆ, ಗಾಳಿಯಿಂದಾಗಿ ಮರದ ರಂಬೆಯೊಂದು ವಿದ್ಯುತ್ ತಂತಿ ಮೇಲೆ ಬಿದ್ದು ತಂತಿ ತುಂಡಾಗಿ ನೆಲಕ್ಕೆಬಿದ್ದಿದೆ. ಆಹಾರ ಅರಸಿ ತೋಟದಲ್ಲಿ ಸುತ್ತಾಡುತ್ತಿದ್ದ, ಸುಮಾರು 30 ವರ್ಷದ ಹೆಣ್ಣಾನೆ ಹಾಗೂ ಮೂರು ವರ್ಷದ ಮರಿಯಾನೆ ತಂತಿ ತುಳಿದು ಪರಿಣಾಮ ಸ್ಥಳದಲ್ಲೇ, ಮೃತಪಟ್ಟಿವೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕಾಡಾನೆ ದಾಳಿಯಿಂದ ಬೆಳೆ ನಾಶ: ರೈತರಿಗೆ ಆತಂಕ
ಎಂದಿನಂತೆ ಕೆಲಸಕ್ಕೆ ಕಾರ್ಮಿಕರು ತೋಟಕ್ಕೆ ತೆರಳಿದ ವೇಳೆ ಬೆಳಕಿಗೆ ಬಂದಿದೆ. ಈ ಘಟನೆ ಕುರಿತು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಸ್ಥಳದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗಿದೆ.
