ಹೇಮಾವತಿ ನದಿಯಲ್ಲಿ ಈಜಲು ಹೋಗಿದ್ದ, ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆನ್ನಲಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ಮೃತ ಯುವಕರು, ಸಕಲೇಶಪುರ ತಾಲ್ಲೂಕಿನ ಕಾಟಳ್ಳಿ ಗ್ರಾಮದ ಪ್ರಕಾಶ್ (29), ಮತ್ತು ಚಿಕ್ಕಮಗಳೂರು ಜಿಲ್ಲೆ ಹಾಂದಿ ಗ್ರಾಮದ ಭರತ್ (27), ಬಿಸಿಲು ಹೆಚ್ಚಾಗಿದ್ದ ಕಾರಣ ಶನಿವಾರ ಮಧ್ಯಾಹ್ನ 2 ಗಂಟೆ ಸಮಯದಲ್ಲಿ ನದಿಗೆ ಈಜಲು ಹೋಗಿದ್ದ, ಇಬ್ಬರು ಸ್ನೇಹಿತರು ನದಿಯಲ್ಲಿ ಮುಳುಗಿ ಸಾವನಪ್ಪಿದ್ದಾರೆ.
ಇದನ್ನೂ ಓದಿದ್ದೀರಾ?ಹಾಸನ l ಶಿಕ್ಷಕರು, ಸಿಬ್ಬಂದಿಗಳ ಮೇಲೆ ಹೆಜ್ಜೇನು ದಾಳಿ
ಸ್ಥಳೀಯರ ನೆರವಿನಿಂದ ಅಗ್ನಿಶಾಮಕ ಸಿಬ್ಬಂದಿ ಮೃತದೇಹ ಹೊರ ತೆಗೆಯಲಾಗಿದೆ. ಮೃತ ವ್ಯಕ್ತಿಯ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸಕಲೇಶಪುರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
