ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ, ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಅಂಕಿಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಮೃತ ಮಹಿಳೆ ಗಜೇಂದ್ರಪುರ ಗ್ರಾಮದ ಚಂದ್ರಮ್ಮ (45), ಡಾ. ಕರುಣ್ ಎಂಬುವರ ಕಾಫಿ ತೋಟದಲ್ಲಿ ಕೆಲಸಕ್ಕಾಗಿ ಶುಕ್ರವಾರ ಬೆಳಿಗ್ಗೆ ಎಂದಿನಂತೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ, ಏಕಾಏಕಿ ಕಾಡಾನೆ ದಾಳಿ ಮಾಡಿ ಚಂದ್ರಮ್ಮ ಅವರನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿ, ಕಾಲಿನಿಂದ ತುಳಿದು ಬರ್ಬರವಾಗಿ ಕೊಂದಿದೆ.
ಇದನ್ನೂ ಓದಿದ್ದೀರಾ?ಹಾಸನ l ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು
ಆತಂಕಗೊಂಡ ಸ್ಥಳೀಯರು ಮತ್ತು ಕೆಲಸಗಾರರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈ ಘಟನೆ ಕುರಿತು ಸ್ಥಳಕ್ಕೆ ಅರೇಹಳ್ಳಿ ಪೊಲೀಸ್ ಠಾಣಾ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.