ಕಾಡಾನೆ ಏಕಾಏಕಿ ವೃದ್ಧನ ಮೇಲೆ ದಾಳಿ ನಡೆಸಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಾಡಾನೆ ರಾಜು (68), ಎಂಬ ವೃದ್ಧನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿ, ತುಳಿಯಲು ಯತ್ನಿಸಿದೆ. ಘಟನೆಯಲ್ಲಿ ವೃದ್ಧ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ವೇಳೆ ಸ್ಥಳೀಯರು ಕಿರುಚಾಡಿದ್ದರಿಂದ ಕಾಡಾನೆ ಸ್ಥಳದಿಂದ ಹೋಗಿದೆ. ಗಾಯಗೊಂಡ ರಾಜು ಅವರನ್ನು ಗ್ರಾಮಸ್ಥರು ಕೂಡಲೇ, ಸಕಲೇಶಪುರ ನಗರದ ಕ್ರಾಫರ್ಡ್ ಆಸ್ಪತ್ರೆಗೆ ರವಾನಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾ ಅಸ್ಪತ್ರೆಗೆ ಸೇರಿಸಲಾಗಿದೆ.
ಇದನ್ನೂ ಓದಿದ್ದೀರಾ?ಹಾಸನ l ಬೆಳಗೋಡು ಗ್ರಾ. ಪಂ ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಸ್ಥಳಕ್ಕೆ ಅರಣ್ಯ ಇಲಾಖೆಯ ಇಟಿಎಫ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಜಿಲ್ಲೆಯಲ್ಲಿ ಕಾಡಾನೆ – ಮಾನವ ಸಂಘರ್ಷದ ಘಟನೆಗಳು ಹೆಚ್ಚುತ್ತಿರುವ ಕಾರಣದಿಂದ ಜನರು ಭಯದ ವಾತಾವರಣದಿಂದ ಬದುಕುತ್ತಿದ್ದಾರೆ.
