ಹಾಸನ ಜಿಲ್ಲೆ ಬೇಲೂರು ತಾಲ್ಲೂಕು ಬೊಮ್ಮೆನಹಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದಾರೆ.
ಬೊಮ್ಮನಹಳ್ಳಿ ಗ್ರಾಮದ ಸುಶೀಲಮ್ಮ (47) ಆನೆ ದಾಳಿಗೆ ಮೃತಪಟ್ಟ ಮಹಿಳೆ, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿ, ಸೊಂಡಿಲಿನಿಂದ ಮಹಿಳೆಯನ್ನು ಎತ್ತಿ ಬಿಸಾಡಿ, ಮಹಿಳೆಯ ತಲೆ ಭಾಗವನ್ನು ಆನೆ ಕಾಲಿನಿಂದ ತುಳಿದರಿಂದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿದ್ದೀರಾ?ಹಾಸನ | ಹಲವೆಡೆ ಉತ್ತಮ ಮಳೆ; ಕಾಫಿ ಕೃಷಿಕರ ಮೊಗದಲ್ಲಿ ಮಂದಹಾಸ
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಎರಡು ತಿಂಗಳ ಅಂತರದಲ್ಲಿ ಕಾಡಾನೆ ದಾಳಿಯಿಂದ ಜಿಲ್ಲೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ.ಇದಕ್ಕೆ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿಲ್ಲವೆಂದು ಜನರು ಆಕ್ರೋಶ ವ್ಯಕ್ತಪಡಿಸಿದರು.
