ಹಾಸನ | ಗುಡ್ಡ ಕುಸಿತ; ರೈಲು ಹಳಿ ಮೇಲೆ ಕುಸಿದ ಮಣ್ಣಿನಡಿ ಸಿಲುಕಿದ ಕಂಟೇನರ್

Date:

ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಶಿರಾಡಿಘಾಟ್ ರಸ್ತೆಯಲ್ಲಿ ಗುಡ್ಡ ಕುಸಿದಿದ್ದು, ಸಕಲೇಶಪುರ ತಾಲೂಕಿನ ದೊಡ್ಡತಪ್ಲೆ ಬಳಿ ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ. ಗುಡ್ಡ ಕುಸಿತದ ರಭಸಕ್ಕೆ ಎರಡು ಕಂಟೇನರ್ ಹಾಗೂ ಒಂದು ಟ್ಯಾಂಕರ್‌ ಪಲ್ಟಿಯಾಗಿದ್ದು, ವಾಹನಗಳೊಟ್ಟಿಗೆ ಚಾಲಕರೂ ಕೂಡಾ ಗುಡ್ಡ ಕುಸಿತದ ರಭಸಕ್ಕೆ ಮಣ್ಣಿನಡಿ ಸಿಲುಕಿದ್ದರು.

- Advertisement -

ಪೊಲೀಸರು ಹಾಗೂ ಗುತ್ತಿಗೆ ಪಡೆದ ಕಂಪನಿ ‌ಸಿಬ್ಬಂದಿಗಳು ಮೂವರು ಚಾಲಕರನ್ನು ರಕ್ಷಿಸಿದ್ದಾರೆ. ಜತೆಗೆ ಕಂಟೇನರ್‌ ಪಲ್ಟಿಯಾದ ಸ್ಥಳಕ್ಕೆ ಕಂದಾಯ ಸಚಿವ ಕೃಷ್ಣಭೈರೇಗೌಡ ಭೇಟಿ ನೀಡಿದ್ದು, “ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತಗೊಂಡಿದೆ. ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಸಂಚಾರ ಬಂದ್ ಆಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಮಳೆ ಮುಂದುವರೆದಿದ್ದು, ಮತ್ತೆ ಗುಡ್ಡ ಕುಸಿಯುವ ಸಾಧ್ಯತೆ ಇದೆ. ರೈಲ್ವೆ ಹಳಿ‌ ಮೇಲೆ ಹಾದು ಹೋಗಿರುವ ರಸ್ತೆಯ ತುದಿಯಲ್ಲಿರುವ ಕಂಟೇನರ್ ರೈಲ್ವೆ ಹಳಿ‌ ಮೇಲೆ ಬೀಳುವ ಆತಂಕವಾಗಿದೆ. ರೈಲ್ವೆ ಹಳಿ ಮೇಲೂ ಗುಡ್ಡ ಕುಸಿದಿದ್ದು,
ಈಗಾಗಲೇ ಬಂದ್‌ ಆಗಿರುವ ಸಕಲೇಶಪುರ-ಮಂಗಳೂರು ರೈಲ್ವೆ ಮಾರ್ಗದಲಿ ತ್ವರಿತಗತಿಯ ದುರಸ್ತಿ ಕಾರ್ಯ ನಡೆಯುತ್ತಿದೆ” ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಡಗು | ನಾಪೋಕ್ಲು ಭಾಗದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ; ಗ್ರಾಮಸ್ಥರ ಆಕ್ರೋಶ

ಇದೀಗ ದೊಡ್ಡತಪ್ಲೆ ಬಳಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿರುವುದರಿಂದ ದುರಸ್ತಿ ಕಾರ್ಯಕ್ಕೆ ಸಂಕಷ್ಟ ಎದುರಾಗಿದೆ. ಕಡಗರವಳ್ಳಿ-ಯಡಕುಮಾರಿ ಬಳಿ ನಡೆಯುತ್ತಿದ್ದ ರೈಲ್ವೆ ಹಳಿ ದುರಸ್ತಿ ಕಾರ್ಯಕ್ಕೆ ಕಾರ್ಮಿಕರು, ತಿಂಡಿ, ಊಟ ಹಾಗೂ ಇತರೆ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಗೂಡ್ಸ್ ರೈಲುಗಳ ಸಂಪರ್ಕ ಕಡಿತಗೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...