ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಮಾದಿಗ ಸಂಘಟನೆ ಮತ್ತು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿದರು.
ನಗರದ ಹೇಮಾವತಿ ಪ್ರತಿಮೆ ಮುಂಭಾಗದಿಂದ ನೂರಾರು ಪ್ರತಿಭಟನಾಕಾರರು ಸರ್ಕಾರದ ವಿಳಂಬ ಧೋರಣೆಯನ್ನು ಖಂಡಿಸಿ ಧಿಕ್ಕಾರ ಕೂಗುತ್ತ ಎನ್ ಆರ್ ವೃತ್ತದವರೆಗೂ ಜಾಥ ನಡೆಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಎಚ್ ಪಿ ಶಂಕರ್ ರಾಜ್ ಮಾತನಾಡಿ, ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿಗಾಗಿ ರಾಜ್ಯದಲ್ಲಿ ಹಲವಾರು ಪ್ರತಿಭಟನೆ ನಡೆಸಿದರೂ ಕೂಡಾ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕಳೆದ ಆಗಸ್ಟ್ 1ರಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಒಳಮೀಸಲಾತಿ ಜಾರಿಗೊಳಿಸಲು ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದರೂ ಸರಿಯಾಗಿ ಪಾಲಿಸಲಾಗುತ್ತಿಲ್ಲ” ಎಂದು ಆರೋಪಿಸಿದರು.
“ರಾಜ್ಯದಾದ್ಯಂತ ಜಿಲ್ಲಾಧಿಕಾರಿ ಕಚೇರಿ ಎದುರು ಸುಪ್ರೀಂಕೋರ್ಟ್ ತೀರ್ಪನ್ನು ಕೂಡಲೇ ರಾಜ್ಯ ಸರ್ಕಾರ ಜಾರಿ ಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಹಿಂದುಳಿದ ವರ್ಗದ ಸಮುದಾಯದಲ್ಲಿಯೇ ಕೆಳಮಟ್ಟದ ಮಾದಿಗ ಸಮಾಜಕ್ಕೆ ಹಾಗೂ ಇತರೆ ಸಣ್ಣಪುಟ್ಟ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಹಾವೇರಿ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ
“ಎಲ್ಲ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಮಾಡಲಾಗಿದ್ದು, ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು” ಎಂದು ಎಚ್ಚರಿಸಿದರು.
ವೆಂಕಟೇಶ್, ವಿಜಯ್ ಕುಮಾರ್, ಕೃಷ್ಣದಾಸ್, ಮಲ್ಲೇಶ್, ಈರಪ್ಪ, ಮಂಜುನಾಥ್, ಲೋಕೇಶ್, ರಮೇಶ್ ಸೇರಿದಂತೆ ಇತರರು ಇದ್ದರು