ಹಾಸನ | ವಿಷ ಸೇವಿಸಿ ವ್ಯಕ್ತಿ ಸಾವು

Date:

ಚೀಟಿ ಹಣ ಕೊಡದೆ ಸತಾಯಿಸಿದ್ದಲ್ಲದೆ ವಾಪಾಸ್ ಹಣ ಕೊಡುವಂತೆ ಬೆದರಿಸಿ ನಿಂದಿಸಿದ್ದಕ್ಕೆ ಮನನೊಂದ ವ್ಯಕ್ತಿ ವಿಷ ಸೇವಿಸಿ ಸಾವಿಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.

- Advertisement -

ಮೃತ ವ್ಯಕ್ತಿ ರಾಮು (38), ಚನ್ನರಾಯಪಟ್ಟಣದಲ್ಲಿ ಹಲವು ವರ್ಷಗಳಿಂದ ವ್ಯಾಪಾರ ಮಾಡಿಕೊಂಡಿದ್ದ ರಾಮು ಪರಿಚಯಸ್ಥರಾದ ಗಿರೀಶ್, ರಾಣಿ ಮತ್ತು ಪುಷ್ಪ ಎಂಬುವವರೊಟ್ಟಿಗೆ ಆರ್ಥಿಕ ವ್ಯವಹಾರ ಇಟ್ಟುಕೊಂಡಿ ದ್ದರು. 15 ಲಕ್ಷ ರೂ. ಮೊತ್ತದ ಚೀಟಿ ನಡೆಸುತ್ತಿದ್ದರು. ಎರಡೂವರೆ ವರ್ಷಗಳಿಂದ ಚೀಟಿ ಹಣವನ್ನು ರಾಮು ನಗದು ಹಾಗು ಯುಪಿಐ ಮೂಲಕ ನಿಯಮಿತವಾಗಿ ಪಾವತಿಸುತ್ತಿದ್ದರು. 2025ರ ನ. 25 ರಂದು 15 ಲಕ್ಷ ರೂ. ಚೀಟಿಯನ್ನು 2.70 ಲಕ್ಷ ರೂ.ಗೆ ಕೂಗಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅದರಲ್ಲಿ 1 ಲಕ್ಷ ರೂ.ಗಳನ್ನು ನಗದು ರೂಪದಲ್ಲಿ ಖಾಲಿ ಚೆಕ್‌ ಹಾಗು ಬಾಂಡ್ ಪೇಪರ್‌ಗೆ ಸಹಿ ಹಾಕಿಸಿಕೊಂಡು ನ. 25ರಂದು ಕೊಟ್ಟಿದ್ದ ಗಿರೀಶ್, ಪುಷ್ಪ ಹಾಗು ರಾಣಿ ಅವರು ಉಳಿದ 1.70 ಲಕ್ಷ ರೂ. ಕೊಟ್ಟಿರಲಿಲ್ಲ. ಅದನ್ನು ಕೇಳಲು ಹೋದಾಗ ನೀವೇ 10 ಲಕ್ಷ ರೂ. ಕೊಡಬೇಕೆಂದು ಎಚ್ಚರಿಕೆ ನೀಡಿದ್ದರು. 20 ದಿನಗಳ ಹಿಂದೆ ರಾಮು ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಬಂದಿದ್ದ ಅವರು ಗಲಾಟೆ ಮಾಡಿ ಬ್ಯಾಂಕ್‌ನಲ್ಲಿ ಅಡವಿಟ್ಟಿರುವ ಒಡವೆ ಚೀಟಿಯನ್ನು ಕಿತ್ತುಕೊಂಡು, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಣ ಕೊಡದಿದ್ದರೆ ಕೊಲೆ ಮಾಡುತ್ತೇವೆಂದು ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಇದನ್ನೂ ಓದಿದ್ದೀರಾ?ಹಾಸನ | ಪೊಲೀಸ್ ಇಲಾಖೆಗೆ ಬೊಲೇರೊ ವಾಹನ ವಿತರಣೆ; ಹೆಚ್. ಎಸ್ ಸ್ವರೂಪ್ ಪ್ರಕಾಶ್

ಈ ಘಟನೆ ಕುರಿತು ಹೊಳೆನರಸೀಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...