ಬರಪೀಡಿತ ತಾಲೂಕುಗಳಲ್ಲಿ ಬೇಸಿಗೆ ರಜೆಯಲ್ಲೂ ಮಕ್ಕಳಿಗೆ ಬಿಸಿಯೂಟ ನೀಡಬೇಕೆಂಬ ಇಲಾಖೆಯ ಸೂಚನೆಯಂತೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನಲ್ಲಿ 262 ಬಿಸಿಯೂಟ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ದೇವರಾಜ್ ತಿಳಿಸಿದ್ದಾರೆ.
“ಏಪ್ರಿಲ್ 11 ರಿಂದ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಭಾನುವಾರ ಹೊರತುಪಡಿಸಿ 41 ದಿನಗಳ ಕಾಲ ಬಿಸಿಯೂಟ ನೀಡಲಾಗುವುದು. ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ನಿಂಗಯ್ಯ ಅವರನ್ನು ತಾಲೂಕು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದ್ದು, ಇಸಿಒಗಳು ಹೋಬಳಿ ಮೇಲ್ವಿಚಾರಕರಾಗಿ, ಸಿಆರ್‌ಪಿಗಳು ಕ್ಲಸ್ಟರ್ ನೋಡಲ್ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸುವರು” ಎಂದು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಮನಗರ | ನಾಮಪತ್ರ ವಾಪಸ್ ಪಡೆದ ಬಿಎಸ್‌ಪಿ ಅಭ್ಯರ್ಥಿ; ಪಕ್ಷದಿಂದ ಉಚ್ಛಾಟನೆ
“62 ಶಾಲೆಗಳನ್ನು ಸಮೀಪದ ಬಿಸಿಯೂಟ ಕೇಂದ್ರಗಳಿಗೆ ಟ್ಯಾಗ್ ಮಾಡಲಾಗಿದೆ. 385 ಅಡುಗೆ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದು 11,144 ಮಂದಿ ವಿದ್ಯಾರ್ಥಿಗಳು ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
