ಹಾಸನ | ಆಲೂರಿನ ಮನೆಯೊಂದರಲ್ಲಿ ನಿಗೂಢ ಸ್ಫೋಟ: ದಂಪತಿ ಗಂಭೀರ

Date:

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳೇಆಲೂರು ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದ ನಿಗೂಢ ಸ್ಫೋಟ ಪ್ರಕರಣದಲ್ಲಿ ದಂಪತಿ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಝೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

- Advertisement -

ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸುದರ್ಶನ್ ಆಚಾರ್(32) ಮತ್ತು ಅವರ ಪತ್ನಿ ಕಾವ್ಯ(27) ಗಾಯಗೊಂಡವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ತೀವ್ರ ಸ್ವರೂಪದ ಗಾಯಗಳಾಗಿದ್ದ ದಂಪತಿಯನ್ನು ಮೊದಲು ಹಾಸನದ ಹಿಮ್ಸ್ ಆಸ್ಪತ್ರೆಗೆ ಒಯ್ಯಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

ಘಟನೆ ಹಿನ್ನೆಲೆ

ಹಳೇ ಆಲೂರು ಗ್ರಾಮದ ದಂಪತಿಯ ಮನೆಯಲ್ಲಿ ರಾತ್ರಿ ಸುಮಾರು 9-10 ಗಂಟೆಯ ನಡುವೆ ಸ್ಫೋಟ ನಡೆದಿದ್ದು, ದಂಪತಿಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರಂಭದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿರಬಹುದೆಂದು ಊಹಿಸಲಾಗಿತ್ತು. ಆದರೆ ಸ್ಥಳದಲ್ಲಿ ಕಂಡುಬಂದ ಲೋಹದ ವಸ್ತುಗಳು(ಮೆಟಲ್ ಐಟಂಗಳು) ಮತ್ತು ಇತರ ಸಂದರ್ಭಗಳು ಇದನ್ನು ನಿಗೂಢಗೊಳಿಸಿವೆ. ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಸ್ಫೋಟದ ಶಬ್ದಕ್ಕೆ ಸುಮಾರು 4 ಕಿ.ಮೀ.ದೂರದ ಜನರು ಬೆಚ್ಚಿ ಬಿದ್ದಿದ್ದಾರೆ. ಮಹಿಳೆಯ ಎರಡು ಕಾಲುಗಳು ತುಂಡಾಗಿವೆ. ಅದೃಷ್ಟವಶಾತ್ ಅದೃಷ್ಟಾವಶಾತ್ ಮಗುವಿಗೆ ಪೆಟ್ಟು ಬಿದ್ದಿಲ್ಲ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಜೀತಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಬೆಂಬಲ ಬೆಲೆಯಡಿ ಭತ್ತ ಖರೀದಿಗೆ ಜಿಲ್ಲಾಡಳಿತ ಸಜ್ಜು; ಡಿಬಿಟಿ ಮೂಲಕ ನಗದು ಜಮಾಕ್ಕೆ ಕ್ರಮ

ಮಂಗಳವಾರ ಬೆಳಗ್ಗೆಯಿಂದ ಪೊಲೀಸರು ಸ್ಫೋಟದ ಬಗ್ಗೆ ಮಾಹಿತಿ ಕಲೆ ಹಾಕುವಲ್ಲಿ ತೊಡಗಿದ್ದಾರೆ. ಬಾಂಬ್ ಡಿಸ್ಪೋಸಲ್ ಸ್ಕ್ವಾಡನ್ನು ಸ್ಥಳಕ್ಕೆ ಕಳುಹಿಸಲಾಗಿದ್ದು, ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ. ದಂಪತಿಯ ಸಂಬಂಧಿಕ ಮೋಹನ್ ಎಂಬುವವರು ಆಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಇಂದು ಬೆಳಿಗ್ಗೆ ಸ್ಥಳೀಯ ಶಾಸಕ ಸಿಮೆಂಟ್‌ ಮಂಜು ಭೇಟಿ ನೀಡಿದ್ದು, ಸ್ಥಳೀಯರ ಮಾಹಿತಿಯ ಪ್ರಕಾರ ರಾತ್ರಿ 8:30ರ ಸುಮಾರಿಗೆ ಘಟನೆ ನಡೆದಿರುವುದಾಗಿ ತಿಳಿಸಿದ್ದಾರೆ.

“ಘಟನೆ ನಡೆದ ಮನೆಯ ಪಕ್ಕದಲ್ಲಿ ಯಾವುದೇ ಮನೆಗಳಿರದ ಪರಿಣಾಮ ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಒಂದುವೇಳೆ ಸುತ್ತಮುತ್ತಲೂ ಮನೆಗಳಿದ್ದಿದ್ದರೆ ಭಾರೀ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು. ಮನೆಯಲ್ಲಿದ್ದ ದಂಪತಿ ತೀವ್ರ ಸ್ವರೂಪದಲ್ಲಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್‌ ಮನೆಯಲ್ಲಿದ್ದ ಮಗುವಿಗೆ ಏನೂ ಆಗಿಲ್ಲ. ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪಡಿತರ ಅಕ್ಕಿ ವಾಹನ ಬಿಡುಗಡೆ ಆರೋಪ: ಆಳಂದ ಪಿಐ ಸೇರಿ ನಾಲ್ವರು ಅಮಾನತು

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ ಪ್ರಕರಣ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...